ನಳದಲ್ಲಿ ಚರಂಡಿ ನೀರು ಮಿಶ್ರಣ: ಆಕ್ರೋಶ


Team Udayavani, May 19, 2017, 3:21 PM IST

hub2.jpg

ಹುಬ್ಬಳ್ಳಿ: ಇಲ್ಲಿನ ಉಣಕಲ್ಲ ಶ್ರೀನಗರದಲ್ಲಿನ ನಿವಾಸಿಗಳಿಗೆ ನಳದಲ್ಲಿ ಒಳಚರಂಡಿ ತ್ಯಾಜ್ಯದ ಮಿಶ್ರಣಗೊಂಡ ನೀರು ಸರಬರಾಜು ಆಗುತ್ತಿದ್ದು, ಇದರಿಂದ ಈ ಪ್ರದೇಶದ ನಿವಾಸಿಗಳು ಹೈರಾಣಾಗಿದ್ದಾರೆ.

ಶ್ರೀನಗರವು ಸುಮಾರು 35 ವರ್ಷದ ಹಳೆಯ ಬಡಾವಣೆಯಾಗಿದ್ದು, ಇದರ ಪಕ್ಕದ ಬಡಾವಣೆಗಳಾದ ತಾಜ್‌ನಗರ, ಅಂಬಿಕಾನಗರ, ರವೀಂದ್ರನಗರ ಪ್ರದೇಶಗಳ ಚರಂಡಿಗಳು ಕುಡಿಯುವ ನೀರು ಸರಬರಾಜಾಗುವ ಕೊಳವೆ ಜೊತೆ ಸೇರಿಕೊಂಡಿವೆ.

ಹೀಗಾಗಿ ನಳದ ನೀರಿನಲ್ಲಿ ಚರಂಡಿ ಮಿಶ್ರಿತ ನೀರು ಪೂರೈಕೆಯಾಗುತ್ತಿದೆ. ಬಡಾವಣೆಗಳು ಹೆಚ್ಚಿದಂತೆ ಈ ಭಾಗದಲ್ಲಿ ಒಳಚರಂಡಿಯ ಕೊಳವೆ ಮಾರ್ಗವು ವಿಸ್ತೀರ್ಣಗೊಂಡಿಲ್ಲ. ಕೊಳವೆಯು ಚಿಕ್ಕದಾಗಿದ್ದರಿಂದ ಗಲೀಜು ನೀರೆಲ್ಲ ತುಂಬಿ ರಸ್ತೆ ತುಂಬೆಲ್ಲ ಹರಿಯುತ್ತದೆ.

ಈ ಭಾಗದ ಜನರು ಕಳೆದ ಒಂದು ವರ್ಷದಿಂದಲೂ ಗಲೀಜು ನೀರನ್ನೇ ಕುಡಿಯುವುದು ಹಾಗೂ ಬಳಸುವುದು ಮಾಡುತ್ತಿದ್ದಾರೆ. ಹೀಗಾಗಿ ಇಲ್ಲಿನ ಜನರಿಗೆ ಒಂದಿಲ್ಲೊಂದು ರೋಗಗಳು ಹುಟ್ಟಿಕೊಳ್ಳುತ್ತಿವೆ.

ಈ ಕುರಿತು ಜನಪ್ರತಿನಿಧಿಗಳಿಗೆ, ಪಾಲಿಕೆಯ ಅಧಿಕಾರಿಗಳ ಗಮನಕ್ಕೆ ತಂದರೂ ಕ್ಯಾರೆ ಎನ್ನುತ್ತಿಲ್ಲವೆಂದು ನಿವಾಸಿಗಳು ದೂರುತ್ತಿದ್ದಾರೆ. ಈಗ ಮೊದಲೇ 10-12 ದಿನಕ್ಕೊಮ್ಮೆ ನೀರು ಬರುತ್ತಿದೆ. ಜನರು ನೀರಿನ ಸಮಸ್ಯೆ ಅನುಭವಿ ಸುತ್ತಿರುವಾಗ ನಳದಲ್ಲಿ ಗಲೀಜು ಮಿಶ್ರಿತ ನೀರು ಬಂದರೆ ಅದನ್ನು ಸಂಗ್ರಹಿಸಿ ಇಟ್ಟುಕೊಳ್ಳುವುದಾದರೂ ಹೇಗೆ?

ಜನಪ್ರತಿನಿಧಿಳಾದವರೂ ಹಾಗೂ ಸಾರ್ವಜನಿಕ ಸೇವಾ ಕ್ಷೇತ್ರದಲ್ಲಿರುವ ಅಧಿಕಾರಿಗಳು  ಜನರ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ಹೇಗೆ ಎಂದು ಶ್ರೀನಗರ ಬಡಾವಣೆಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. 

ಟಾಪ್ ನ್ಯೂಸ್

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

Mulki-kambala

Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ

IND-W vs WI: ವನಿತೆಯರ ಏಕದಿನ ಮುಖಾಮುಖಿ

IND-W vs WI: ವನಿತೆಯರ ಏಕದಿನ ಮುಖಾಮುಖಿ

GST

Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ

fadnavis

Maharashtra; ಫ‌ಡ್ನವೀಸ್‌ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Battery theft at Dharwad District Collector’s Office

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

13-

Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ

AV-Bellad

Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್‌

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

2

Kasaragod: ಮರಳಿ ಬಂದ ಯುವಕ – ಯುವತಿ ಮತ್ತೆ ನಾಪತ್ತೆ

Mulki-kambala

Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.