ಅರಣ್ಯಾಧಿಕಾರಿ, ರೈತರ ಮಧ್ಯೆ ಘರ್ಷಣೆ: ವಾಹನ ಜಖಂ
Team Udayavani, May 16, 2017, 10:47 AM IST
ಲಿಂಗಸುಗೂರು: ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ತೋಡಲಾಗಿದ್ದ ಗುಂಡಿಗಳ ವಿಚಾರವಾಗಿ ಅರಣ್ಯ ಅಧಿಕಾರಿಗಳು ಹಾಗೂ ರೈತರ ನಡುವೆ ಉಂಟಾದ ಘರ್ಷಣೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಗಾಯಗೊಂಡು, ಇಲಾಖೆಯ ವಾಹನ ಜಖಂಗೊಂಡ ಘಟನೆ ತಾಲೂಕಿನ ಗುಂತಗೋಳ ಗ್ರಾಮದ ಸಮೀಪದಲ್ಲಿ ನಡೆದಿದೆ.
ಗುಂತಗೋಳ ಸೀಮಾದ ಮೀಸಲು ಅರಣ್ಯ ಪ್ರದೇಶ ಸರ್ವೇ ನಂ. 69ರಲ್ಲಿ ರೈತರು ಭೂಮಿ ಒತ್ತುವರಿ ಮಾಡಿಕೊಂಡು ಅನಧಿಕೃತವಾಗಿ ಸಾಗುವಳಿ ಮಾಡುತ್ತಿದ್ದು, ಅದನ್ನು ತೆರವುಗೊಳಿಸಿ ರೈತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇಲಾಖೆಯಿಂದ ಸಸಿ ನೆಡಲು ಗುಂಡಿಗಳನ್ನು ತೋಡಲಾಗಿತ್ತು. ಇವುಗಳನ್ನು ಮುಚ್ಚಿದ್ದಾರೆಂಬ ಮಾಹಿತಿ ಮೇರೆಗೆ ಭಾನುವಾರ ಮಧ್ಯಾಹ್ನ ಅರಣ್ಯ ಇಲಾಖೆ ಸಿಬ್ಬಂದಿ ಮತ್ತೂಮ್ಮೆ ಗುಂಡಿ ತೋಡಿಸುವ ಕಾರ್ಯ ಕೈಗೊಂಡಿದ್ದರು. ಈ ವೇಳೆ
ಸ್ಥಳಕ್ಕೆ ಬಂದ ರೈತರಾದ ಹನುಮಂತ, ಸಂಗವ್ವ, ಮೀಯಾಖಾನ್, ಗೌಸ್ ಸಾಬ ಇತರರು ಅರಣ್ಯ ಇಲಾಖೆ ಸಿಬ್ಬಂದಿ ಬಾಬನ್, ಹುಚ್ಚಪ್ಪ ಕುಂಬಾರ, ಶರಣಪ್ಪ, ದೇಸಾಯಿ, ಮಲ್ಲಿಕಾರ್ಜುನ ಅವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ
ವಾಹನದ ಗಾಜು ಪುಡಿಪುಡಿ ಮಾಡಿದ್ದಾರೆ ಎಂದು ಉಪವಲಯ ಅರಣ್ಯಾಧಿಧಿಕಾರಿ ಸಂಗಮೇಶ ಪಾಟೀಲ ದೂರು ನೀಡಿದ್ದಾರೆ. ಲಿಂಗಸುಗೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.