ಇಂದಿನಿಂದ 36 ದಿನ ಬಿಎಸ್‌ವೈ ರಾಜ್ಯ ಪ್ರವಾಸ

Team Udayavani, May 18, 2017, 10:52 AM IST

TOUR.jpg

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಗುರುವಾರದಿಂದ 36 ದಿನಗಳ ರಾಜ್ಯ ಪ್ರವಾಸ ಕೈಗೊಂಡಿದ್ದು, ಒಂದೇ ಪ್ರವಾಸದಲ್ಲಿ ಮೂರು ಉದ್ದೇಶಗಳನ್ನು ಈಡೇರಿಸಿಕೊಳ್ಳಲು ಮುಂದಾಗಿದ್ದಾರೆ. ರಾಜ್ಯಾದ್ಯಂತ ಇರುವ ಬರ ಪರಿಸ್ಥಿತಿ ಅಧ್ಯಯನ ಮತ್ತು ಸರ್ಕಾರ ಕೈಗೊಂಡಿರುವ ಪರಿಹಾರ ಕಾಮಗಾರಿಗಳ ವಾಸ್ತವಿಕ ಚಿತ್ರಣ ತಿಳಿಯುವುದು, ಪಕ್ಷ ಸಂಘಟನೆ ಮತ್ತು ಆಂತರಿಕ ಬಿಕ್ಕಟ್ಟು ಶಮನ ಮಾಡಿ ಒಗ್ಗಟ್ಟು ಮೂಡಿಸುವುದು, ಕಾಂಗ್ರೆಸ್‌ನ ವೋಟ್‌ಬ್ಯಾಂಕ್‌ ಆಗಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದವರನ್ನು ಬಿಜೆಪಿಯತ್ತ ಸೆಳೆದುಕೊಳ್ಳುವುದು ಯಡಿಯೂರಪ್ಪ
ಅವರ ಪ್ರವಾಸದ ಅಜೆಂಡಾ ಆಗಿದೆ.

ಗುರುವಾರ ಬೆಳಗ್ಗೆ ತುಮಕೂರು ಸಿದ್ಧಗಂಗಾ ಮಠದಲ್ಲಿ ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದು ಯಡಿಯೂರಪ್ಪ ಅವರು ಪ್ರವಾಸ ಆರಂಭಿಸಲಿದ್ದಾರೆ. ಈ ವೇಳೆ ಕೇಂದ್ರ ಸಚಿವರಾದ ಅನಂತಕುಮಾರ್‌, ಡಿ.ವಿ.ಸದಾನಂದಗೌಡ, ಉಭಯ ಸದನಗಳ ಪ್ರತಿಪಕ್ಷ ನಾಯಕರಾದ ಜಗದೀಶ್‌ ಶೆಟ್ಟರ್‌, ಕೆ.ಎಸ್‌.ಈಶ್ವರಪ್ಪ ಸೇರಿದಂತೆ ಸಂಸದರು, ಶಾಸಕರು ಸಾಥ್‌ ನೀಡಲಿದ್ದಾರೆ. ದಿನಕ್ಕೊಂದು ಜಿಲ್ಲೆಯಲ್ಲಿ ಪ್ರವಾಸ ಮಾಡಲಿರುವ ಅವರು ಬರ ಅಧ್ಯಯನದ ಬಳಿಕ ಯಾವುದಾದರೂ ಒಂದು ಕಡೆ ಪರಿಶಿಷ್ಟ ಜಾತಿ ಮತ್ತು ಪಂಗಡದ ಕಾಲೋನಿಗಳಿಗೆ ಭೇಟಿ ನೀಡಲಿದ್ದಾರೆ. ಸಂಜೆ ಜಿಲ್ಲೆಯ
ಯಾವುದಾದರೂ ಒಂದು ತಾಲೂಕು ಕೇಂದ್ರದಲ್ಲಿ ಬಹಿರಂಗ ಸಭೆ ನಡೆಸಲಿದ್ದು, ಈ ಸಭೆಯಲ್ಲಿ ಪಕ್ಷದ ಪ್ರಮುಖ ಕಾರ್ಯಕರ್ತರನ್ನು ಒಟ್ಟುಸೇರಿಸುವ ಮೂಲಕ ಸಂಘಟನೆ ಬಲಗೊಳಿಸುವುದರ ಜತೆಗೆ ಅವರಲ್ಲಿರುವ ಅಸಮಾಧಾನವನ್ನೂ ಹೋಗಲಾಡಿಸುವ ಪ್ರಯತ್ನ ಮಾಡಲಿದ್ದಾರೆ. ಗುರುವಾರ ತುಮಕೂರಿನಿಂದ ಆರಂಭವಾಗುವ ಪ್ರವಾಸ ಜೂ.29ರಂದು ವಿಜಯಪುರದಲ್ಲಿ ಅಂತ್ಯಗೊಳ್ಳಲಿದೆ. ತಮ್ಮ ಪ್ರವಾಸ ಮುಗಿಯುವುದರೊಳಗಾಗಿ ಪಕ್ಷದಲ್ಲಿ ಉದ್ಭವಿಸಿರುವ ಭಿನ್ನಾಭಿಪ್ರಾಯ ದೂರವಾಗುವ ನಿರೀಕ್ಷೆಯನ್ನು ಯಡಿಯೂರಪ್ಪ ಇಟ್ಟುಕೊಂಡಿದ್ದಾರೆ. ಆಗಸ್ಟ್‌ ಮೊದಲ
ವಾರ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ರಾಜ್ಯಕ್ಕೆ ಆಗಮಿಸುವ ವೇಳೆ ಪಕ್ಷದಲ್ಲಿ ಎಲ್ಲವೂ ಸರಿಯಾಗಿದೆ ಎಂಬ ವಾತಾವರಣ ಸೃಷ್ಟಿಸಲು ಅವರು ಈ ಪ್ರವಾಸವನ್ನು ಬಳಸಿಕೊಳ್ಳುತ್ತಿದ್ದಾರೆ.

ಅನ್ಯ ಪಕ್ಷದವರು ಬಿಜೆಪಿಗೆ
ಬೆಂಗಳೂರು:
ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ನಿಂದ ಇನ್ನೂ ಸಾಕಷ್ಟು ಮುಖಂಡರು ಬಿಜೆಪಿಗೆ ಸೇರಲಿದ್ದು, ರಾಜ್ಯದಲ್ಲಿ ಬಿಜೆಪಿ ಪರ ರಾಜಕೀಯ ಧ್ರುವೀಕರಣ ಆರಂಭವಾಗಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ
ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ. ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬುಧವಾರ ಹಾಸನ ಜಿಲ್ಲೆ ಅರಸೀಕೆರೆಯ ಮಾಜಿ ಶಾಸಕ ಕೆ.ಪಿ.ಪ್ರಭುಕುಮಾರ್‌ ಮತ್ತಿತರರನ್ನು ಪಕ್ಷಕ್ಕೆ ಬರಮಾಡಿಕೊಂಡ ಬಳಿಕ
ಅವರು ಮಾತನಾಡಿದರು. ಇದೇ ವೇಳೆ ಬೆಳಗಾವಿ ಜಿಲ್ಲೆಯ ವಾಸೀಂ ಮಲ್ಕೇವಾಲಾ, ಕಿರುಗಾವಲು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಎಚ್‌. ಮಹದೇವು ಅವರು ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದರು. ಮಾಜಿ ಸಚಿವ ಲಕ್ಷ್ಮಣ ಸವದಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್‌, ಅಲ್ಪಸಂಖ್ಯಾತರ ಮೋರ್ಚಾ ಅಧ್ಯಕ್ಷ ಅಬ್ದುಲ…
ಅಜೀಂ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.