ಪಿಯುಸಿ: ಶೇ.85.66 ಅಂಕ ಪಡೆದ ಕಾರ್ಮಿಕ
Team Udayavani, May 12, 2017, 3:32 PM IST
ಹುಬ್ಬಳ್ಳಿ: ಸುಮಾರು 35 ವರ್ಷ ವಯೋಮಾನದ ಕಾರ್ಮಿಕರೊಬ್ಬರು ಕುಟುಂಬ ನಿರ್ವಹಣೆ ಜತೆಗೆ ದ್ವಿತೀಯ ಪಿಯುಸಿಯಲ್ಲಿ ಬಾಹ್ಯ ಅಭ್ಯರ್ಥಿಯಾಗಿ ಪರೀಕ್ಷೆ ಬರೆದು ಶೇ.85.66ರಷ್ಟು ಅಂಕ ಪಡೆದು ಉತ್ತೀರ್ಣರಾಗಿದ್ದಾರೆ. ಇಲ್ಲಿನ ಉಣಕಲ್ಲ ಸಿದ್ದರಾಮೇಶ್ವರ ನಗರದ ನಿವಾಸಿ ಕುಮಾರ ಮುಟಗಾರ 514 ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ಚಿಕ್ಕವನಿದ್ದಾಗಲೇ ತಂದೆ ತೀರಿಕೊಂಡಿದ್ದು ಓದು ಅರ್ಧಕ್ಕೆ ನಿಲ್ಲಿಸಬೇಕಾಯಿತು.
ಎಸ್‌ಎಸ್‌ಎಲ್ ಸಿವರೆಗೆ ಅಧ್ಯಯನ ಮಾಡಿದ್ದ ಕುಮಾರ ಅವರಿಗೆ ಓದುವ ತವಕ ಇದ್ದರೂ ಕುಟುಂಬ ನಿರ್ವಹಣೆ ಕಾರಣಕ್ಕೆ ಅನಿರ್ವಾಯವಾಗಿ ವ್ಯಾಸಂಗ ಮೊಟಕುಗೊಳಿಸಿದ್ದರು. ನಂತರದ ದಿನಗಳಲ್ಲಿ ತಾಯಿ ಹಾಗೂ ಪತ್ನಿ ರಮ್ಯಾ ಅವರ ಪ್ರೇರಣೆಯಿಂದ ಉಣಕಲ್ಲ ಸರಕಾರಿ ಕಾಲೇಜಿನಲ್ಲಿ ಬಾಹ್ಯ ಅಭ್ಯರ್ಥಿಯಾಗಿ ಪ್ರವೇಶ ಪಡೆದು ಓದು ಆರಂಭಿಸಿದ್ದರು.
ಕೂಲಿ ಮಾಡುತ್ತ ಅಧ್ಯಯನ ಮಾಡಿದ ಅವರು 2016-17ನೇ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ 514 ಅಂಕ ಪಡೆದಿದ್ದಾರೆ. ಓದುವ ತುಡಿತ ಹೊಂದಿರುವ ಕುಮಾರ ಮುಟಗಾರ ಅವರಿಗೆ ಇಬ್ಬರು ಮಕ್ಕಳಿದ್ದು, ಮುಂದೆ ಪದವಿ ಓದಿ ಏನಾದರೂ ಸಾಧನೆ ಮಾಡಬೇಕೆಂಬ ಮಹದಾಸೆ ಹೊಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ
By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್ ವೈ
MUST WATCH
ಹೊಸ ಸೇರ್ಪಡೆ
IAS Transfer: ಅಧಿಕಾರಿ ಸಿ. ಶಿಖಾ ಕೇಂದ್ರ ಸೇವೆಗೆ ನಿಯುಕ್ತಿ
Darshan ವಿರುದ್ಧ ಸುಪ್ರೀಂನಲ್ಲಿ ಮೇಲ್ಮನವಿ: ಬಿ. ದಯಾನಂದ್
T20; ಸಂಜು, ತಿಲಕ್ ಶತಕ ವೈಭವ: ದಕ್ಷಿಣ ಆಫ್ರಿಕಾದಲ್ಲಿ ಭಾರತ ಸರಣಿ ವಿಕ್ರಮ
Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್ ಅರ್ಜಿ ತಿರಸ್ಕೃತ
Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.