ತಹಶೀಲ್ದಾರ್‌ ಕಚೇರಿಯಲ್ಲಿ ನೀರಿಗೆ ಬರ!


Team Udayavani, May 16, 2017, 12:54 PM IST

dvg5.jpg

ಚನ್ನಗಿರಿ: ತಾಲೂಕು ಆಡಳಿತ ಕೇಂದ್ರವಾದ ತಹಶೀಲ್ದಾರ್‌ ಕಚೇರಿಯಲ್ಲಿ ಸಾರ್ವಜನಿಕರಿಗೆ ಹಾಗೂ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಕುಡಿಯುವ ನೀರಿನ ತೊಂದರೆಯಾಗಿ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಸರ್ಕಾರಿ ಇಲಾಖೆಗಳಲ್ಲಿಯೇ ಕುಡಿಯುವ ನೀರು ಸಿಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. 

ತಾಲೂಕು ಆಡಳಿತವಾದ ತಹಶೀಲ್ದಾರ್‌ ಕಚೇರಿಯಲ್ಲಿ ಕಳೆದ ತಿಂಗಳಿನಿಂದ ಸಾರ್ವಜನಿಕರಿಗೆ ಕುಡಿಯುವ ನೀರು ಸಿಗದೇ ನೀರಿಗಾಗಿ ಕಚೇರಿ ಮುಂಭಾಗದಲ್ಲಿರುವಂತಹ ಹೋಟೆಲ್‌ಗ‌ಳ ಮೊರೆ ಹೋಗಬೇಕಾಗಿದೆ. ದಿನ ನಿತ್ಯ ಕೆಲಸ ವಹಿವಾಟುಗಳಿಗಾಗಿ ಗ್ರಾಮೀಣ-ನಗರ ಪ್ರದೇಶಗಳಿಂದ ಜನರು ಇಲ್ಲಿಗೆ ಬರುತ್ತಾರೆ.

ಅದರೆ ಬಾಯಾರಿಕೆ ನಿವಾರಿಸಕೊಳ್ಳಲು ಕುಡಿಯುವ ನೀರು ಸಿಗುತ್ತಿಲ್ಲ. ಇದರ ಬದಲಾಗಿ ದುರಸ್ತಿಯಲ್ಲಿರುವ ನೀರಿನ ಟ್ಯಾಂಕರ್‌ ಮಾತ್ರ ಕಾಣಸಿಗುತ್ತದೆ. ಕ್ರಮೇಣ ಸುಸಜ್ಜಿತ ಕಟ್ಟಡದಲ್ಲಿ ತಾಲೂಕು ಕಚೇರಿ ನಿರ್ಮಾಣಗೊಂಡಿದ್ದು, ಇಲ್ಲಿ ಸರ್ಕಾರ ಜನತೆಗೆ ಅನುಕೂಲವಾಗಲೆಂದು ಒಂದೇ ಸೂರಿನಲ್ಲಿ ಹಲವು ಇಲಾಖೆಗಳು ಕಾರ್ಯನಿರ್ವಹಿಸುವಂತೆ ಮಾಡಲಾಗಿದೆ. 

ದಿನ-ನಿತ್ಯ ಕನಿಷ್ಠವೆಂದರೂ 300ರಿಂದ 500ಕ್ಕೂ ಹೆಚ್ಚು ಜನ ಈ ಇಲಾಖೆಗಳಿಗೆ ಬಂದು ಹೋಗುತ್ತಾರೆ. ಆದರೂ ಸಂಬಂಧಪಟ್ಟ ಅಧಿಧಿಕಾರಿಗಳು ಕುಡಿಯುವ ನೀರಿನ ವ್ಯವಸ್ಥೆಗೆ ಕ್ರಮ ಕೈಗೊಳ್ಳದಿರುವುದು ಜನರ ಹಿಡಿಶಾಪಕ್ಕೆ ಕಾರಣವಾಗಿದೆ. 

ಟೀ-ಕಾಫಿ ಕುಡಿದರೆ ನೀರು: ಗ್ರಾಮೀಣ ಪ್ರದೇಶಗಳಿಂದ ಬಂದಂತಹ ಜನರು. ಹೋಟೆಲ್‌ಗ‌ಳಲ್ಲಿ ನೀರು ಕುಡಿಯೋಲಿಕೆ ಹೋದರೆ ಟೀ-ಕಾಫಿ ಕುಡಿದರೆ ಮಾತ್ರ ನೀರು ಸಿಗುತ್ತದೆ. ಜಮೀನು ವ್ಯಾಜ್ಯ ಸೇರಿದಂತೆ ಹಲವು ಸಮಸ್ಯೆಗಳ ನಿವಾವರಣೆ ಬರುವಂತಹ ರೈತರು ಹಾಗೂ ಸಾರ್ವಜನಿಕರು ತಮ್ಮ ಕೆಲಸವನ್ನು ಮುಗಿಸಿಕೊಳ್ಳುವುದಕ್ಕೆ ದಿನವಿಡಿ ಕಾಯಬೇಕು. ಕಚೇರಿಯಲ್ಲಿಯೇ ಕಾಲಕಳೆಯಬೇಕಾದ ಸ್ಥಿತಿ ಇರುತ್ತದೆ. 

ಇಂತಹದರ ನಡುವೇ ಬೀರು ಬಿಸಿಲಿನ ಜಳಕ್ಕೆ ತತ್ತರಿಸಿದ ಜನತೆ ಕುಡಿಯಲು ನೀರು ಸಿಗದೇ ಪರದಾಡ ಬೇಕಾಗಿದೆ. ಫುಟ್‌ಪಾತ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಹೋಟೆಲ್‌- ಗೂಡಂಗುಡಿಗಳಲ್ಲಿ ಸಿಗುವ ನೀರನ್ನೇ ಅನಿವಾರ್ಯವಾಗಿ ಕುಡಿಯಬೇಕಾಗಿದೆ. 

ಇನ್ನೂ ಸ್ಥಿತಿವಂತರು ಶುದ್ಧವಾದ ವಾಟರ್‌ ಬಾಟಲಿಗಳ ನೀರು ದಾಹ ತೀರಿಸಿಕೊಳ್ಳುತ್ತಾರೆ. ಸರ್ಕಾರ ಕುಡಿಯುವ ನೀರಿನ ಸೌಲಭ್ಯಕ್ಕೆ ಹೆಚ್ಚು ಆದ್ಯತೆ ನೀಡುತ್ತಿದ್ದರೂ ಇಲ್ಲಿನ ಸರ್ಕಾರಿ ಇಲಾಖೆಗಳಲ್ಲಿ ಕುಡಿಯುವ ನೀರು ಸಿಗದೇ ಇರುವುದು ವಿಪರ್ಯಾಸ. 

ಶೌಚಾಲಯಗಳ ನಿರ್ವಹಣೆಯಲ್ಲಿ ವಿಫಲ: ತಾಲೂಕು ಕಚೇರಿಯಲ್ಲಿ ಶೌಚಾಲಯಗಳು ಇದ್ದೂ ಇಲ್ಲದಂತಾಗಿವೆ. ಅವುಗಳ ನಿರ್ವಹಣೆ ಮಾಡುವಲ್ಲಿ ಅಧಿಧಿಕಾರಿಗಳು ವಿಫಲಗೊಂಡಿದ್ದಾರೆ. ಕಚೇರಿ ಹಿಂಭಾಗದಲ್ಲಿನ ಆವರಣವನ್ನೇ ಶೌಚವಾಗಿ ಬಳಸಿಕೊಳ್ಳಲಾಗುತ್ತಿದೆ. ಇಲ್ಲಿಗೆ ಆಗಮಿಸುವ ಪುರುಷರು ಹಾಗೂ ಮಹಿಳೆಯರು ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ. ಕುಡಿಯುವ ನೀರು ಹಾಗೂ ಶೌಚಾಲಯಗಳ ನಿರ್ವಹಣೆಗೆ ಕ್ರಮ ವಹಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. 

* ಸಿ.ಎಸ್‌. ಶಶೀಂದ್ರ  

ಟಾಪ್ ನ್ಯೂಸ್

Kudremukh National Park: ವನ್ಯಜೀವಿ ಬೇಟೆಗೆ ಯತ್ನ; ಆರೋಪಿ ಬಂಧನ

Kudremukh National Park: ವನ್ಯಜೀವಿ ಬೇಟೆಗೆ ಯತ್ನ; ಆರೋಪಿ ಬಂಧನ

CT-Ravi

ಮೋಹ ಪರವಶ, ಅಧಿಕಾರ ಮದ, ಮತ್ಸರದ ರಾಜಕಾರಣ ಮಾಡೋರಿಗೆ ಸತ್ಯ ಅರ್ಥವಾಗಲ್ಲ: ಸಿ.ಟಿ.ರವಿ

Chamarajpete–cow

Bengaluru: ಮಲಗಿದ್ದ ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುರುಳರು; ಭುಗಿಲೆದ್ದ ಆಕ್ರೋಶ

Tulu Film: ರೂಪೇಶ್‌ ಶೆಟ್ರ ‘ಜೈ’ ಸಿನಿಮಾಗೆ ಬಂದ್ರು ಸೂಪರ್‌ ಸ್ಟಾರ್‌

Tulu Film: ರೂಪೇಶ್‌ ಶೆಟ್ರ ‘ಜೈ’ ಸಿನಿಮಾಗೆ ಬಂದ್ರು ಬಾಲಿವುಡ್ ಸೂಪರ್‌ ಸ್ಟಾರ್‌

1

ಮಕ್ಕಳ ಮೇಲೆ ಗದರದೇ, ಕೈ ಮಾಡದೆ ಶಿಸ್ತನ್ನು ಮೂಡಿಸುವುದು ಹೇಗೆ? ಇಲ್ಲಿದೆ ಕೆಲವು ಸಲಹೆಗಳು

Team India: Rohit asked BCCI for a few months’ time: What happened in the meeting?

Team India: ಬಿಸಿಸಿಐ ಬಳಿ ಕೆಲವು ತಿಂಗಳ ಅವಕಾಶ ಕೇಳಿದ ರೋಹಿತ್‌: ಸಭೆಯಲ್ಲಿ ಏನಾಯ್ತು?

ಮಹಾಕುಂಭ ಮೇಳದ ಯಶಸ್ಸಿಗಾಗಿ ಮಠ -ಮನೆ, ಮಂದಿರಗಳಲ್ಲಿ ಪ್ರಾರ್ಥಿಸಲು ಪೇಜಾವರ ಶ್ರೀ ಕರೆ

Udupi: ಮಹಾಕುಂಭ ಮೇಳದ ಯಶಸ್ಸಿಗಾಗಿ ಮಠ -ಮನೆ, ಮಂದಿರಗಳಲ್ಲಿ ಪ್ರಾರ್ಥಿಸಲು ಪೇಜಾವರ ಶ್ರೀ ಕರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

davanage

ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ರಸ್ತೆ ತಡೆದು ಹಳೇ ಕುಂದುವಾಡ ಗ್ರಾಮಸ್ಥರಿಂದ ಪ್ರತಿಭಟನೆ

1-davn

Davanagere; ಸಿಲಿಂಡರ್ ಸ್ಫೋ*ಟ: ಆವರಿಸಿದ ದಟ್ಟ ಹೊಗೆ

DVG-CM

Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

Davanagere: Opposition parties should not make baseless allegations: CM Siddaramaiah

Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Kudremukh National Park: ವನ್ಯಜೀವಿ ಬೇಟೆಗೆ ಯತ್ನ; ಆರೋಪಿ ಬಂಧನ

Kudremukh National Park: ವನ್ಯಜೀವಿ ಬೇಟೆಗೆ ಯತ್ನ; ಆರೋಪಿ ಬಂಧನ

CT-Ravi

ಮೋಹ ಪರವಶ, ಅಧಿಕಾರ ಮದ, ಮತ್ಸರದ ರಾಜಕಾರಣ ಮಾಡೋರಿಗೆ ಸತ್ಯ ಅರ್ಥವಾಗಲ್ಲ: ಸಿ.ಟಿ.ರವಿ

Chamarajpete–cow

Bengaluru: ಮಲಗಿದ್ದ ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುರುಳರು; ಭುಗಿಲೆದ್ದ ಆಕ್ರೋಶ

Tulu Film: ರೂಪೇಶ್‌ ಶೆಟ್ರ ‘ಜೈ’ ಸಿನಿಮಾಗೆ ಬಂದ್ರು ಸೂಪರ್‌ ಸ್ಟಾರ್‌

Tulu Film: ರೂಪೇಶ್‌ ಶೆಟ್ರ ‘ಜೈ’ ಸಿನಿಮಾಗೆ ಬಂದ್ರು ಬಾಲಿವುಡ್ ಸೂಪರ್‌ ಸ್ಟಾರ್‌

1

ಮಕ್ಕಳ ಮೇಲೆ ಗದರದೇ, ಕೈ ಮಾಡದೆ ಶಿಸ್ತನ್ನು ಮೂಡಿಸುವುದು ಹೇಗೆ? ಇಲ್ಲಿದೆ ಕೆಲವು ಸಲಹೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.