ತ್ಯಾಜ್ಯ ಘಟಕದ ವಾಸನೆ ಪತ್ತೆಗೆ “ಮೀಟರ್‌’


Team Udayavani, May 16, 2017, 11:45 AM IST

meter-bbmp.jpg

ಬೆಂಗಳೂರು: ಬಿಬಿಎಂಪಿಯ ತ್ಯಾಜ್ಯ ಸಂಸ್ಕರಣೆ ಘಟಕಗಳಿಂದ ನಿಜವಾಗಿಯೂ ದುರ್ವಾಸನೆ ಹರಡುತ್ತಿದೆಯೇ ಎಂಬುದನ್ನು ಪತ್ತೆ ಮಾಡುವ ಉದ್ದೇಶದಿಂದ ಕೆಲ ಘಟಕಗಳಲ್ಲಿ ದುರ್ವಾಸನೆ ಪ್ರಮಾಣ ಪತ್ತೆ ಹಚ್ಚುವ “ಹಾಲಿ ಫ್ಯಾಕ್ಟರಿ ಮೀಟರ್‌’ ಅಳವಡಿಸಲು ಬಿಬಿಎಂಪಿ ಮುಂದಾಗಿದೆ. 

ನಗರದಲ್ಲಿನ ತ್ಯಾಜ್ಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಪಾಲಿಕೆಯಿಂದ ನಗರದಲ್ಲಿ ಏಳು ಭಾಗಗಳಲ್ಲಿ ತ್ಯಾಜ್ಯ ಸಂಸ್ಕರಣೆ ಘಟಕಗಳನ್ನು ನಿರ್ಮಾಣ ಮಾಡಲಾಗಿದೆ. ಆದರೆ, ಘಟಕಗಳಲ್ಲಿ ಸಮರ್ಪಕವಾಗಿ ತ್ಯಾಜ್ಯ ವಿಲೇವಾರಿ ಮಾಡದ ಕಾರಣ ಸುತ್ತಮುತ್ತಲಿನ ಭಾಗಗಳಲ್ಲಿ ದುರ್ವಾಸನೆ ಹರಡಿದ್ದು, ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುವಂತಾಗಿದೆ ಎಂದು ಆರೋಪಿಸಿ ಘಟಕಗಳನ್ನು ಸ್ಥಗಿತಗೊಳಿಸಬೇಕೆಂಬ ಒತ್ತಾಯಗಳು ಹೆಚ್ಚಾಗಿವೆ.

ಆದರ ಹಿನ್ನೆಲೆಯಲ್ಲಿ, ಘಟಕಗಳ ನಿರ್ವಹಣೆ ಜವಾಬ್ದಾರಿ ಯನ್ನು ಸಮರ್ಪಕವಾಗಿ ನೋಡಿಕೊಳ್ಳದ ಗುತ್ತಿಗೆದಾರರ ಗುತ್ತಿಗೆಯನ್ನು ರದ್ದು ಮಾಡಲಾಗಿದ್ದು, ಕೆಲ ಘಟಕಗಳನ್ನು ಹೊರತುಪಡಿಸಿ ಉಳಿದೆಲ್ಲ ಘಟಕಗಳಲ್ಲಿ ಪಾಲಿಕೆಯಿಂದಲೇ ವೈಜ್ಞಾನಿಕವಾಗಿ ಕಸ ವಿಲೇವಾರಿ ಮಾಡಲಾಗುತ್ತಿದೆ. ಆದರೂ, ದುರ್ವಾಸನೆ ಬಗೆಗಿನ ದೂರುಗಳು ಕೇಳಿ ಬರುತ್ತಲೇ ಇವೆ. ಅದರ ಹಿನ್ನೆಲೆಯಲ್ಲಿ ಪ್ರಾಯೋಗಿಕವಾಗಿ ಕೆಲ ಘಟಕಗಳಲ್ಲಿ ದುರ್ವಾಸನೆ ಪತ್ತೆ ಮಾಡುವ ಮೀಟರ್‌ಗಳ ಅಳವಡಿಕೆಗೆ ಬಿಬಿಎಂಪಿ ಮುಂದಾಗಿದೆ. 

ಪಾಲಿಕೆಯ ಘಟಕಗಳಿಂದ ನಿಜವಾಗಿಯೂ ಸುತ್ತಮುತ್ತ ಲಿನ ಪ್ರದೇಶಗಳಲ್ಲಿ ದುರ್ವಾಸನೆ ಹರಡಿದೆಯೇ ಎಂಬುದನ್ನು ಪತ್ತೆ ಹಚ್ಚಲು ಹಾಲಿ ಫ್ಯಾಕ್ಟರಿ ಮೀಟರ್‌ ಸಹಾಯಕವಾಗಲಿದೆ. ದುರ್ವಾಸನೆಯ ತೀವ್ರತೆಯ ಪ್ರಮಾಣ ಎಷ್ಟಿದೇ ಎಂಬ ಮಾಹಿತಿಯೂ ನೀಡಲಿದ್ದು, ಆ ಮಾಹಿತಿಯನ್ನು ಆಧರಿಸಿ ಪಾಲಿಕೆಯ ಅಧಿಕಾರಿಗಳು ಆಯಾ ಭಾಗಗಳಲ್ಲಿನ ದುರ್ವಾಸನೆ ನಿಯಂತ್ರಣಕ್ಕೆ ಕ್ರಮಗಳನ್ನು ಕೈಗೊಳ್ಳಲಿದ್ದಾರೆ. 

ಕನ್ನಹಳ್ಳಿ, ಸೀಗೇಹಳ್ಳಿ, ಕೆಸಿಡಿಸಿಯಲ್ಲಿ ಅಳವಡಿಕೆ!
ಬೊಮ್ಮನಹಳ್ಳಿ ವಲಯದಲ್ಲಿನ ಕೆಸಿಡಿಸಿ ಹಾಗೂ ಸ್ಥಳೀಯರ ತೀವ್ರ ವಿರೋಧಕ್ಕೆ ಎದುರಾಗಿರುವ ಯಶವಂತಪುರ ವಿಧಾನಸಭಾ ಕ್ಷೇತ್ರದ ಸೀಗೇಹಳ್ಳಿ ಹಾಗೂ ಕನ್ನಹಳ್ಳಿ ತ್ಯಾಜ್ಯ ಸಂಸ್ಕರಣೆ ಘಟಕಗಳಲ್ಲಿ ಹಾಲಿ ಫ್ಯಾಕ್ಟರಿ ಮೀಟರ್‌ನ್ನು ಪ್ರಾಯೋಗಿಕವಾಗಿ ಅಳವಡಿಕೆ  ಮಾಡಲು ಅಧಿಕಾರಿಗಳು ತೀರ್ಮಾನಿಸಿದ್ದಾರೆ. ಈ ಮೂರು ಘಟಕಗಳಲ್ಲಿ ಉಪಕರಣ ಯಶಸ್ವಿಯಾದರೆ, ಬಳಿಕ ನಗರದ ಇತರೆ ಘಟಕಗಳು ಹಾಗೂ ಕ್ವಾರಿಗಳ ಬಳಿಯೂ ಯಂತ್ರಗಳ ಅಳವಡಿಕೆ ಮುಂದಾಗಲು ಪಾಲಿಕೆ ಚಿಂತನೆ ನಡೆಸಿದೆ. 

ಪಟ್ಟಭದ್ರ ಹಿತಾಸಕ್ತಿಗಳಿಗೆ ಕಡಿವಾಣ!
ಪಾಲಿಕೆಯಿಂದಲೇ ಹಲವು ಘಟಕಗಳನ್ನು ವೈಜ್ಞಾನಿಕವಾಗಿ ನಡೆಸಲಾಗುತ್ತಿದೆಯಾದರೂ, ಕೆಲ ಘಟಕಗಳ ಬಳಿ ಕೆಲ ಪಟ್ಟಭದ್ರ ಹಿತಾಸಕ್ತಿಗಳು ಘಟಕಗಳನ್ನು ಮುಚ್ಚಿಸಬೇಕೆಂಬ ದುರುದ್ದೇಶದಿಂದ ದುರ್ವಾಸನೆ ತೀವ್ರವಾಗಿದೆ ಎಂದು ಆರೋಪಿಸಿ ಪ್ರತಿಭಟನೆಗೆ ಮುಂದಾಗುತ್ತಿದ್ದಾರೆ. ರಿಯಲ್‌ ಎಸ್ಟೇಟ್‌ ಮಾಫಿಯಾ ಸಹ ಇದರಲ್ಲಿ ಭಾಗಿಯಾಗಿದ್ದು, ಅದರ ಹಿನ್ನೆಲೆಯಲ್ಲಿಯಲ್ಲಿ ಮೀಟರ್‌ಗಳ ಅಳವಡಿಕೆ ಮಾಡಲು ನಿರ್ಧರಿಸಲಾಗಿದೆ. ಇದರಿಂದ ನಿಜವಾಗಿಯೂ ಘಟಕಗಳ ಬಳಿ ದುರ್ವಾಸನೆ ಇದೆಯೇ ಇಲ್ಲವೆ ಎಂಬ ಅಂಶ ತಿಳಿಯಲಿದ್ದು, ಇದರಿಂದ ಪಟ್ಟಭದ್ರ ಹಿತಾಸಕ್ತಿಗಳಿಗೆ ಹಿನ್ನಡೆಯಾಗಲಿದೆ ಎಂದು ಹಿರಿಯ ಅಧಿಕಾರಿಯೊಬ್ಬರು “ಉದಯವಾಣಿ’ಗೆ ತಿಳಿಸಿದ್ದಾರೆ.

ವಿಷಯುಕ್ತ ಅಂಶಗಳ ಪತ್ತೆ!
ಜರ್ಮನಿ ಮೂಲದ ಸಂಸ್ಥೆಯೊಂದು ಹಾಲಿ ಫ್ಯಾಕ್ಟರಿ ಮೀಟರ್‌ಗಳನ್ನು ಪಾಲಿಕೆಯ ಕೆಲ ಘಟಕಗಳಲ್ಲಿ ಪ್ರಾಯೋಗಿಕವಾಗಿ ಅಳವಡಿಕೆ ಮಾಡಲು ಮುಂದಾಗಿದೆ. ಅದರ ಹಿನ್ನೆಲೆಯಲ್ಲಿ ಈಗಾಗಲೇ ಪಾಲಿಕೆಯ ಅಧಿಕಾರಿಗಳನ್ನು ಸಂಪರ್ಕಿಸಿ ಪ್ರಸ್ತಾವನೆ ಸಲ್ಲಿಕೆ ಮಾಡಿದ್ದಾರೆ. ಪಾಲಿಕೆಯ ಅಧಿಕಾರಿಗಳು ಈಗಾಗಲೇ ಯಂತ್ರದ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದ್ದು, ಶೀಘ್ರದಲ್ಲಿಯೇ ನಗರದ ಕೆಲ ಘಟಕಗಳಲ್ಲಿ ಯಂತ್ರಗಳನ್ನು ಅಳವಡಿಕೆ ಮಾಡಲಿದ್ದಾರೆ.

ಕೆಲ ತಿಂಗಳ ಹಿಂದೆ ನಗರದ ಕೆಸಿಡಿಸಿ ಘಟಕದ ಬಳಿ ದುರ್ವಾಸನೆ ಹೆಚ್ಚಾಗಿತ್ತು. ಘಟಕವನ್ನು ಸ್ಥಗಿತಗೊಳಿಸುವಂತೆ ಒತ್ತಾಯಿಸಿ ಕೆಲ ಸಂಘಟನೆಗಳು ಪ್ರತಿಭಟನೆಗೆ ಮುಂದಾಗಿದ್ದವು. ಆದರೆ, ಸ್ಥಳ ಪರಿಶೀಲನೆ ನಡೆಸಿದ ವೇಳೆ ದುರ್ವಾಸನೆ ಇರಲಿಲ್ಲ. ಇತ್ತೀಚೆಗೆ ಜರ್ಮನಿ ಮೂಲಕ ಕಂಪೆನಿಯೊಂದು ಹಾಲಿ ಫ್ಯಾಕ್ಟರಿ ಮೀಟರ್‌ ನೀಡುವ ಪ್ರಸ್ತಾವನೆಯನ್ನು ಪಾಲಿಕೆಗೆ ಸಲ್ಲಿಸಿದೆ. ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಕೆಲ ಘಟಕಗಳಲ್ಲಿ ಪ್ರಾಯೋಗಿಕವಾಗಿ ಅಳವಡಿಕೆ ಮಾಡಲಾಗುವುದು. 
-ಸರ್ಫರಾಜ್‌ ಖಾನ್‌, ಘನತ್ಯಾಜ್ಯ ನಿರ್ವಹಣೆ ಮತ್ತು ಆರೋಗ್ಯ ವಿಭಾಗದ ಜಂಟಿ ಆಯುಕ್ತ

* ವೆಂ.ಸುನೀಲ್‌ ಕುಮಾರ್‌ 

ಟಾಪ್ ನ್ಯೂಸ್

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

ಸಿಎಸ್‌ ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Bomb Threat: ಹೋಟೆಲ್‌, ಶಾಲೆ ಆಯ್ತು, ಈಗ ಬ್ಯಾಂಕ್‌ಗೆ ಬಾಂಬ್‌ ಬೆದರಿಕೆ ಇ-ಮೇಲ್‌ ಸಂದೇಶ

Bomb Threat: ಹೋಟೆಲ್‌, ಶಾಲೆ ಆಯ್ತು, ಈಗ ಬ್ಯಾಂಕ್‌ಗೆ ಬಾಂಬ್‌ ಬೆದರಿಕೆ ಇ-ಮೇಲ್‌ ಸಂದೇಶ

bengaluru

ಜಿ.ಪಂ-ತಾ.ಪಂ ಮೀಸಲು: ಮತ್ತೆ ಕಾಲಾವಕಾಶ ಕೇಳಿದ ಸರ್ಕಾರ

Bengaluru: ಯತ್ನಾಳ್‌ ವಿರುದ್ಧ ಕ್ರಮಕ್ಕೆ ಒತ್ತಡ ಹೇರಲು ವಿಜಯೇಂದ್ರ ಬಣ ಮತ್ತೆ ನಿರ್ಧಾರ

Bengaluru: ಯತ್ನಾಳ್‌ ವಿರುದ್ಧ ಕ್ರಮಕ್ಕೆ ಒತ್ತಡ ಹೇರಲು ವಿಜಯೇಂದ್ರ ಬಣ ಮತ್ತೆ ನಿರ್ಧಾರ

Arrested: ಸರ‌, ಮನೆ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

Arrested: ಸರ‌, ಮನೆ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Bomb Threat: ಹೋಟೆಲ್‌, ಶಾಲೆ ಆಯ್ತು, ಈಗ ಬ್ಯಾಂಕ್‌ಗೆ ಬಾಂಬ್‌ ಬೆದರಿಕೆ ಇ-ಮೇಲ್‌ ಸಂದೇಶ

Bomb Threat: ಹೋಟೆಲ್‌, ಶಾಲೆ ಆಯ್ತು, ಈಗ ಬ್ಯಾಂಕ್‌ಗೆ ಬಾಂಬ್‌ ಬೆದರಿಕೆ ಇ-ಮೇಲ್‌ ಸಂದೇಶ

5-koratagere

ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.