ಕನ್ನಡದಲ್ಲಿ ತೀರ್ಪು ನೀಡಿದ ನ್ಯಾಯಾಧೀಶರಿಗೆ ಸನ್ಮಾನ
Team Udayavani, May 20, 2017, 10:44 AM IST
ಬೆಂಗಳೂರು: ಸ್ಥಳೀಯ ನ್ಯಾಯಾಲಯಗಳಲ್ಲಿ ಕನ್ನಡ ಅನುಷ್ಠಾನಕ್ಕೆ ಕೆಲವು ಕ್ಲಿಷ್ಟತೆಗಳಿದ್ದು, ಅವುಗಳನ್ನು ದೂರ ಮಾಡಿ ಕನ್ನಡದಲ್ಲೇ ಕೋರ್ಟ್ ಕಾರ್ಯ ಕಲಾಪಗಳು ನಡೆದು ತೀರ್ಪು ನೀಡುವಂತಾಗಲು ರಾಜ್ಯ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರವು ವಿಧಾನ
ಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಹಮ್ಮಿ ಕೊಂಡಿದ್ದ 2015-16 ಹಾಗೂ 2016-17ನೇ ಸಾಲಿನಲ್ಲಿ ಕನ್ನಡದಲ್ಲಿ ತೀರ್ಪು ನೀಡಿದ 69 ನ್ಯಾಯಾಧೀಶರು ಹಾಗೂ ಕನ್ನಡದಲ್ಲಿ ವಾದ ಮಂಡಿಸಿದ 19 ಸರ್ಕಾರಿ ಅಭಿಯೋಜಕರಿಗೆ
ಗೌರವ ಸಮರ್ಪಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಸ್ಥಳೀಯ ಹಾಗೂ ಅಧೀನ ನ್ಯಾಯಾಲಯಗಳಲ್ಲಿ ಕನ್ನಡ ಕಡ್ಡಾಯವಾಗಿ ಅನುಷ್ಠಾನಕ್ಕೆ ಬರಬೇಕು. ಹೈಕೋರ್ಟ್‌ನಲ್ಲೂ ಕನ್ನಡದಲ್ಲೇ ಕಲಾಪ ನಡೆದು, ತೀರ್ಪು ಪ್ರಕಟವಾಗುವಂತಹ ವ್ಯವಸ್ಥೆ ಬಂದರೆ ಒಳ್ಳೆಯದು. 2 ಸಾವಿರ ವರ್ಷ ಇತಿಹಾಸ ಹೊಂದಿರುವ ಸಂಪದ್ಭರಿತ ಭಾಷೆಯಾಗಿರುವ ಕನ್ನಡಕ್ಕೆ ಎಲ್ಲ ಸವಾಲುಗಳನ್ನು ಮೆಟ್ಟಿ ನಿಲ್ಲುವ ಸಾಮರ್ಥಯವಿದೆ. ಈಗ ಕನ್ನಡ ತಂತ್ರಾಂಶ ಮತ್ತು ತಂತ್ರಜ್ಞಾನವೂ ಸಾಕಷ್ಟು ಬೆಳೆದಿದೆ. ಇದನ್ನು ದೃಷ್ಟಿಯಲ್ಲಿಟ್ಟುಕೊಂಡು ನ್ಯಾಯಾಲಯಗಳಲ್ಲಿ ಕನ್ನಡ ಹೇಗೆ ಅನುಷ್ಠಾನಗೊಳಿಸಬಹುದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಶಿಫಾರಸುಗಳನ್ನು ಮಾಡಿದರೆ, ಸರ್ಕಾರ ಅದಕ್ಕೆ ಪೂರಕವಾಗಿ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಸಿದ್ದರಾಮಯ್ಯ ಹೇಳಿದರು.
ನ್ಯಾಯ ಕೋರಿ ಬರುವ ಕಕ್ಷಿದಾರರಲ್ಲಿ ಶೇ.90ರಷ್ಟು ಕನ್ನಡಿಗರೇ ಇರುತ್ತಾರೆ. ಕನ್ನಡದಲ್ಲೇ ಕಲಾಪಗಳು ನಡೆದು, ತೀರ್ಪು ಪ್ರಕಟಗೊಂಡರೆ, ನ್ಯಾಯಾಲಯದಲ್ಲಿ ಏನಾಯಿತು, ತೀರ್ಪು ಪರ ಅಥವಾ ವಿರೋಧ ಬರಲು ಕಾರಣ ಏನು
ಎಂದು ಕಕ್ಷಿದಾರರಿಗೆ ಅರ್ಥ ಮಾಡಿಕೊಳ್ಳಲು ಸಹಾಯವಾಗುತ್ತದೆ. ನ್ಯಾಯಾಧೀಶರು, ಸರ್ಕಾರಿ ಅಭಿಯೋಜಕರಂತೆ ಕನ್ನಡದಲ್ಲಿ ವಾದ ಮಂಡಿಸಿದ ವಕೀಲರಿಗೂ ಸನ್ಮಾನಿಸುವ ಕಾರ್ಯಕ್ರಮ ಪ್ರಾಧಿಕಾರ ಜಾರಿಗೆ ತರಬೇಕು ಎಂದು ಇದೇ ವೇಳೆ ಮುಖ್ಯಮಮತ್ರಿಗಳು ಸಲಹೆ ನೀಡಿದರು.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಎಸ್.ಜಿ. ಸಿದ್ದರಾಮಯ್ಯ ಮಾತನಾಡಿ, ಸರ್ಕಾರ, ಇಲ್ಲಿನ ನೆಲದ ಭಾಷೆಗಳಾಗಿರುವ ತುಳು, ಕೊಡವ, ಕೊಂಕಣಿ, ಬ್ಯಾರಿ, ಉರ್ದು ಅರೆ ಭಾಷೆಗಳನ್ನೂ ಸಮಾನ ಘನತೆ ಗೌರವಗಳಿಂದ
ಬೆಳೆಸುತ್ತಿದೆ. ಕನ್ನಡ-ಕನ್ನಡಿಗ-ಕರ್ನಾಟಕ ಎನ್ನುವ ಧ್ಯೇಯದೊಂದಿಗೆ ಮುನ್ನಡೆಯುತ್ತಿರುವ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಹಲವಾರು ಕಾರ್ಯ ಕ್ರಮಗಳಲ್ಲಿ “ನ್ಯಾಯಾಂಗದಲ್ಲಿ ಕನ್ನಡ’ ಪ್ರಮುಖ ವಾದದ್ದು. ನ್ಯಾಯಾಂಗದಲ್ಲಿ ಕನ್ನಡ ಬಳಕೆಯಾಗಬೇಕೆನ್ನುವುದು ಸರ್ಕಾರದ ನಿಲುವೂ ಆಗಿರುವುದರಿಂದ ನ್ಯಾಯಾಲಯಗಳಲ್ಲಿ ಕನ್ನಡದಲ್ಲೇ ತೀರ್ಪು ನೀಡುವ ನ್ಯಾಯಾಧೀಶರನ್ನು ಪೋತ್ಸಾಹಿಸುವ ಉದ್ದೇಶದಿಂದ ಪ್ರಾಧಿಕಾರ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ
ಎಂದು ತಿಳಿಸಿದರು. ಸಮಾರಂಭದಲ್ಲಿ ಸಚಿವರಾದ ಟಿ.ಬಿ. ಜಯಚಂದ್ರ, ಕೆ.ಜೆ. ಜಾರ್ಜ್, ಹೈಕೋರ್ಟ್ ನ್ಯಾಯಮೂರ್ತಿ ಎ.ಎಸ್. ಬೋಪಣ್ಣ, ಪ್ರಾಧಿಕಾರದ ಕಾರ್ಯದರ್ಶಿ ಡಾ. ಕೆ. ಮುರಳೀಧರ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ
BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.