ದಾಸೋಹಕ್ಕೆ ಸಂಪುಟ ಅಸ್ತು: ಬೊಕ್ಕಸಕ್ಕೆ 34.4 ಕೋಟಿ ವೆಚ್ಚ


Team Udayavani, May 18, 2017, 3:45 AM IST

TB.jpg

ಬೆಂಗಳೂರು: ಮಠ – ಮಾನ್ಯಗಳು ಸೇರಿದಂತೆ ಅನಾಥಾಶ್ರಮ, ವೃದ್ದಾಶ್ರಮ, ಬಾಲಮಂದಿರ, ವಿಕಲಚೇತನರ ವಸತಿ ನಿಲಯ ಹಾಗೂ ಇತರೆ ಕಲ್ಯಾಣ ಸಂಸ್ಥೆಗಳಿಗೆ ಸರ್ಕಾರದಿಂದ ಉಚಿತ ಅಕ್ಕಿ ಒದಗಿಸುವ “ದಾಸೋಹ ‘ಯೋಜನೆಯನ್ನು ಕಾರ್ಯಗತಗೊಳಿಸಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಸಚಿವ ಸಂಪುಟ ಸಭೆ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಸಚಿವ ಟಿ.ಬಿ. ಜಯಚಂದ್ರ, ಕೇಂದ್ರ ಸರ್ಕಾರದ ಇತರ ಕಲ್ಯಾಣ ಯೋಜನೆ ಅಡಿಯಲ್ಲಿ ವಿಶೇಷ ಸಂಘ ಸಂಸ್ಥೆಗಳಿಗೆ 5.60 ರೂಪಾಯಿಗೆ ಪ್ರತಿ ಕೆ.ಜಿ. ಅಕ್ಕಿ ನೀಡಲಾಗುತ್ತಿತ್ತು. ಈಗ ದಾಸೋಹ ಯೋಜನೆ ಅಡಿಯಲ್ಲಿ ರಾಜ್ಯ ಸರ್ಕಾರದಿಂದ ಉಚಿತವಾಗಿ ನೀಡಲು ತೀರ್ಮಾನಿಸಲಾಗಿದೆ ಎಂದು ಹೇಳಿದರು. ಈ ಯೋಜನೆ ಜಾರಿಯಿಂದ ಬೊಕ್ಕಸಕ್ಕೆ ವಾರ್ಷಿಕ 34.4 ಕೋಟಿ ರೂಪಾಯಿ ವೆಚ್ಚವಾಗಲಿದೆ ಎಂದು ತಿಳಿಸಿದರು.

ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಪ್ರತಿ ವ್ಯಕ್ತಿಗೆ 5 ಕೆಜಿ ಅಕ್ಕಿ ನೀಡುವುದನ್ನು 7 ಕೆಜಿಗೆ ಹೆಚ್ಚಳ ಮಾಡಿರುವ ತೀರ್ಮಾನಕ್ಕೆ ಸಂಪುಟದಲ್ಲಿ ಘಟನೋತ್ತರ ಅನುಮತಿ ನೀಡಲಾಗಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಅಕ್ಕಿ ಬದಲು ಗೋಧಿಗೆ ಬೇಡಿಕೆ ಇದ್ದು, ಸಾರ್ವಜನಿಕರ ಬೇಡಿಕೆಯಂತೆ ಗೋಧಿಯನ್ನು ನೀಡಲು ಅನುಮತಿ ನೀಡಲಾಗಿದೆ. ಆಹಾರ ಭದ್ರತೆ ಕಾಯ್ದೆ ಅಡಿಯಲ್ಲಿ ಆದ್ಯತಾ ಕುಟುಂಬಗಳನ್ನು ಗುರುತಿಸುವುದು ಹೊಸ ಬಿಪಿಎಲ್‌ ಪಡಿತರ ಚೀಟಿ ಪಡೆಯಲು ಬಂದಿರುವ ಅರ್ಜಿಗಳ ಶೀಘ್ರ ವಿಲೆವಾರಿಗೆ ಕ್ರಮ ಕೈಗೊಳ್ಳಲು ಸಂಪುಟ ಒಪ್ಪಿಗೆ ನೀಡಿದೆ. ಅಲ್ಲದೆ ನ್ಯಾಯಬೆಲೆ ಅಂಗಡಿಗಳ ಜಾಗೃತ ಸಮಿತಿಗಳನ್ನು ಸದೃಢಗೊಳಿಸಲು ಜಾಗೃತ ಸಮಿತಿ ಸದಸ್ಯರಿಗೆ ಮಾಸಿಕ 150 ರೂಪಾಯಿ ಗೌರವ ಧನ ನೀಡಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಕಂದಾಯ ಇಲಾಖೆ ವ್ಯಾಪ್ತಿಯಲ್ಲಿರುವ ಮಹಾನಗರ ಪಾಲಿಕೆ, ನಗರ ಪಾಲಿಕೆ, ಪಟ್ಟಣ ಪಂಚಾಯತಿಗಳ ಹೊರ ವ್ಯಾಪ್ತಿಯ 18 ಕಿ.ಮೀ ಯಿಂದ 3 ಕಿ. ಮಿ.ವ್ಯಾಪ್ತಿಯಲ್ಲಿರುವ 30*40 ಮನೆಗಳನ್ನು ಸಕ್ರಮಗೊಳಿಸಲು ಸಂಪುಟ ಒಪ್ಪಿಗೆ ನೀಡಿದೆ. ಎಸ್ಸಿ ಎಸ್ಟಿ ಹಾಗೂ ವಿಕಲಚೇತನರಿಗೆ 5 ಸಾವಿರ ಮತ್ತು ಸಾಮಾನ್ಯ ವರ್ಗದವರಿಗೆ 10 ಸಾವಿರ ರೂಪಾಯಿ ದಂಡ ನಿಗದಿ ಮಾಡಲಾಗಿದೆ ಎಂದು ಹೇಳಿದರು.

ವಸತಿ ಇಲಾಖೆಯಲ್ಲಿ ಬಸವ, ಅಂಬೇಡ್ಕರ್‌, ವಾಜಪೇಯಿ ಯೋಜನೆಗಳ ಮೂಲಕ 4 ಲಕ್ಷ ಮನೆಗಳನ್ನು ಪೂರ್ಣಗೊಳಿಸಲು ತೀರ್ಮಾನಿಸಲಾಗಿದ್ದು, 10 ಲಕ್ಷ ಫ‌ಲಾನುಭವಿಗಳನ್ನು ಗುರುತಿಸಲು ನಿರ್ಧರಿಸಲಾಗಿದೆ. ರಾಜ್ಯದಲ್ಲಿ ವಸತಿ ಯೋಜನೆಗಳ ಅನುಷ್ಠಾನಕ್ಕೆ ಸಿಬ್ಬಂದಿ ಕೊರತೆ ಇರುವುದರಿಂದ ಖಾಸಗಿ ಎಜೆನ್ಸಿ ಮೂಲಕ ಹೊರ ಗುತ್ತಿಗೆ ಆಧಾರದಲ್ಲಿ ಮೂರು ವರ್ಷದ ಮಟ್ಟಿಗೆ ಸಿಬ್ಬಂದಿ ನೇಮಕ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಜಯಚಂದ್ರ ತಿಳಿಸಿದರು.

ಪ್ರೌಢ ಶಾಲಾ ಶಿಕ್ಷಕರ ನೇಮಕಾತಿಗೆ ಕಾನೂನು ತಿದ್ದುಪಡಿ ತರಲು ತೀರ್ಮಾನಿಸಲಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯಿಂದ ನೇರ ನೇಮಕ ಮಾಡಿಕೊಳ್ಳಲು ಅವಕಾಶ ಕಲ್ಪಿಸುವಂತೆ ನಿಯಮಗಳಿಗೆ ತಿದ್ದುಪಡಿ ಮಾಡಲು ಸಂಪುಟ ಅನುಮತಿ ನೀಡಿದೆ. ಶಿವಮೊಗ್ಗ ಕೃಷಿ ವಿವಿ ನೂತನ ಕ್ಯಾಂಪಸ್‌ ಇರುವಕ್ಕಿ ಗ್ರಾಮದ ಬಳಿ 600 ಎಕರೆ ಪ್ರದೇಶವನ್ನು ವಿಶ್ವ ವಿದ್ಯಾಲಯಕ್ಕೆ ನೀಡಲು ತೀರ್ಮಾನಿಸಲಾಗಿದು, 138.69 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲು ಸೂಚಿಸಲಾಗಿದೆ. ಈ ಬಗ್ಗೆ ಈಗಾಗಲೇ ಟೆಂಡರ್‌ ಕರೆಯಲಾಗಿದ್ದು, ಎರಡು ವರ್ಷದಲ್ಲಿ ಯೋಜನೆ ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದು ಅವರು ಹೇಳಿದರು.

ಎಸಿಎಸ್‌ ನೇತೃತ್ವದ ಸಮಿತಿ ವರದಿ ಪರಿಗಣಿಸಲು ಒಪ್ಪಿಗೆ:
ಎಸ್ಸಿ ಎಸ್ಟಿ ಬಡ್ತಿ ಮೀಸಲಾತಿ ವಿಚಾರದಲ್ಲಿ ಹಿಂದುಳಿದ ವರ್ಗದ ಆಯೋಗದ ಸಮೀಕ್ಷೆ ಬದಲು ಎಸಿಎಸ್‌ ನೇತೃತ್ವದ ಸಮಿತಿ ವರದಿ ಪರಿಗಣಿಸಲು ಸಂಪುಟ ಒಪ್ಪಿಗೆ. ಎಸ್ಸಿ ಎಸ್ಟಿ ಸಮುದಾಯ ಹಿಂದುಳಿದಿರುವಿಕೆಗೆ ಕಾರಣಗಳನ್ನು ಪತ್ತೆ ಹಚ್ಚಲು ರಾಜ್ಯ ಸರ್ಕಾರ ಹಿಂದುಳಿದ ವರ್ಗಗಳ ಆಯೋಗಕ್ಕೆ ಶಿಫಾರಸ್ಸು ಮಾಡಿತ್ತು. ನಂತರ ಸರ್ಕಾರದ ಹೆಚ್ಚುವರಿ ಮುಖ್ಯಕಾರ್ಯದರ್ಶಿ ರತ್ನಪ್ರಭ ಅವರ ನೇತೃತ್ವದಲ್ಲಿ ಸಮಿತಿ ರಚಿಸಿ ಮುಖ್ಯಮಂತ್ರಿ ಆದೇಶ ಹೊರಡಿಸಿದ್ದರಿಂದ ಆಯೋಗಕ್ಕೆ ನೀಡಿದ್ದ ಆದೇಶವನ್ನು ಸಂಪುಟದಲ್ಲಿ ವಾಪಸ್‌ ಪಡೆಯಲಾಗಿದೆ ಎಂದು ಟಿ.ಬಿ. ಜಯಚಂದ್ರ ಹೇಳಿದರು.

ಸಂಪುಟದ ಇತರ ತೀರ್ಮಾನಗಳು.
-ಬೆಂಗಳೂರಿನ ಮಾಗಡಿ ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ಆರೋಗ್ಯ ಭವನ ಕಟ್ಟಡಕ್ಕೆ ಪರಿಷ್ಕೃತ ಅಂದಾಜು ಮೊತ್ತ 22.85 ಕೋಟಿಗೆ ಒಪ್ಪಿಗೆ
-ಹಾಸನ ಜಿಲ್ಲೆ ಸಕಲೇಶಪುರ ರಾಜ್ಯ ಹೆದ್ದಾರಿ 107 ರಲ್ಲಿ ಜಮನಾಪುರ ವನಗೂರು ರಸ್ತೆ ಅಭಿವೃದ್ಧಿಗೆ 29.64 ಕೋಟಿ ಪರಿಷ್ಕೃತ ಅಂದಾಜು ಮೊತ್ತಕ್ಕೆ ಒಪ್ಪಿಗೆ
-ಕೌಶಲ್ಯಾಭಿವೃದ್ಧಿ ಇಲಾಖೆಯಲ್ಲಿ ಕೌಶಲ್ಯ ಮಿಷನ್‌ ಮತ್ತು ಇತರ ಏಜೆನ್ಸಿ ಸ್ಥಾಪನೆಗೆ ಸಂಪುಟ ಅನುಮತಿ
-ಅಬಕಾರಿ ಇಲಾಖೆಯ ಬಾಕಿ ಕರ ವಸೂಲಿ ಅವಧಿಯನ್ನು ಅಕ್ಟೋಬರ್‌ 31 ರ ವರೆಗೆ ವಿಸ್ತರಣೆ
-ಬಾಂಗ್ಲಾದೇಶದಿಂದ ವಲಸೆ ಬಂದು ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ವಾಸವಾಗಿರುವ ನಾಮಶೂದ್ರ, ಪೋಡ್‌, ಪೌಂಡ್ರ, ರಾಜಬಂಶಿ ಜಾತಿಗಳನ್ನು ಎಸ್ಸಿ ಸಮುದಾಯಕ್ಕೆ ಸೇರಿಸುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ತೀರ್ಮಾನ.
-ಬಸವನಬಾಗೇವಾಡಿ ಯಲ್ಲಿ  32.73 ಕೋಟಿ ವೆಚ್ಚದಲ್ಲಿ ಮೆಗಾ ವಾಣಿಜ್ಯ ಮಾರುಕಟ್ಟೆ  ನಿರ್ಮಿಸಲು ಸಂಪುಟ ಒಪ್ಪಿಗೆ
-ವಿಶ್ವ ಬ್ಯಾಂಕ್‌ ನೆರವಿನಿಂದ 581 ಕೋಟಿ ರೂಪಾಯಿ ವೆಚ್ಚದಲ್ಲಿ 22 ಆಣೆಕಟ್ಟೆಗಳ ಪುನಶ್ಚೇತನ ಕಾಮಗಾರಿ ಕೈಗೊಳ್ಳಲು ಒಪ್ಪಿಗೆ
-ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಗರ್ಭಗುಡಿ ಬಳಿ 51.40 ಕೋಟಿ ವೆಚ್ಚದಲ್ಲಿ ಪಿಕಪ್‌ ಕಂ ಬ್ರಿಡ್ಜ್ ನಿರ್ಮಾಣಕ್ಕೆ ಅನುಮೋದನೆ. ಇದರಿಂದ 4600 ಎಕರೆ ನೀರಾವರಿ ಹರಪನಹಳ್ಳಿ ತಾಲೂಕಿನ 108 ಗ್ರಾಮಗಳಿಗೆ ಕುಡಿಯುವ ನೀರು ಒದಗಿಸಲಾಗುವುದು.
-ಬೀದರ್‌ನಲ್ಲಿ 58 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸ ಎಂಜಿನಿಯರಿಂಗ್‌ ಕಾಲೇಜು ಸ್ಥಾಪನೆಗೆ ಅನುಮತಿ
-ಸಿಟಿ ಗ್ಯಾಸ್‌ ಡಿಸ್ಟ್ರಿಬ್ಯೂಷನ್‌ ಯೋಜನೆ ಅನುಷ್ಠಾನಕ್ಕಾಗಿ ಕೆಎಸ್‌ಐಐಡಿಸಿ ಮತ್ತು ಗೇಲ್‌ ಗ್ಯಾಸ್‌ ಸಂಸ್ಥೆ ಒಳಗೊಂಡ ಕಂಪನಿ ಸ್ಥಾಪನೆಗೆ ಒಪ್ಪಿಗೆ
-ಗಂಗಾವತಿ ತಾಲೂಕಿನ ಕಡೆಬಾಗಿಲು ಬಳಿ ತುಂಗಭದ್ರ ನದಿಗೆ ಸೇತುವೆ ನಿರ್ಮಾಣಕ್ಕೆ ಒಪ್ಪಿಗೆ
-ಬೀದರ್‌ ಜಿಲ್ಲೆಯ ಭಾಲ್ಕಿ ಪಟ್ಟಣ ಹಾಗೂ 23 ಹಳ್ಳಿಗಳಿಗೆ ಕಾರಂಜಾ ಜಲಾಶಯದಿಂದ 140 ಕೋಟಿ ರೂಪಾಯಿ ವೆಚ್ಚದಲ್ಲಿ ಕುಡಿಯುವ ನೀರು ಒದಗಿಸುವ ಯೋಜನೆಗೆ ಅನುಮತಿ.

ಕಲ್ಲಿದ್ದಲು ಗಣಿಗಳಿಂದ ಕಲ್ಲಿದ್ದಲು ಖರೀದಿಸುವ ಕುರಿತು ಸುಪ್ರೀಂ ಕೋರ್ಟ್‌ ನೀಡಿರುವ ಆದೇಶದ ಬಗ್ಗೆ ಸಂಪುಟ ಸಭೆಯಲ್ಲಿ ಸುಮಾರು ಒಂದು ಗಂಟೆ ಚರ್ಚೆ ನಡೆದಿದೆ. ರಾಜ್ಯ ಸರ್ಕಾರ ಕಲ್ಲಿದ್ದಲು ಖರೀದಿಸಲು ಖಾಸಗಿ ಕಂಪನಿಗಳೊಂದಿಗೆ ಮಾಡಿಕೊಂಡ ಒಪ್ಪಂದದಂತೆ ಖರೀದಿಗೆ ಮೊದಲೇ ಸುಪ್ರೀಂ ಕೊರ್ಟ್‌ ಕಲ್ಲಿದ್ದಲು ಹರಾಜು ಮಾಡುವುದಕ್ಕೆ ತಡೆ ನೀಡಿರುವುದರಿಂದ ರಾಜ್ಯ ಸರ್ಕಾರ ಮುಂದೆ ಹೇಗೆ ತೀರ್ಮಾನ ತೆಗೆದುಕೊಳ್ಳಬೇಕು ಎಂಬ ವಿಷಯದ ಮೇಲೆ ಸುದೀರ್ಘ‌ ಚರ್ಚೆ ನಡೆದಿದೆ ಎನ್ನಲಾಗಿದೆ. ಈ ಬಗ್ಗೆ ಇನ್ನಷ್ಟು ಸ್ಪಷ್ಟ ಮಾಹಿತಿ ಪಡೆದು ಮುಂದಿನ ಸಂಪುಟದಲ್ಲಿ ತೀರ್ಮಾನ  ತೆಗೆದುಕೊಳ್ಳಲು ಸಂಪುಟ ಸಭೆ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

vidhana-soudha

CM office ನವೀಕರಣ: ಮತ್ತೊಂದು ವಿವಾದ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!

snehamayi krishna

Snehamayi Krishna ವಿರುದ್ಧ ಕಾಂಗ್ರೆಸ್‌ನಿಂದ ಪೊಲೀಸರಿಗೆ ಮತ್ತೊಂದು ದೂರು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

puttige-4

Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.