ಆಹಾರ ಇಲಾಖೆ ಆಯುಕ್ತ ಐಎಎಸ್‌ ಅಧಿಕಾರಿ ಅನುರಾಗ್‌ ತಿವಾರಿ ನಿಗೂಢ ಸಾವು


Team Udayavani, May 18, 2017, 3:45 AM IST

IAS-officer-Anurag-Tewari.jpg

ಲಕ್ನೋ/ಬೆಂಗಳೂರು: ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆಯುಕ್ತರಾಗಿದ್ದ ಅನುರಾಗ್‌ ತಿವಾರಿ ಅವರು ಉತ್ತರ ಪ್ರದೇಶದ ಲಕ್ನೋದಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಜನ್ಮದಿನದಂದೇ ಅವರು ಸಾವನಪ್ಪಿರುವುದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.

ಉತ್ತರ ಪ್ರದೇಶ ಮೂಲದ ಅನುರಾಗ್‌ ತಿವಾರಿ 2007ರ ಬ್ಯಾಚ್‌ನ ಕರ್ನಾಟಕ ಕೇಡರ್‌ನ ಐಎಎಸ್‌ ಅಧಿಕಾರಿಯಾಗಿದ್ದರು. ಬುಧವಾರ ಜನ್ಮದಿನದ ಹಿನ್ನೆಲೆಯಲ್ಲಿ ಲಕ್ನೋಗೆ ತೆರಳಿದ್ದರು. ಎರಡು ದಿನಗಳಿಂದ ಲಕ್ನೋದ ಹಜರತ್‌ಗಂಜ್‌ ಪ್ರದೇಶದಲ್ಲಿನ ಸರ್ಕಾರಿ ಅತಿಥಿ ಗೃಹದಲ್ಲಿ ತಂಗಿದ್ದ ಅವರು ಬುಧವಾರ ಬೆಳಗ್ಗೆ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಮಸೂರಿಯಲ್ಲಿರುವ ಲಾಲ್‌ಬಹದ್ದೂರ್‌ ಶಾಸಿŒ ರಾಷ್ಟ್ರೀಯ ಆಡಳಿತ ಅಕಾಡೆಮಿಯಲ್ಲಿ ನಡೆದ ವೃತ್ತಿ ತರಬೇತಿಯಲ್ಲಿ ಪಾಲ್ಗೊಂಡಿದ್ದ ಅವರು ಎರಡು ದಿನಗಳಿಂದ ತಮ್ಮ ಬ್ಯಾಚ್‌ನ ಸಹೋದ್ಯೋಗಿಗಳೊಂದಿಗೆ ಸರ್ಕಾರಿ ಅತಿಥಿ ಗೃಹದಲ್ಲಿ ತಂಗಿದ್ದರು. ತಿವಾರಿ ಅವರ ಮೃತದೇಹ ಪತ್ತೆಯಾದ ವೇಳೆ ರಾತ್ರಿ ಉಡುಗೆಯಲ್ಲಿದ್ದರು. ಬೆಳಗ್ಗೆ ವಾಯು ವಿಹಾರಕ್ಕೆ ತೆರಳಿದ್ದ ಸಂದರ್ಭದಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಮೃತಪಟ್ಟಿರುವ ಶಂಕೆ ಇದೆ ಎಂದು ಪೊಲೀಸರು ಹೇಳಿದ್ದಾರೆ.

ಉತ್ತರ ಪ್ರದೇಶ ವಿಧಾನಸಭೆಯಿಂದ ಕೂಗಳತೆ ದೂರದಲ್ಲಿನ ಬಿಗಿಭದ್ರತೆಯ ಹಜರತ್‌ಗಂಜ್‌ ಪ್ರದೇಶದ ಸರ್ಕಾರಿ ಅತಿಥ ಗೃಹದ ಮುಂಭಾಗವೇ ಅವರ ಮೃತದೇಹ ಪತ್ತೆಯಾಗಿರುವುದು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ಪ್ರಾಥಮಿಕ ತನಿಖೆ ಪ್ರಕಾರ, ಅವರ ಸಾವಿಗೆ ನಿಖರ ಕಾರಣ ಗೊತ್ತಾಗಿಲ್ಲ. ಕೆನ್ನೆಯ ಭಾಗದಲ್ಲಿ ಒಂದು ಗಾಯವಾಗಿರುವುದನ್ನು ಹೊರತುಪಡಿಸಿದರೆ ದೇಹದ ಉಳಿದ ಯಾವ ಭಾಗದಲ್ಲಿಯೂ ಗಾಯಗಳಿರುವುದು ಪತ್ತೆಯಾಗಿಲ್ಲ. ಬೆಳಗ್ಗೆ ದಾರಿಹೋಕರು ಮೃತದೇಹದ ಬಗ್ಗೆ ನೀಡಿದ ಮಾಹಿತಿ ಆಧರಿಸಿ ಪರಿಶೀಲಿಸಿದಾಗ ಅದು ಅನುರಾಗ್‌ ತಿವಾರಿ ಅವರ ಮೃತದೇಹ ಎಂಬುದು ಗೊತ್ತಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಶವ ಪರೀಕ್ಷೆ ಬಳಿಕವೇ ಸಾವಿಗೆ ನಿಖರ ಕಾರಣ ಗೊತ್ತಾಗಲಿದೆ ಎಂದು ಪೊಲೀಸ್‌ ಸೂಪರಿಂಟೆಂಡೆಂಟ್‌ ದೀಪಕ್‌ ಕುಮಾರ್‌ ಹೇಳಿದ್ದಾರೆ.

ಸಂಸದೆ ಶೋಭಾ ಕರಂದ್ಲಾಜೆ ಪತ್ರ
ಈ ಮಧ್ಯೆ, ಅನುರಾಗ್‌ ತಿವಾರಿ ಅನುಮಾನಾಸ್ಪದ ಸಾವಿನ ಕುರಿತು ಉನ್ನತ ಮಟ್ಟದ ತನಿಖೆ ನಡೆಸುವಂತೆ ಕೋರಿ ಸಂಸದೆ ಹಾಗೂ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ಅವರು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರಿಗೆ ಪತ್ರ ಬರೆದಿದ್ದಾರೆ.

ಅನುರಾಗ್‌ ತಿವಾರಿ ಅವರ ಮೃತದೇಹ ಲಕ್ನೋದ ವಸತಿಗೃಹ ಪಕ್ಕದ ರಸ್ತೆಬದಿ ಪತ್ತೆಯಾಗಿದೆ. ಇದರಿಂದಾಗಿ ಅವರ ಸಾವಿನ ಬಗ್ಗೆ ಅನುಮಾನ ಮೂಡುವಂತಾಗಿದೆ. ಸತ್ಯಾಂಶ ಹೊರಬೀಳುವ ಮುನ್ನವೇ ಅವರ ಸಾವಿಗೆ ಪತ್ನಿಯೊಂದಿಗಿನ ಜಗಳ ಕಾರಣ ಎಂಬ ವರದಿಗಳು ಪ್ರಕಟವಾಗುತ್ತಿವೆ. ಆದರೆ, ಈ ಸಾವಿನ ಹಿಂದೆ ಬೇರೆ ಕಾರಣಗಳು ಇವೆ ಎಂಬ ಶಂಕೆಯಿದ್ದು, ಅದನ್ನು ಪತ್ತೆಹಚ್ಚಲು ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಯೋಗಿ ಆದಿತ್ಯನಾಥ್‌ ಅವರಿಗೆ ಬರೆದಿರುವ ಪತ್ರದಲ್ಲಿ ಮನವಿ ಮಾಡಿದ್ದಾರೆ.

ರಾಜ್ಯ ಸರ್ಕಾರ ದಿಗ್ಭ್ರಮೆ
ಯುವ ಐಎಎಸ್‌ ಅಧಿಕಾರಿಯ ನಿಗೂಢ ಸಾವಿಗೆ ರಾಜ್ಯ ಸರ್ಕಾರವೂ ದಿಗ್ಭ್ರಮೆ ವ್ಯಕ್ತಪಡಿಸಿದೆ. ಅನುರಾಗ್‌ ತಿವಾರಿ ಸಾವಿಗೆ ಸಂತಾಪ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಐಎಎಸ್‌ ಅಧಿಕಾರಿಗಳಾದ ಅಭಿರಾಂ ಶಂಕರ್‌ ಹಾಗೂ ಪಂಕಜ್‌ ಕುಮಾರ್‌ ಪಾಂಡೆ ಅವರನ್ನು ಲಕ್ನೋಗೆ ಕಳುಹಿಸಿದ್ದು, ಸಾವಿನ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯುವಂತೆ ಸೂಚಿಸಿದ್ದಾರೆ.ಇನ್ನೊಂದೆಡೆ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರು ಉತ್ತರ ಪ್ರದೇಶದ ಗೃಹ ಸಚಿವರೊಂದಿಗೆ ಮಾತುಕತೆ ನಡೆಸಿ ಪ್ರಕರಣದ ಸಮಗ್ರ ತನಿಖೆ ನಡೆಸಲು ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ.

ಹುಟ್ಟುಹಬ್ಬದಂದೇ ಸಾವು
ಉತ್ತರ ಪ್ರದೇಶದ ಬಹ್ರೈಚ್‌ ಜಿಲ್ಲೆಯವರಾದ ಅನುರಾಗ್‌ ತಿವಾರಿ ಎಂಜಿನಿಯರಿಂಗ್‌ ಪದವೀಧರರು. ಮೃತ ತಿವಾರಿ ಅವರ ಜೇಬಿನಲ್ಲಿ ಪರ್ಸ್‌ ಇದ್ದು, ಅದರಲ್ಲಿನ ಗುರುತು ಚೀಟಿ ಆಧಾರದಲ್ಲಿ ಐಎಎಸ್‌ ಅಧಿಕಾರಿ ಎಂದು ಪೊಲೀಸರು ಪತ್ತೆ ಮಾಡಿದ್ದಾರೆ. ಮೇ 17 ಅವರ ಜನ್ಮದಿನವಾಗಿದ್ದು, 37ನೇ ವರ್ಷಕ್ಕೆ ಕಾಲಿಡುವ ದಿನವೇ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ತಿವಾರಿ ಅವರ ಸಾವು ಉತ್ತರ ಪ್ರದೇಶ ರಾಜಧಾನಿಯಲ್ಲಿ ಒಂದು ಬಗೆಯ ಆಘಾತ ಸೃಷ್ಟಿಸಿದೆ. ಉತ್ತರ ಪ್ರದೇಶದ ವಿಧಿವಿಜ್ಞಾನ ತಜ್ಞರು ಅವರ ಕೂಲಂಕಶವಾಗಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ್ದು, ವರದಿ ಇನ್ನಷ್ಟೇ ನೀಡಬೇಕಿದೆ ಎಂದು ಪೊಲೀಸರು ಹೇಳಿದ್ದಾರೆ.

*”ಕಿರಿಯ ವಯಸ್ಸಿನ ಅನುರಾಗ್‌ ತಿವಾರಿ ಅವರು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಅವರ ಸಾವಿಗೆ ಕಾರಣ ಏನು ಎಂಬುದು ಸ್ಪಷ್ಟವಾಗಿ ಗೊತ್ತಾಗಿಲ್ಲ. ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ಇಬ್ಬರು ಐಎಎಸ್‌ ಅಧಿಕಾರಿಗಳನ್ನು ಲಕ್ನೋಗೆ ಕಳುಹಿಸಲಾಗಿದೆ.
– ಸಿದ್ದರಾಮಯ್ಯ, ಮುಖ್ಯಮಂತ್ರಿ

ಟಾಪ್ ನ್ಯೂಸ್

1-aaa

Bangladesh ಹಿಂಸಾಚಾರ: ಕೋಲ್ಕತಾ ಹಿಂದೂ ಸಂಘಟನೆಗಳ ಭಾರೀ ಪ್ರತಿಭಟನೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Bangladesh ಹಿಂಸಾಚಾರ: ಕೋಲ್ಕತಾ ಹಿಂದೂ ಸಂಘಟನೆಗಳ ಭಾರೀ ಪ್ರತಿಭಟನೆ

arrest-lady

PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ

rain

Tamil Nadu;ಸೈಕ್ಲೋನ್‌ ದುರ್ಬಲವಾದ್ರೂ ಭಾರೀ ಮಳೆ?

NItin Gadkari

2000 ಇಸವಿಯಿಂದ 1.44 ಲಕ್ಷ ಕೋಟಿ ರೂ. ಟೋಲ್‌ ಸಂಗ್ರಹ: ಗಡ್ಕರಿ

Jagan Mohan Reddy

Adani ವಿದ್ಯುತ್‌ ಖರೀದಿ ಅಕ್ರಮ: ಆರೋಪ ತಳ್ಳಿ ಹಾಕಿದ ಜಗನ್‌ ರೆಡ್ಡಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Court-1

Puttur: ಮಹಿಳೆಗೆ ಬೈಕ್‌ ಢಿಕ್ಕಿ; ಸವಾರನಿಗೆ ಶಿಕ್ಷೆ

1-SL

Test; ದಕ್ಷಿಣ ಆಫ್ರಿಕಾ ಎದುರು ನಿಕೃಷ್ಟ ಮೊತ್ತಕ್ಕೆ ಶ್ರೀಲಂಕಾ ಆಲೌಟ್‌

1-aaa

Bangladesh ಹಿಂಸಾಚಾರ: ಕೋಲ್ಕತಾ ಹಿಂದೂ ಸಂಘಟನೆಗಳ ಭಾರೀ ಪ್ರತಿಭಟನೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.