ಜಮೀನು ಕೊಟ್ಟವರಿಗೆ ನಿವೇಶನ

Team Udayavani, May 13, 2017, 11:21 AM IST

siddu-gerorge.jpg

ಬೆಂಗಳೂರು: ಅರ್ಕಾವತಿ ಬಡಾವಣೆ ರಚನೆಗೆ ಜಮೀನು ಬಿಟ್ಟುಕೊಟ್ಟವರಿಗೆ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಅದೇ ಅಳತೆಯ, ಅದೇ ದರದಲ್ಲಿ ನಿವೇಶನ ನೀಡಲು ಮುಖ್ಯಮಂತ್ರಿಗಳ ಅಧ್ಯಕ್ಷತೆಯ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಬಿಡಿಎ ಸದಸ್ಯರಾದ ಶಾಸಕ ಎಸ್‌.ಟಿ.ಸೋಮಶೇಖರ್‌ ತಿಳಿಸಿದರು.

ಗೃಹ ಕಚೇರಿ “ಕೃಷ್ಣಾ’ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಬಿಡಿಎಗೆ ಸಂಬಂಧಪಟ್ಟ ವಿಚಾರಗಳ ಕುರಿತ ಸಭೆ ಬಳಿಕ ಪ್ರತಿಕ್ರಿಯಿಸಿದ ಅವರು, ಕೆಂಪೇಗೌಡ ಬಡಾವಣೆಗೆ ವಿದ್ಯುತ್‌, ನೀರು ಹಾಗೂ ಒಳಚರಂಡಿ ಸೇರಿದಂತೆ ಸೌಲಭ್ಯ ಕಲ್ಪಿಸುವ ವಿಚಾರವಾಗಿ ಇದೇ 23ರಂದು ನಡೆಯುವ ಬಿಡಿಎ ಮಂಡಳಿ ಸಭೆಯಲ್ಲಿ ಪ್ರಸ್ತಾಪವಾಗಲಿದೆ ಎಂದು ಹೇಳಿದರು.

ಕೆಂಪೇಗೌಡ ಬಡಾವಣೆಗೆ ಸುಗಮ ಸಂಪರ್ಕ ವ್ಯವಸ್ಥೆ ಕಲ್ಪಿಸಲು ಮೈಸೂರು ರಸ್ತೆಯ ರಾಜರಾಜೇಶ್ವರಿ ಆಸ್ಪತ್ರೆ ಕಡೆಯಿಂದ ಮಾಗಡಿ ರಸ್ತೆಯ ಸೀಗೇಹಳ್ಳಿವರೆಗೆ ಸುಮಾರು 10.5 ಕಿ.ಮೀ. ಉದ್ದದ 100 ಅಡಿ ಅಗಲದ ರಸ್ತೆ ನಿರ್ಮಾಣಕ್ಕೂ ಮುಖ್ಯಮಂತ್ರಿಗಳು ಒಪ್ಪಿಗೆ ನೀಡಿದ್ದಾರೆ. ಈ ರಸ್ತೆ ನಿರ್ಮಾಣಕ್ಕೆ 321 ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಬೇಕಾಗುತ್ತದೆ. ಒಂದು ಎಕರೆಗೆ ಸುಮಾರು ಮೂರು ಕೋಟಿ ರೂ.ವರೆಗೆ ಪರಿಹಾರ ಸಿಗಲಿದೆ. ಕಡಿಮೆ ಗುಂಟೆಯ ಭೂಮಿ ಬಿಟ್ಟುಕೊಟ್ಟವರಿಗೆ ಹಣ ರೂಪದಲ್ಲಿ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು.

50:50ರ ಅನುಪಾತ ನಿಯಮಕ್ಕೆ ತಿದ್ದುಪಡಿ: ಬಡಾವಣೆ ನಿರ್ಮಾಣಕ್ಕಾಗಿ ಭೂಮಿಬಿಟ್ಟುಕೊಟ್ಟವರಿಗೆ ಅಭಿವೃದ್ಧಿಪಡಿಸಿದ ಶೇ.60ರಷ್ಟು ನಿವೇಶನ ಹಂಚಿಕೆ ಮಾಡಿದರೆ ಉಳಿದ ಶೇ.40ರಷ್ಟು ನಿವೇಶನಗಳನ್ನು ಬಿಡಿಎ ಅರ್ಜಿದಾರರಿಗೆ ಹಂಚಿಕೆ ಮಾಡಲಾಗುತ್ತದೆ. ಆದರೆ ಈ ರಸ್ತೆ ನಿರ್ಮಾಣಕ್ಕೆ ಭೂಮಿ ಬಿಟ್ಟುಕೊಟ್ಟವರಿಗೆ ಸೂಕ್ತ ಪರಿಹಾರ ನೀಡುವ ಸಲುವಾಗಿ ಈ ನಿರ್ದಿಷ್ಟ ಯೋಜನೆಗಷ್ಟೇ ಅನ್ವಯವಾಗುವಂತೆ ನಿವೇಶನ ಹಂಚಿಕೆ ಪ್ರಮಾಣವನ್ನು 50:50ರ ಅನುಪಾತದಲ್ಲಿ ಹಂಚಿಕೆ ಮಾಡಲು ನಿರ್ಧರಿಸಲಾಗಿದೆ. ಇದಕ್ಕೆ ಮುಖ್ಯಮಂತ್ರಿಗಳು ಒಪ್ಪಿದ್ದಾರೆ. ಹಾಗಾಗಿ ಇದೇ 23ರಂದು ನಡೆಯುವ ಮಂಡಳಿ ಸಭೆಯಲ್ಲಿ ನಿಯಮಕ್ಕೆ ಸೂಕ್ತ ತಿದ್ದುಪಡಿ ತರಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಮೈಸೂರುವರೆಗೆ ಅಷ್ಟಪಥ: ಮಾಗಡಿ ರಸ್ತೆಯ “ನೈಸ್‌’ ರಸ್ತೆ ಬಳಿಯಿಂದ ಮಾಗಡಿ ಮಾರ್ಗವಾಗಿ ಕುಣಿಗಲ್‌ವರೆಗೆ ನಾಲ್ಕು ಪಥದ ರಸ್ತೆ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ. ಕೇಂದ್ರ ಸರ್ಕಾರದ ಯೋಜನೆಯಡಿ ಕುಂಬಳಗೋಡಿನಿಂದ ಮೈಸೂರು ವರೆಗೆ ಅಷ್ಟಪಥದ ಹೆದ್ದಾರಿ ನಿರ್ಮಾಣಕ್ಕೆ ಸರ್ಕಾರ ನಿರ್ಧರಿಸಿದೆ. ಒಟ್ಟಾರೆ ಈ ಭಾಗಕ್ಕೆ ಸೂಕ್ತ ಸಂಪರ್ಕ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ವಿಕಲಚೇತನೆಯ ಅಳಲು ಆಲಿಸಿದ ಸಿಎಂ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕೃತ ನಿವಾಸ “ಕಾವೇರಿ’ಯಿಂದ ಗೃಹ ಕಚೇರಿಗೆ ಶುಕ್ರವಾರ ಬೆಳಗ್ಗೆ ತೆರಳುವಾಗ ಜನರ ಅಹವಾಲು ಸ್ವೀಕರಿಸಿದರು. ಈ ವೇಳೆ ದೂರದಲ್ಲಿದ್ದ ವಿಕಲ ಚೇತನ ಮಹಿಳೆಯ ಕಂಡ ಸಿಎಂ ಅವರ ಬಳಿ ತೆರಳಿದರು. ಅಗ್ರಹಾರ ದಾಸರಳ್ಳಿಯ ಕಮಲಮ್ಮ, “ಈವರೆಗೆ ವೆಂಕಟರಮಣ ದೇವಸ್ಥಾನ ಆವರಣ ದಲ್ಲಿ ನೆಲೆಸಿದ್ದೆ. ನವೀಕರಣ ಹಿನ್ನೆಲೆಯಲ್ಲಿ ನೆಲೆ ಇಲ್ಲದಂತಾಗಿದೆ. ತಮಗೆ ಎಸ್ಸೆಸ್ಸೆಲ್ಸಿ ಪೂರ್ಣ ಗೊಂಡಿದ್ದು ಯಾವುದಾದರೂ ಉದ್ಯೋಗ ನೀಡಿದರೆ ಜೀವನ ನಡೆಸಲು ಅನುಕೂಲವಾ ಗಲಿದೆ’ ಎಂದು ಮನವಿ ಮಾಡಿದರು.

ಟಾಪ್ ನ್ಯೂಸ್

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

156

Nikhil Kumarswamy: ಸೋತ ನಿಖಿಲ್‌ಗೆ ಜಿಲ್ಲೆಯ ಪಕ್ಷ ಸಂಘಟನೆ ಹೊಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.