ಕ್ರಿಕೆಟ್‌ ಅಸೋಸಿಯೇಷ್‌ನ್‌ನಿಂದ ನೀರಾವರಿ ಧರಣಿ

Team Udayavani, May 12, 2017, 4:40 PM IST

Chittani-1.jpg

ಕೋಲಾರ: ನಗರದಲ್ಲಿ ನಡೆಯುತ್ತಿರುವ ನೀರಾವರಿ ಹೋರಾಟವು 334 ನೇ ದಿನ ಪೂರೈಸಿದ್ದು, ಜಿಲ್ಲಾ ಕ್ರಿಕೆಟ್‌ ಅಸೋಸಿಯೇಷನ್‌ ಧರಣಿಯನ್ನು ಮುಂದುವರೆಸಿದರು.  ಮುಖಂಡರಾದ ವಿ.ಮುನಿವೆಂಕಟೇಶಪ್ಪ ಮಾತನಾಡಿ, ಜಿಲ್ಲೆಯ ಜನಪ್ರತಿನಿಧಿಗಳು ತಮ್ಮ ಲಾಭದಾಯಕ ಕೆಲಸಗಳಲ್ಲಿ ನಿರತರಾಗಿದ್ದಾರೆ.

ಪ್ರತಿಯೊಂದು ಸರ್ಕಾರಿ ಕಚೇರಿಗಳಲ್ಲಿ ಸರ್ಕಾರಿ ಅಧಿಕಾರಿಗಳನ್ನು ತಮ್ಮ ಕೆಲಸಗಳಿಗೆ ಹಾಗೂ ಅಧಿಕಾರದ ಅನುಕೂಲಕ್ಕಾಗಿ ತಮ್ಮ ಬೆಂಬಲಿಗರ ಕೆಲಸಗಳನ್ನು ಮಾಡಿಸುತ್ತಾ ಸಾರ್ವಜನಿಕರಿಗೆ ಒಂದು ಸಣ್ಣ ಕೆಲಸವಾಗಬೇಕಾದರೂ ಸಹ ತಿಂಗಳು ಕಟ್ಟಲೆ ಅಲೆದಾಡಿಸುತ್ತಾರೆ. ಈ ನಿಟ್ಟಿನಲ್ಲಿ ಜನತೆಯು ವೋಟನ್ನು ಹಾಕಿ ಗೆಲ್ಲಿಸಿದ ಪರಿಣಾಮ ಈ ಪರಿಸ್ಥಿತಿ ಬಂದೊದಗಿದೆ. ಪ್ರತಿನಿತ್ಯವೂ ನೀರಿಗಾಗಿ ಬೀದಿಗಳಲ್ಲಿ ನೀರಿನ ಕೊಡಗಳನ್ನು ಹಿಡಿದು ಮಹಿಳೆಯರು ಎಲ್ಲಿ ನೀರುಬರುತ್ತದೆಯೋ ಎಂದು ಕಾದುನೋಡುವ ಪರಿಸ್ಥಿತಿ ಉಂಟಾಗಿದೆ ಎಂದು ವಿಷಾದಿಸಿದರು.

ಹೋರಾಟಕ್ಕಿಲ್ಲ ಕಿಮ್ಮತ್ತು: ಸಂಚಾಲಕ ಡಾ.ರಮೇಶ್‌ ಮಾತನಾಡಿ, ಜಿಲ್ಲೆಗೆ ಶಾಶ್ವತ ನದಿ ನೀರನ್ನು ಹರಿಸುವ ಸ್ಪಷ್ಠ ತೀರ್ಮಾನಗಳನ್ನು ಸರ್ಕಾರವಾಗಲಿ ಜಿಲ್ಲೆಯ ಜನಪ್ರತಿನಿಧಿಗಳಾಗಲಿ ಜನರಿಗೆ ತಿಳಿಸದೆ ಮೂರ್ಖರಾಗಿ ಆಡಳಿತ ನಡೆಸುತ್ತಿದ್ದಾರೆ. ಸುಮಾರು 30 ವರ್ಷಗಳಿಂದಲೂ ಶಾಶ್ವತ ನೀರಾವರಿಗಾಗಿ ಹೋರಾಟಗಳು ನಡೆದರೂ ಕೇವಲ ಯೋಜನೆಗಳನ್ನು ಘೋಷಣೆ ಮಾಡಿ ಅನುಷ್ಠಾನಗೊಳಿಸದೆ ಈತನಕ ಯಾಮಾರಿಸಿಕೊಂಡು ಬಂದಿದ್ದಾರೆ.

ಈಗಲೂ ಸಹ ಎತ್ತಿನಹೊಳೆ ಯೋಜನೆಯು ಕೋಲಾರ ಜಿಲ್ಲೆಯ ತನಕ ಹರಿದು ಬರುವುದು ಅನುಮಾನವಾಗಿದೆ. ಆದರೂ ಸರ್ಕಾರ ಮತ್ತು ಜನಪ್ರತಿನಿಧಿಗಳು ಸುಳ್ಳು ಆಶ್ವಾಸನೆಗಳನ್ನು ನೀಡುತ್ತಾ ಕಾಲಹರಣ ಮಾಡುತ್ತಿದ್ದಾರೆಂದು ಆರೋಪಿಸಿದರು. ಸಂಚಾಲಕ ನಗರಸಭಾ ಸದಸ್ಯರು ಮಾತನಾಡಿ, ಒಂದು ವರ್ಷದ ಹಿಂದೆ ಮುಖ್ಯಮಂತ್ರಿಗಳು ಕೃಷ್ಣಾದಲ್ಲಿ ಹೋರಾಟಗಾರರು ಜಿಲ್ಲೆಯ ಜನಪ್ರತಿನಿಧಿಗಳ ಸಮ್ಮುಖದಲ್ಲಿ ಎತ್ತಿನಹೊಳೆ ಯೋಜನೆಯಲ್ಲಿ

-ನಿರ್ಧಿಷ್ಠವಾದ ನೀರಿನ ಲಭ್ಯತೆ ಇಲ್ಲವೆಂದು ಸಾಭೀತುಪಡಿಸಿದಾಗ ಅಂದಿನ ಸಭೆಯಲ್ಲಿ ತಜ್ಞರ ಸಮಿತಿಯನ್ನು ರಚಿಸಿ ಸಮುದ್ರಕ್ಕೆ ವ್ಯರ್ಥವಾಗಿ ಹರಿದು ಹೋಗುವ ಬೇರೆ ಬೇರೆ ನದಿ ಮೂಲಗಳನ್ನು ತಿರುಗಿಸುವ ಸಮಿತಿಯ ವರದಿಯನ್ನು ಪಡೆದು ಅನುಷ್ಠಾನಗೊಳಿಸುವುದಾಗಿ ತಿಳಿಸಿ ಈತನಕ ಕೇವಲ ಒಂದು ಸಭೆಯನ್ನು ಕಾಟಾಚಾರಕ್ಕೆ ಮಾಡಿದ್ದು, ಕೊಟ್ಟ ಮಾತನ್ನು ನೆರವೇರಿಸದೆ ವಚನ ಭ್ರಷ್ಠರಾಗಿದ್ದಾರೆ ಗಂಭೀರ ಆರೋಪ ಮಾಡಿದ್ದಾರೆ.

ನೀರಾವರಿ ಸಂಚಾಲಕರಾದ ಕುರುಬರಪೇಟೆ ವೆಂಕಟೇಶ್‌, ಅಹಿಂದ ಮಂಜುನಾಥ್‌, ವಿ.ಕೆ. ರಾಜೇಶ್‌, ಗಾಂಧಿನಗರ ಮುಖಂಡರಾದ ಶ್ರೀನಿವಾಸ್‌, ಶ್ರೀರಂಗಣ್ಣ, ಆಂಜನೇಯರೆಡ್ಡಿ, ಆನಂದರೆಡ್ಡಿ, ರುದ್ರೇಶ್‌, ಉಮೇಶ್‌, ರಮೇಶ್‌, ಉದಯ್‌, ಶ್ರೀನಾಥ್‌, ಅಮರ್‌, ಮಂಜು, ನಾಗೇಂದ್ರ, ವಿಶ್ವನಾಥ್‌, ಶಾಂತ ಕುಮಾರ್‌ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

purushotham-bilimale

Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolara-RSS

Kolara: ಹೈಕೋರ್ಟ್‌ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್‌ ಪಥಸಂಚಲನ

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Bannana-Leaf

Kolara: ಏಲಕ್ಕಿ ಬಾಳೆಕಾಯಿ ಬೆಲೆ ಕುಸಿತ: 3 ಎಕರೆ ಬೆಳೆ ಕಡಿದು ಹಾಕಿದ ರೈತ

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.