ಸಮಿತಿ ವರದಿ ಆಧರಿಸಿ ಕುಲಪತಿ ನೇಮಕ ಬೇಡ: ಹೈಕೋರ್ಟ್ ಸೂಚನೆ
Team Udayavani, May 13, 2017, 11:34 AM IST
ಬೆಂಗಳೂರು: ರಾಜ್ಯಸರ್ಕಾರದ ಶೋಧನಾ ಸಮಿತಿ ತೀರ್ಮಾನ ಆಧರಿಸಿ ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಕುಲಪತಿಗಳನ್ನು ನೇಮಕ ಮಾಡಬಾರದು ಎಂದು ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.
ಬೆಂಗಳೂರು ವಿವಿ ಕುಲಪತಿ ಹುದ್ದೆಗೆ ಅರ್ಹರ ಹೆಸರನ್ನು ಶಿಫಾರಸು ಮಾಡಲು ರಚಿಸಲಾಗಿರುವ ಶೋಧನಾ ಸಮಿತಿ ಸದಸ್ಯರ ನೇಮಕದಲ್ಲಿ ರಾಜ್ಯ ಸರ್ಕಾರ ಸೂಕ್ತ ಮಾನದಂಡಗಳನ್ನು ಅನುಸರಿಸಿಲ್ಲ. ಅಲ್ಲದೆ ಶೋಧನಾ ಸಮಿತಿ ಸದಸ್ಯರು ಸೂಕ್ತ ಅರ್ಹತೆ ಗಳನ್ನೂ ಹೊಂದಿಲ್ಲ.
ಹೀಗಾಗಿ ಸಮಿತಿ ಸದಸ್ಯರ ತೀರ್ಮಾನ ಆಧರಿಸಿ ಕುಲಪತಿ ನೇಮಕ ಮಾಡದಂತೆ ಸರ್ಕಾರಕ್ಕೆ ನಿರ್ದೇಶಿಸುವಂತೆ ವಕೀಲ ಬಿ. ವಿ ಶ್ರೀನಿವಾಸ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಸ್ ದಿನೇಶ್ಕುಮಾರ್ ಅವರಿದ್ದ ಏಕಸದಸ್ಯ ಪೀಠ, ಶೋಧನಾ ಸಮಿತಿಯು ತನ್ನ ಶಿಫಾರಸಿನ ತೀರ್ಮಾನ ಕಾಯ್ದಿರಿಸಬೇಕು ಹಾಗೂ ಸಮಿತಿ ತೀರ್ಮಾನ ಆಧರಿಸಿ ಸರ್ಕಾರ ಕುಲಪತಿಗಳನ್ನು ನೇಮಕ ಮಾಡಬಾರದು ಎಂದು ಮಧ್ಯಂತರ ಆದೇಶ ನೀಡಿತು.
ಜೊತೆಗೆ ಪ್ರತಿವಾದಿಗಳಾಗಿರುವ ಉನ್ನತ ಶಿಕ್ಷಣ ಇಲಾಖೆ, ಶೋಧನಾ ಸಮಿತಿ ಸದಸ್ಯರಾದ ಡಾ.ಎಸ್.ಆರ್ ನಿರಂಜನ್ ಆರ್.ಸಿ ಕೌಡ್, ಎಸ್ .ಇಂದುಮತಿಯರಿಗೆ ನೋಟೀಸ್ ಜಾರಿಗೊಳಿಸಿ ಆಕ್ಷೇಪಣೆ ಸಲ್ಲಿಸುವಂತೆ ತಾಕೀತು ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.