ಅಮಾನ್ಯಗೊಂಡ ನೋಟು ಬದಲಾವಣೆಗೆ ಯತ್ನಿಸಿದವರ ಸೆರೆ
Team Udayavani, May 16, 2017, 11:49 AM IST
ಬೆಂಗಳೂರು: ಅಮಾನ್ಯಗೊಂಡ 500 ಮತ್ತು 1000 ಮುಖಬೆಲೆಯ ನೋಟುಗಳ ಬದಲಾವಣೆಯಲ್ಲಿ ತೊಡಗಿದ್ದ 10 ಮಂದಿಯನ್ನು ಬಸವನಗುಡಿಯ ದೊಡ್ಡಗಣಪತಿ ದೇವಸ್ಥಾನದ ಬಳಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 3.25 ಕೋಟಿ ಮೊತ್ತದ ಹಳೇ ನೋಟುಗಳನ್ನು ಮತ್ತು ಕಾರವೊಂದನ್ನು ವಶಪಡಿಸಿಕೊಳ್ಳಲಾಗಿದೆ.
ಶ್ರೀನಿವಾಸ್, ಮಹೇಶ್, ಕರುಣಾಕರನ್, ಅಬ್ದುಲ್ ಮುಜಿಬ್, ನೀಲಕಂಠ, ಎಚ್.ಜಿ. ಭಂಜನ ಗೌಡ, ನಾರಾಯಣ, ಉದಯ್ಕುಮಾರ್, ಕಾರ್ತಿಕ್, ರುದ್ರಕುಮಾರ್ ಬಂಧಿತರು. ಆರೋಪಿಗಳು ಸಂಬಂಧಿಕರ, ಸ್ನೇಹಿತರ ಬಳಿ ಇದ್ದ ಹಳೆ ನೋಟುಗಳನ್ನು ಸಂಗ್ರಹಿಸಿಕೊಂಡು, ಶೇ.30ರಷ್ಟು ಕಮಿಷನ್ಗೆ ಬದಲಾವಣೆ ಮಾಡಲು ಸಿದ್ಧತೆ ನಡೆಸಿದ್ದರು.
ಈ ಹಿನ್ನೆಲೆಯಲ್ಲಿ ಕೆಲ ದಿನಗಳ ಹಿಂದೆ ನೋಟುಗಳ ಬದಲಾವಣೆ ದಂಧೆಯಲ್ಲಿ ತೊಡಗಿದ್ದ ಅಪರಿಚಿತ ವ್ಯಕ್ತಿಯೊಬ್ಬರನ್ನು ಆರೋಪಿಗಳು ಸಂಪರ್ಕಿ ಸಿದ್ದರು. ಆ ಅಪರಿಚಿತವ್ಯಕ್ತಿ ದೊಡ್ಡಗಣಪತಿ ದೇವಾಲಯದ ಬಳಿ ಬರುವಂತೆ ಸೂಚಿಸಿದ್ದ. ಈ ನಡುವೆ ಖಚಿತ ಮಾಹಿತಿ ಪಡೆದ ಪೊಲೀಸರು ಭಾನುವಾರ ರಾತ್ರಿ 8 ಗಂಟೆ ಸುಮಾರಿಗೆ ದಾಳಿ ನಡೆಸಿ ಹಣದ ಸಮೇತ ಬಂಧಿಸಿದ್ದಾರೆ ಎಂದು ದಕ್ಷಿಣ ವಿಭಾಗ ಡಿಸಿಪಿ ಡಾ ಶರಣಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಹಳೆ ನೋಟುಗಳ ಬದಲಾವಣೆಗೆ ಒಪ್ಪಿಕೊಂಡಿದ್ದ ವ್ಯಕ್ತಿಯ ಕಡೆಯವರೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದೆ. ಬಂಧಿತರ ಕರೆಗಳ ಪರಿಶೀಲನೆ ನಡೆಯುತ್ತಿದೆ ಎಂದು ಅವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್ ಎಚ್ಚರಿಕೆ
ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!
Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.