ಅಂತಾರಾಷ್ಟ್ರೀಯ ನ್ಯಾಯಾಲಯದ ಮುಂದೆ ಪಾಕ್‌ನ “ಭಾರತ ವಾದ’
Team Udayavani, May 14, 2017, 11:35 AM IST
ಹೊಸದಿಲ್ಲಿ: ಭಾರತೀಯ ನೌಕಾಪಡೆಯ ಮಾಜಿ ಸಿಬ್ಬಂದಿ ಕುಲಭೂಷಣ್ ಜಾಧವ್‌ಗೆ ಮರಣ ದಂಡನೆ ವಿಧಿಸಿರುವ ತನ್ನ ನಿಲುವಿನಿಂದ ಯಾವುದೇ ಪರಿಸ್ಥಿತಿಯಲ್ಲೂ ಹಿಂದೆ ಸರಿಯದಿರಲು ನಿರ್ಧರಿಸಿರುವ ಪಾಕಿಸ್ಥಾನ, ಇದೀಗ ಅಂತಾರಾಷ್ಟ್ರೀಯ ನ್ಯಾಯಾಲಯದ ತೀರ್ಪಿನ ವಿರುದ್ಧ ಹೋರಾಡಲು ಸಜ್ಜಾಗಿದೆ!
ಅಂದಹಾಗೆ ಪಾಕಿಸ್ಥಾನಕ್ಕೆ ಅಂತಾರಾಷ್ಟ್ರೀಯ ನ್ಯಾಯಾಲಯದ (ಐಸಿಜೆ) ವಿರುದ್ಧವೇ ನಿಲ್ಲುವಷ್ಟು ಧೈರ್ಯ ಎಲ್ಲಿಂದ ಬಂತು ಎಂದು ಯೋಚಿಸುತ್ತಿದ್ದೀರಾ? ಆ ಧೈರ್ಯ ಬರಲು ಕಾರಣ ಭಾರತವೇ! ಹೌದು. 1999ರಲ್ಲಿ ಭಾರತ ಅಟ್ಲಾಂಟಿಕ್ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿತ್ತು. ಈ ಪ್ರಕರಣದಲ್ಲಿ ಐಸಿಜೆ ಭಾರತದ ವಿರುದ್ಧ ತೀರ್ಪು ನೀಡಿತ್ತು. ಆದರೆ ಈ ತೀರ್ಪನ್ನು ಧಿಕ್ಕರಿಸಿದ್ದ ಭಾರತ, ಕಾಮನ್‌ವೆಲ್ತ್ ರಾಷ್ಟ್ರಗಳ ನಡುವಿನ ವ್ಯಾಜ್ಯಗಳ ಕುರಿತು ತೀರ್ಪು ನೀಡುವ ಅಧಿಕಾರ ಅಂತಾರಾಷ್ಟ್ರೀಯ ನ್ಯಾಯಾಲಯಕ್ಕಿಲ್ಲ. ಇದು ಐಸಿಜೆ ಅಧಿಕಾರ ವ್ಯಾಪ್ತಿಗೆ ಬರುವುದಿಲ್ಲ ಎಂದು ಹೇಳಿತ್ತು.
ಅಂದು ಭಾರತ ಬಳಸಿದ “ಅಧಿಕಾರ ವ್ಯಾಪ್ತಿ’ಯ ಅಸ್ತ್ರವನ್ನೇ, ಈಗ ಜಾಧವ್ ಪ್ರಕರಣದಲ್ಲಿ ಬಳಸಲು ಪಾಕಿಸ್ಥಾನ ನಿರ್ಧರಿಸಿದೆ. ಕುಲಭೂಷಣ್ ಜಾಧವ್ ಪ್ರಕರಣ ಸಂಬಂಧ ಅಂತಾರಾಷ್ಟ್ರೀಯ ನ್ಯಾಯಾಲಯವು ಸೋಮವಾರ ಭಾರತದ ವಾದವನ್ನು ಆಲಿಸಲಿದೆ. ಈ ವೇಳೆ ಪಾಕಿಸ್ಥಾನ “ಅಧಿಕಾರ ವ್ಯಾಪ್ತಿಯ ಪ್ರಶ್ನೆ’ಯೆತ್ತುವ ಸಾಧ್ಯತೆಯಿದೆ. “ಜಾಧವ್‌ಗೆ ನೀಡಿರುವ ಮರಣದಂಡನೆಯನ್ನು ಸಮರ್ಥಿಸಿಕೊಳ್ಳುವುದು ಹೇಗೆ ಎಂಬ ಸಲಹೆಗಳನ್ನು ಈಗಾಗಲೇ ನಾವು ಪ್ರಧಾನಿಗಳ ಕಚೇರಿ ಹಾಗೂ ವಿದೇಶಾಂಗ ಇಲಾಖೆ ಕಚೇರಿ ಗಮನಕ್ಕೆ ತಂದಿದ್ದೇವೆ,’ ಎಂದು ಪಾಕಿಸ್ಥಾನದ ಅಟಾರ್ನಿ ಜನರಲ್ ಅಶ¤ರ್ ಔಸಫ್ ಹೇಳಿರುವುದಾಗಿ “ಡಾನ್’ ಪತ್ರಿಕೆ ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Udupi; ಸ್ವಯಂ ರಕ್ಷಣೆಗಾಗಿ ಕರಾಟೆ ಕಲೆಯ ಅಭ್ಯಾಸ ಇಂದಿನ ಅಗತ್ಯತೆ: ಪುತ್ತಿಗೆ ಶ್ರೀ
Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು
BBK11: ಬಿಗ್ ಬಾಸ್ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ
Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್ ಮದುವೆ?
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.