ಕಾರಿನ ಗ್ಲಾಸ್‌ ಒಡೆದು 5 ಲಕ್ಷ ಕದ್ದೊಯ್ದ ದುಷ್ಕರ್ಮಿಗಳು


Team Udayavani, May 20, 2017, 12:21 PM IST

5-lakh-robberd.jpg

ಬೆಂಗಳೂರು: ರಸ್ತೆ ಬದಿ ನಿಲ್ಲಿಸಿದ್ದ ಸ್ವಿಪ್ಟ್ ಕಾರಿನ ಗ್ಲಾಸ್‌ ಒಡೆದಿರುವ ದುಷ್ಕರ್ಮಿಗಳು ಕಾರಿನ ಲ್ಲಿದ್ದ 5 ಲಕ್ಷ  ರೂ. ಕದ್ದೊಯ್ದಿರುವ ಘಟನೆ ಜಾಲಹಳ್ಳಿಯ ಎಸ್‌.ಎಂ ರಸ್ತೆಯಲ್ಲಿ ನಡೆದಿದೆ. ಈ ಸಂಬಂಧ ಹಣ ಕಳೆದುಕೊಂಡ ನೆಲ ಮಂಗಲದ ರಾಮಕೃಷ್ಣ (80) ನೀಡಿದ ಅನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನೆಲಮಂಗಲದ ವಾಜರಹಳ್ಳಿಯ ನಿವಾಸಿ ರಾಮಕೃಷ್ಣ, ಗುರುವಾರ ಒಬ್ಬರೇ ಕಾರಿನಲ್ಲಿ ನಗರಕ್ಕೆ ಆಗಮಿಸಿದ್ದು, ಹಣದ ಅವಶ್ಯಕತೆ ಇದ್ದುದ್ದರಿಂದ ಪೀಣ್ಯದಲ್ಲಿರುವ ಸೆಂಟ್ರಲ್‌ ಬ್ಯಾಂಕ್‌ಗೆ ತೆರಳಿ ತಮ್ಮ ಖಾತೆಯಲ್ಲಿದ್ದ  5 ಲಕ್ಷ ರೂ ಡ್ರಾ ಮಾಡಿಕೊಂಡಿದ್ದಾರೆ.

ಬಳಿಕ ಊರಿಗೆ ವಾಪಾಸ್‌ ತೆರಳುವ ಸಂಧರ್ಭದಲ್ಲಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ಜಾಲಹಳ್ಳಿಯ ಎಸ್‌.ಎಂ ರಸ್ತೆ ಬದಿ ಕಾರು ನಿಲ್ಲಿಸಿ, ಹತ್ತಿರದಲ್ಲಿಯೇ ಇದ್ದ ಕೆನರಾ ಬ್ಯಾಂಕ್‌ನಲ್ಲಿ ಆಸ್ತಿ ತೆರಿಗೆ ಪಾವತಿಸಲು ತೆರಳಿದ್ದಾರೆ. ಈ ವೇಳೆ ದುಷ್ಕರ್ಮಿಗಳು ಕಾರಿನ ಗ್ಲಾಸ್‌ ಒಡೆದು ಡ್ಯಾಶ್‌ಬೋರ್ಡ್‌ನಲ್ಲಿಟ್ಟಿದ್ದ 5 ಲಕ್ಷ ರೂ ಕದ್ದು ಪರಾರಿಯಾಗಿದ್ದಾರೆ. ರಾಮಕೃಷ್ಣ ಅವರು ಬ್ಯಾಂಕ್‌ನಿಂದ ವಾಪಾಸಾದ ಬಳಿಕ ಕಳ್ಳತನ ಗೊತ್ತಾಗಿದೆ. 

ಸಿಸಿಟಿವಿಯಲ್ಲಿ ಇಬ್ಬರು ಶಂಕಿತರು: ರಾಮಕೃಷ್ಣ ಅವರ ಬಳಿ ಹಣವಿರುವುದನ್ನು ತಿಳಿದಿದ್ದವರೇ ಆವರನ್ನು ಹಿಂಬಾಲಿಸಿ ಕಳ್ಳತನ ಮಾಡಿರುವ ಸಾಧ್ಯತೆಗಳಿವೆ. ಘಟನಾ ಸ್ಥಳದಲ್ಲಿದ್ದ ಸಿಸಿ ಕ್ಯಾಮೆರಾಗಳನ್ನು ಪೊಲೀಸರು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ. ಇಬ್ಬರು ವ್ಯಕ್ತಿಗಳು ಬೈಕ್‌ನಲ್ಲಿ ಅನುಮಾನಸ್ಪದಾವಾಗಿ ಓಡಾಡು ತ್ತಿರುವುದು ಈ ವೇಳೆ ಕಂಡು ಬಂದಿದೆ. ಜೊತೆಗೆ ದುಷ್ಕರ್ಮಿಗಳ ಬಗ್ಗೆ ಸುಳಿವು ಗೊತ್ತಾಗಿದ್ದು, ಶೀಘ್ರವೇ ಬಂಧಿಸಲಾಗುವುದು ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು.

ಟಾಪ್ ನ್ಯೂಸ್

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

Perth test: Jasprit Bumrah’s bowling style in doubt: What is the controversy?

Perth test: ಜಸ್ಪ್ರೀತ್‌ ಬುಮ್ರಾ ಬೌಲಿಂಗ್‌ ಶೈಲಿ ಅನುಮಾನ: ಏನಿದು ವಿವಾದ?

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

6-1

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

1

Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

9-bng

Bengaluru: ಹನಿಟ್ರ್ಯಾಪ್‌: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

3

Kannada: ವೀರ ಕನ್ನಡಿಗ: ತನು ಕನ್ನಡ, ಮನ(ನೆ) ಕನ್ನಡ

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

1

Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ

8-madikeri

Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.