ಎಸೆಸೆಲ್ಸಿ ಫಲಿತಾಂಶ: ಉಡುಪಿ ಪ್ರಥಮ, ದ.ಕ. ದ್ವಿತೀಯ
Team Udayavani, May 13, 2017, 1:41 AM IST
ಬೆಂಗಳೂರು: ಎಸೆಸೆಲ್ಸಿ ಫಲಿತಾಂಶ ಪ್ರಕಟಗೊಂಡಿದ್ದು, ಗ್ರಾಮೀಣ ವಿದ್ಯಾರ್ಥಿಗಳು, ಬಾಲಕಿಯರು ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ. ದ್ವಿತೀಯ ಪಿಯುಸಿ ಫಲಿತಾಂಶದಂತೆ ಎಸೆಸೆಲ್ಸಿಯಲ್ಲೂ ಬಹಳಷ್ಟು ಕುಸಿತ ಕಂಡಿದ್ದು, ಕಳೆದ 7 ವರ್ಷದಲ್ಲೇ ಅತ್ಯಂತ ಕಳಪೆ ಫಲಿತಾಂಶ ಇದಾಗಿದೆ. ಪರೀಕ್ಷೆ ಬರೆದ 8,56,286 ವಿದ್ಯಾರ್ಥಿಗಳಲ್ಲಿ ಶೇ.74.08ರಷ್ಟು ಬಾಲಕಿಯರು, ಶೇ.62.42ರಷ್ಟು ಬಾಲಕರು ತೇರ್ಗಡೆಯಾಗಿದ್ದು, ಒಟ್ಟಾರೆ ಶೇ.67.87ರಷ್ಟು ಫಲಿತಾಂಶ ಬಂದಿದೆ. ನಗರ ಪ್ರದೇಶದ ಶೇ. 72.18ರಷ್ಟು ಹಾಗೂ ಗ್ರಾಮೀಣ ಪ್ರದೇಶದ ಶೇ.74.12ರಷ್ಟು ವಿದ್ಯಾರ್ಥಿಗಳು ಪಾಸಾಗಿದ್ದಾರೆ. ನಗರ ಪ್ರದೇಶದ ವಿದ್ಯಾರ್ಥಿಗಳಿಗೆ ಹೋಲಿಸಿದರೆ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಸಾಧನೆ ಮೆಚ್ಚುವಂತಿದೆ.
ಕನ್ನಡ ಮಾಧ್ಯಮದಲ್ಲಿ ಪರೀಕ್ಷೆ ಬರೆದ 5,34,339 ವಿದ್ಯಾರ್ಥಿಗಳಲ್ಲಿ ಶೇ.62.47ರಷ್ಟು, ಇಂಗ್ಲಿಷ್‌ನಲ್ಲಿ ಪರೀಕ್ಷೆ ಬರೆದ 2,80,925 ವಿದ್ಯಾರ್ಥಿ ಗಳಲ್ಲಿ ಶೇ.78.94ರಷ್ಟು ವಿದ್ಯಾರ್ಥಿ ಗಳು ತೇರ್ಗಡೆಯಾಗಿದ್ದು, ಇಂಗ್ಲಿಷ್ ಮಾಧ್ಯಮ ವಿದ್ಯಾರ್ಥಿಗಳೇ ಇಲ್ಲಿಯೂ ಪಾರಮ್ಯ ಮೆರೆದಿದ್ದಾರೆ. ಬೆಂಗಳೂರಿನ ಸುಮಂತ್ ಹೆಗ್ಡೆ, ದಕ್ಷಿಣ ಕನ್ನಡದ ಎಚ್. ಪೂರ್ಣಾನಂದ ಹಾಗೂ ಬಾಗಲಕೋಟೆಯ ಪಲ್ಲವಿ ಶಿರಹಟ್ಟಿ 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನದಲ್ಲಿದ್ದಾರೆ. ಮಂಗಳೂರಿನ ಜಯನಿ ಆರ್.ನಾಥ್, ಹಾನಸದ ವಚನ ರಾಘವೇಂದ್ರ. ಎನ್, ಯಲ್ಲಾಪುರದ ಹೇಮಂತ್ ಲಕ್ಷ್ಮೀನಾರಾಯಣ್ ಶಾಸ್ತ್ರಿ, ಕುಮಟದ ನಂದಿನಿ ಎಂ. ನಾಯ್ಕ, ಈಶ್ವರ್ ಸೀತಾರಾಮ ಜೋಶಿ ಮತ್ತು ಕಲಬುರಗಿಯ ಸೋನಾಲಿ ಬೀರಾದರ್ ಅವರು 625ಕ್ಕೆ 624 ಅಂಕ ಪಡೆದ ಎರಡನೇ ಸ್ಥಾನದಲ್ಲಿದ್ದಾರೆ.
625ಕ್ಕೆ 623 ಅಂಕ ಪಡೆದ 11 ವಿದ್ಯಾರ್ಥಿಗಳಿದ್ದಾರೆ. 623ಕ್ಕಿಂತ ಅಧಿಕ ಅಂಕ ಪಡೆದ 20 ವಿದ್ಯಾರ್ಥಿಗಳಲ್ಲಿ 18 ಮಂದಿ ಇಂಗ್ಲಿಷ್ ಮಾಧ್ಯಮ ಹಾಗೂ ಇಬ್ಬರು ಕನ್ನಡ ಮಾಧ್ಯಮದವರಾಗಿದ್ದಾರೆ. ಅವರಿಬ್ಬರೂ 625ಕ್ಕೆ 625 ಪಡೆದಿದ್ದಾರೆ. ಗಮನಾರ್ಹ ಅಂಶ ಎಂದರೆ, ಉನ್ನತ ಶ್ರೇಣಿಯಲ್ಲಿ ಪಾಸಾ ದವರಲ್ಲಿ ಬಾಲಕರೇ ಹೆಚ್ಚಿದ್ದಾರೆ. ಕಳೆದ ವರ್ಷ ಮೊದಲ ಸ್ಥಾನದಲ್ಲಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆ ಈಸಲ 10ಕ್ಕೆ ಇಳಿದಿದೆ. ಫಲಿತಾಂಶ ಘೋಷಿಸಿ ಮಾತನಾಡಿದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್, ಉಡುಪಿ, ದಕ್ಷಿಣ ಕನ್ನಡ ಹಾಗೂ ಚಿಕ್ಕೋಡಿ ಕ್ರಮವಾಗಿ ಮೊದಲ 3 ಸ್ಥಾನ ಪಡೆದಿದ್ದು, ಎಸೆಸೆಲ್ಸಿಯಲ್ಲೂ ಬೀದರ್ ಕೊನೆಯ ಸ್ಥಾನಕ್ಕೆ ಜಾರಿದೆ. 2017ರಲ್ಲಿ ಎಸೆಸೆಲ್ಸಿ ಪರೀಕ್ಷೆ ಬರೆದ 8,56,286 ವಿದ್ಯಾರ್ಥಿಗಳಲ್ಲಿ 5,81,134 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 2,75,152 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ.
ಶೈಕ್ಷಣಿಕ ಅಭಿವೃದ್ಧಿಗೆ ಕ್ರಮ
ಪಿಯುಸಿ ಹಾಗೂ ಎಸೆಸೆಲ್ಸಿಯಲ್ಲಿ ಬೀದರ್ ಕೊನೆಯ ಸ್ಥಾನ ಪಡೆದಿದೆ. ಬೀದರ್ ಜಿಲ್ಲೆಯಲ್ಲಿ ಶೈಕ್ಷಣಿಕ ಪ್ರಗತಿ ಸಹಿತ ಕಳಪೆ ಸಾಧನೆಯ ಜಿಲ್ಲೆಗಳ ಶೈಕ್ಷಣಿಕ ಅಭಿವೃದ್ಧಿಗೆ ವಿಷಯವಾರು, ಭಾಷಾವಾರು ಪರಿಶೀಲನೆ ನಡೆಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ತಿಳಿಸಿದ್ದಾರೆ. ಫಲಿತಾಂಶ ಪ್ರಕಟಿಸಿದ ಅನಂತರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಈ ವರ್ಷ ರಾಷ್ಟ್ರೀಯ ನೀತಿಯಿಂದ ಗ್ರೇಸ್ ಮಾರ್ಕ್ ನೀಡಿಲ್ಲ ಹಾಗೂ ಸ್ಕೀಮ್ ಆಫ್ ಇವ್ಯಾಲ್ಯೂವೇಷನ್ ತಂದಿದ್ದರಿಂದ ವಿದ್ಯಾರ್ಥಿಗಳ ಶ್ರಮದ ನೈಜ ಫಲಿತಾಂಶ ಬಂದಿದೆ ಎಂದರು.
ಪ್ರಾಥಮಿಕ ಶಾಲೆಯಲ್ಲಿ 14,729 ಶಿಕ್ಷಕರ ಹುದ್ದೆ ಖಾಲಿಯಿದ್ದು, ಸದ್ಯ ಎಲ್ಲ ಹುದ್ದೆಗೂ ಅತಿಥಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳುತ್ತಿದ್ದೇವೆ. 10 ಸಾವಿರ ಶಿಕ್ಷಕರ ನೇಮಕಾತಿಗೆ ವೃಂದ ಮತ್ತು ನೇಮಕಾತಿ ನಿಯಮದಲ್ಲಿ ತಿದ್ದುಪಡಿ ತಂದು ತತ್‌ಕ್ಷಣದಿಂದಲೇ ಕಾರ್ಯಪ್ರವೃತ್ತರಾಗಲಿದ್ದೇವೆ, ಹಾಗೆಯೇ 1689 ಪ್ರೌಢಶಾಲಾ ಶಿಕ್ಷಕರ ನೇಮ ಕಾತಿಗೂ ಶೀಘ್ರವೇ ಚಾಲನೆ ಸಿಗಲಿದೆ. ಶಿಕ್ಷಣ ಗುಣಮಟ್ಟ ಸುಧಾರಣೆಗೆ ಬೇಕಾದ ಯೋಜನೆ ರೂಪಿಸಿ, ಅನುಷ್ಠಾನ ಮಾಡಲಿದ್ದೇವೆ ಎಂದರು. 2012ರ ಆರ್‌ಎಂಎಸ್‌ಎ ಅನುದಾನದಲ್ಲಿ 72 ಆದರ್ಶ ಶಾಲೆಗಳನ್ನು ರಾಜ್ಯದಲ್ಲಿ ತೆರೆದಿದ್ದೇವೆ ಎಂದರು.
ಪೂರಕ ಪರೀಕ್ಷೆ
ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಜೂನ್ 15ರಿಂದ 22ರ ತನಕ ಪೂರಕ ಪರೀಕ್ಷೆ ನಡೆಯಲಿದ್ದು, ಮೇ 22 ಅರ್ಜಿ ಸಲ್ಲಿಕೆಗೆ ಕಡೇ ದಿನ. ಹಾಗೆಯೇ ಉತ್ತರ ಪತ್ರಿಕೆಯ ಛಾಯಾಪ್ರತಿ, ಮರು ಎಣಿಕೆ, ಮರು ಮೌಲ್ಯಮಾಪನಕ್ಕೂ ಅವಕಾಶ ಇದ್ದು, ಮೇ 22ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ತನ್ವೀರ್ ಸೇಠ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.