ಹೇಮರೆಡ್ಡಿ ಮಲ್ಲಮ್ಮನ ವಿಚಾರಗಳು ಇಂದಿಗೂ ಪ್ರಸ್ತುತ

Team Udayavani, May 17, 2017, 12:30 PM IST

mys6.jpg

ಮೈಸೂರು: ಸಮಾಜದ ಏಳಿಗೆಗೆ ಶ್ರಮಿಸಿದ ಮಹನೀಯರನ್ನು ಜನರಿಗೆ ಪರಿಚಯಿಸುವ ಸಲುವಾಗಿ ಸಿದ್ದರಾಮಯ್ಯ ಸರ್ಕಾರ ಅನೇಕ ಮಹನೀಯರ ಜನ್ಮ ದಿನಾಚರಣೆಯನ್ನು ಸರ್ಕಾರದವತಿಯಿಂದಲೇ ಆಚರಿಸುತ್ತಿದೆ ಎಂದು ಶಾಸಕ ಎಂ.ಕೆ.ಸೋಮಶೇಖರ್‌ ಹೇಳಿದರು.

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮೈಸೂರು, ಶಿವಶರಣೆ ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮ ಜಯಂತ್ಯುತ್ಸವ ಸಮಿತಿ ಹಾಗೂ ಬಡಗನಾಡು ಹೇಮರೆಡ್ಡಿ ಮಲ್ಲಮ್ಮ ಬಳಗಗಳ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಕಲಾಮಂದಿರದಲ್ಲಿ ಏರ್ಪಡಿಸಿದ್ದ ಶಿವಶರಣೆ ಮಹಾಸಾಧ್ವಿ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, ಹೇಮರೆಡ್ಡಿ ಮಲ್ಲಮ್ಮನ ವಿಚಾರ ಹೆಚ್ಚು ಜನರಿಗೆ ತಿಳಿಯುವಂತಾಗಿ, ಸಮಾಜದಲ್ಲಿ ಜಡ್ಡುಗಟ್ಟಿರುವ ಮೌಡ್ಯತೆ ನಿವಾರಣೆ ಸಾಧ್ಯವಾಗುತ್ತದೆ ಎಂದರು.

ಇತ್ತೀಚಿನ ದಿನಗಳಲ್ಲಿ ಜನತೆ ವಿದ್ಯಾವಂತೆ, ಬುದ್ಧಿವಂತರಾದರೂ ಅವರ ನಡವಳಿಕೆಗಳಲ್ಲಿ ವ್ಯತ್ಯಾಸ ಕಾಣುತ್ತೇವೆ. ಹೀಗಾಗಿ ಅರಿವಿಗಿಂತ ಆಚರಣೆ ಮುಖ್ಯವಾಗಬೇಕು. ಇಂತಹ ಸಮಾಜಕ್ಕೆ ಹೇಮರೆಡ್ಡಿ ಮಲ್ಲಮ್ಮನ ಮಾತುಗಳು ಇಂದಿಗೂ ಪ್ರಸ್ತುತವಾಗಿದೆ. ಪುರುಷ ಪ್ರಧಾನ ಸಮಾಜದಲ್ಲಿ ಹೆಣ್ಣಿನ ಮೇಲೆ ಮೊದಲಿನಿಂದಲೂ ದಬ್ಟಾಳಿಕೆ ನಡೆದೇ ಇದೆ. ಅದರ ನಡುವೆಯೂ ಹೇಮರೆಡ್ಡಿ ಮಲ್ಲಮ್ಮ ಸಾಧನೆ ಮಾಡಿರುವುದು ಮಹತ್ವದ ಸಂಗತಿ ಎಂದು ಹೇಳಿದರು.

ಯಾವುದೇ ಜಯಂತಿಗಳ ಆಚರಣೆಯಿಂದ ಸಮಾಜದಲ್ಲಿ ಬದಲಾವಣೆ ಸಾಧ್ಯವಾಗುವುದಿಲ್ಲ. ಬದಲಿಗೆ ನಮ್ಮ ಚಿಂತನೆಗಳು ಬದಲಾದಾಗ ಮಾತ್ರ ಸಮಾಜದ ಬದಲಾವಣೆ ಸಾಧ್ಯ. ಆಗ ಜಾತಿಯ ಗೋಡೆಗಳು ಕಳಚಿ ಬೀಳುತ್ತವೆ ಎಂದರು. ಸಾಹಿತಿ ಪೊ›.ಮೊರಬದ ಮಲ್ಲಿಕಾರ್ಜುನ, ಹೇಮರೆಡ್ಡಿ ಮಲ್ಲಮ್ಮ ಯಾರು ಎಂಬುದನ್ನು ಅರ್ಥ ಮಾಡಿಕೊಳ್ಳಬೇಕಾದ್ದು ಇಂದಿನ ಅಗತ್ಯ. ಕರ್ನಾಟಕದ ಮಹಾ ಶರಣೆ ಶಿವಸಾಧ್ವಿ ಎಂದು ಸ್ವೀಕರಿಸಿರುವ ಮಲ್ಲಮ್ಮ ಜೈ ಭಾರತ ಜನನಿಯ ತನುಜಾತೆ ಇದ್ದಂತೆ ಎಂದು ತಿಳಿಸಿದರು.

ಗಾವಡಗೆರೆಯ ಗುರುಲಿಂಗ ಜಂಗಮ ದೇವರಮಠದ ನಟರಾಜ ಸ್ವಾಮೀಜಿ ಸಾನ್ನಿಧ್ಯವಹಿಸಿದ್ದರು. ಶಾಸಕ ವಾಸು ಅಧ್ಯಕ್ಷತೆವಹಿಸಿದ್ದರು. ಜಿಪಂ ಅಧ್ಯಕ್ಷೆ ನಯಿಮಾ ಸುಲ್ತಾನಾ, ಮೃಗಾಲಯ ಪ್ರಾಧಿಕಾರದ ಅಧ್ಯಕ್ಷೆ ಮಲ್ಲಿಗೆ ವೀರೇಶ್‌, ಗೊ.ರು.ಪರಮೇಶ್ವರಪ್ಪ, ಡಾ.ತಿಪ್ಪೇಸ್ವಾಮಿ, ಶಿವಲಿಂಗಸ್ವಾಮಿ, ಶಿವಶಂಕರ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಚ್‌.ಚೆನ್ನಪ್ಪ ಇದ್ದರು.

ಟಾಪ್ ನ್ಯೂಸ್

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

SPB: ತಿರುವಳ್ಳೂರ್ ನಲ್ಲಿ ಎಸ್.ಪಿ. ಬಾಲಸುಬ್ರಹ್ಮಣ್ಯಂ ಸ್ಮಾರಕ ನಿರ್ಮಾಣ

SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ

naa ninna bidalare movie releasing today

Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1

Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.