25ರಂದು ಕಸಾಪ ಸಂಸ್ಥಾಪನಾ ದಿನಾಚರಣೆ

Team Udayavani, May 19, 2017, 5:00 PM IST

gul5.jpg

ಚಿತ್ತಾಪುರ: ಪಟ್ಟಣದ ತಾಪಂ ಸಭಾಂಗಣದಲ್ಲಿ ಮೇ 25ರಂದು ಬೆಳಗ್ಗೆ 10:00ಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ನಿಮಿತ್ತ ವಿಶೇಷ ಉಪನ್ಯಾಸ ಮತ್ತು ಸಾಧಕರಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲು ಸರ್ವಾನುಮತದಿಂದ ನಿರ್ಧರಿಸಲಾಗಿದೆ ಎಂದು ಕಸಾಪ ತಾಲೂಕು ಅಧ್ಯಕ್ಷ ಕಾಶಿನಾಥ ಗುತ್ತೇದಾರ, ಗೌರವ ಕಾರ್ಯದರ್ಶಿ ಸಿದ್ದಲಿಂಗ ಬಾಳಿ ತಿಳಿಸಿದ್ದಾರೆ. 

ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಈ ಭಾರಿ ಕಸಾಪ ಸಂಸ್ಥಾಪನಾ ದಿನಾರಚಣೆಯನ್ನು ಬಹಳ ಅರ್ಥಪೂರ್ಣವಾಗಿ ಮಾಡಲು ನಿರ್ಧರಿಸಲಾಗಿದೆ. ವಿಶೇಷ ಉಪನ್ಯಾಸ ಸೇರಿದಂತೆ ಪಿಎಸ್‌ಐ ಮತ್ತು ಕೆಎಎಸ್‌ ಅಧಿಕಾರಿಗಳಾಗಿ ನೇಮಕವಾದ ತಾಲೂಕಿನ ಸಾಧಕರನ್ನು ಸನ್ಮಾನಿಸಲಾಗುವುದು ಎಂದು ಹೇಳಿದರು. 

ಕಸಾಪ ಜಿಲ್ಲಾಧ್ಯಕ್ಷ ವೀರಭದ್ರ ಸಿಂಪಿ ಕಾರ್ಯಕ್ರಮ ಉದ್ಘಾಟಿಸುವರು. ಕನ್ನಡ ಸಾಹಿತ್ಯ ಬೆಳವಣಿಗೆಯಲ್ಲಿ ಕಸಾಪ ಪಾತ್ರ ಕುರಿತು ಸಾಹಿತಿ ಮುಡಬಿ ಗುಂಡೇರಾವ ಸೇಡಂ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಕಸಾಪ ತಾಲೂಕು ಅಧ್ಯಕ್ಷ ಕಾಶಿನಾಥ ಗುತ್ತೇದಾರ ಅಧ್ಯಕ್ಷತೆ ವಹಿಸುವರು. 

ಮುಖ್ಯ ಅತಿಥಿಗಳಾಗಿ ತಹಶೀಲ್ದಾರ ಮಲ್ಲೇಶಾ ತಂಗಾ, ತಾಪಂ ಅಧ್ಯಕ್ಷ ಜಗದೇವರೆಡ್ಡಿ ಪಾಟೀಲ, ಕಾರ್ಯನಿರ್ವಾಹಕ ಅಧಿಕಾರಿ ಲಕ್ಷಣ ಶೃಂಗೇರಿ, ಪುರಸಭೆ ಅಧ್ಯಕ್ಷೆ ಅನ್ನಪೂರ್ಣ ಹೋತಿನಮಡಿ, ಕ್ಷೇತ್ರ ಶಿಕ್ಷಣಾಧಿಧಿಕಾರಿ ಶಿವಶರಣಪ್ಪ ಬನ್ನಿಕಟ್ಟಿ, ಕೆಆರ್‌ ಐಡಿಎಲ್‌ ಎಇಇ ಬಿ.ಎಸ್‌. ಪಾಟೀಲ, ಕೆಪಿಸಿಸಿ ಸದಸ್ಯ ನಾಗರೆಡ್ಡಿ ಪಾಟೀಲ ಕರದಾಳ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಭೀಮಣ್ಣ ಸಾಲಿ,

ಬಿಜೆಪಿ ಅಧ್ಯಕ್ಷ ಮಲ್ಲಿಕಾರ್ಜುನ ಎಮ್ಮೆನೋರ, ಹಿರಿಯ ಸಾಹಿತಿ ವೀರಯ್ಯಸ್ವಾಮಿ ಸ್ಥಾವರಮಠ ಆಗಮಿಸಲಿದ್ದಾರೆ. ಜಿಲ್ಲಾ ಉತ್ತಮ ಸಿಪಿಐ ಪ್ರಶಸ್ತಿ ಪುರಸ್ಕೃತ ಶಂಕರಗೌಡ ಪಾಟೀಲ, ರಾಯಚೂರು ಕೃಷಿ ವಿವಿ ನಿರ್ದೇಶಕಿ ಸಾವಿತ್ರಿ ನಾಗಣ್ಣ, ಇವಣಿ ಕೆಎಎಸ್‌, ಸಂತೋಷರಾಣಿ ಕೆಎಎಸ್‌, ವಿಶ್ವನಾಥ ಅಲ್ಲೂರ ಪಿಎಸ್‌ಐ,

ಆನಂದ ಕಾಶಿ ಪಿಎಸ್‌ಐ, ವಿಜಯಕುಮಾರ ಚವ್ಹಾಣ ಅಳ್ಳೋಳ್ಳಿ ಪಿಎಸ್‌ಐ, ಗೌತಮ ರಾಠೊಡ ಪಿಎಸ್‌ಐ, ಸಂಗೀತಾ ಬಮ್ಮನಳ್ಳಿ ಪಿಎಸ್‌ಐ, ಅಕ್ಕನಾಗಮ್ಮ ನರೇಂದ್ರಕಪುರ ಮುಧೋಳ ಪಿಎಚ್‌ಡಿ, ಶಿವಲೀಲಾ ಶಾಂತಲಿಂಗ ಮಠಪತಿ ಪಿಎಚ್‌ಡಿ ಪದವಿ ಪಡೆದ ಸಾಧಕರನ್ನು ವಿಶೇಷವಾಗಿ ಸನ್ಮಾನಿಸಲಾಗುವುದು ಎಂದು ಹೇಳಿದರು. 

ಬರುವ ದಿನಗಳಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಮ್ಮೇಳನದ ಸ್ಮರಣ ಸಂಚಿಕೆ ಬಿಡುಗಡೆ, ರಾಜ್ಯೋತ್ಸವ ಪ್ರಶಸ್ತಿ ನೀಡುವುದು, ತಾಲೂಕಿನಾದ್ಯಂತ ಸಾಹಿತ್ಯ ರಥಯಾತ್ರೆ, ನಾಟಕ ಪ್ರದರ್ಶನ, ಸಾಹಿತ್ಯ ನಡಿಗೆ ಶಾಲೆ ಕಡೆಗೆ ಕಾರ್ಯಕ್ರಮಗಳು ಮಾಡುವ ಕುರಿತು ಸುದೀರ್ಘ‌ ಚರ್ಚೆ ನಡೆಸಲಾಯಿತು.

ರಾಜಶೇಖರ ಬಳ್ಳಾ, ನರಸಪ್ಪ ಚಿನ್ನಕಟ್ಟಿ, ಜಗದೇವ ದಿಗ್ಗಾಂವಕರ್‌, ದೇವಪ್ಪ ನಂದೂರಕರ್‌, ಸುರೇಶ ಕುಲಕರ್ಣಿ, ಮಹ್ಮದ್‌ ಇಬ್ರಾಹಿಂ, ವೀರಣ್ಣ ಶಿಲ್ಪಿ, ಮಹೇಶ ಜಾಯಿ, ಶಾಂತಕುಮಾರ ಮಳಖೇಡ, ಮಹೇಶ ಕಾಶಿ ಇದ್ದರು.  

ಟಾಪ್ ನ್ಯೂಸ್

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewewqe

Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ

Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ

ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್‌

ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್‌

SIddu-Phone

Kalaburagi: ಪತಿ ಕೊಲೆ ಪ್ರಕರಣ ತನಿಖೆಗಾಗಿ ಸಿಎಂಗೆ ಮನವಿ ಸಲ್ಲಿಸಿದ ಪತ್ನಿ; ಎಸ್‌ಪಿಗೆ ಕರೆ 

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.