ಕ್ಯಾಂಟೀನ್‌ ಲಾಂಛನ -ವಿನ್ಯಾಸ ರೆಡಿ


Team Udayavani, May 20, 2017, 12:22 PM IST

canteen.jpg

ಬೆಂಗಳೂರು: ರಿಯಾಯ್ತಿ ದರದಲ್ಲಿ ಉಪಾಹಾರ ಮತ್ತು ಭೋಜನ ವಿತರಿಸುವ “ಇಂದಿರಾ ಕ್ಯಾಂಟೀನ್‌’ ನಿರ್ಮಾಣ, ತಂತ್ರಜ್ಞಾನ, ವಿನ್ಯಾಸ, ಲಾಂಛನ ಸೇರಿದಂತೆ ಇತರೆ ರೂಪುರೇಷೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಅಂತಿಮ ಗೊಳಿಸಿದ್ದಾರೆ. ಇದರ ಬೆನ್ನಲ್ಲೇ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ತಲಾ ಒಂದರಂತೆ 28 ಕ್ಷೇತ್ರಗಳಲ್ಲಿ ಅಡುಗೆ ಮನೆ ನಿರ್ಮಾಣಕ್ಕೂ ಸಿದ್ಧತೆ ಆರಂಭಿಸುವುದಾಗಿ ಪಾಲಿಕೆ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ತಿಳಿಸಿದ್ದಾರೆ.

ಕ್ಯಾಂಟೀನ್‌ಗೆ ಸಂಬಂಧಿಸಿದಂತೆ ಸಿಎಂ ಗೃಹ ಕಚೇರಿ “ಕೃಷ್ಣಾ’ದಲ್ಲಿ ಶುಕ್ರವಾರ ಸಿಎಂ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಪಾಲಿಕೆಯ 198 ವಾರ್ಡ್‌ಗಳಲ್ಲಿ ತಲಾ ಒಂದು ಹಾಗೂ ಕೇಂದ್ರ ಕಚೇರಿಯಲ್ಲಿ ಒಂದು ಸೇರಿದಂತೆ ಒಟ್ಟು 199 ಕ್ಯಾಂಟೀನ್‌ಗಳಿಗೆ ಏಕರೂಪದ ವಿನ್ಯಾಸವನ್ನು ಮುಖ್ಯಮಂತ್ರಿಗಳು ಅಂತಿಮಗೊಳಿಸಿದ್ದಾರೆ.

ಸಾಂಪ್ರದಾಯಿಕ ಶೈಲಿಯಲ್ಲಿ ಕಟ್ಟಡ ನಿರ್ಮಿಸದೆ ಪ್ರೀಕಾಸ್ಟ್‌ ತಂತ್ರಜ್ಞಾನದಡಿ ಕ್ಯಾಂಟೀನ್‌ ನಿರ್ಮಿಸಬೇಕು. ತಲಾ 860 ಚದರ ಅಡಿ ವಿಸ್ತೀರ್ಣದಲ್ಲಿ ಜುಲೈ 15ರೊಳಗೆ ಕ್ಯಾಂಟೀನ್‌ ನಿರ್ಮಾಣ ಕಾರ್ಯ ಪೂರ್ಣಗೊಳಿಸಬೇಕು ಎಂದು ಮುಖ್ಯ ಮಂತ್ರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮಳೆಗಾಲ ಆರಂಭವಾಗಲಿರುವ ಹಿನ್ನೆಲೆ ಯಲ್ಲಿ ಕಾಂಕ್ರೀಟ್‌ ಕಟ್ಟಡವನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಲು ಸಾಧ್ಯವಿಲ್ಲ. ಹಾಗಾಗಿ ಪ್ರೀಕಾಸ್ಟ್‌ ಕನ್‌ಸ್ಟ್ರಕ್ಷನ್‌ ತಂತ್ರಜ್ಞಾನದಡಿ ನಿರ್ಮಾಣಗೊಂಡ ಸಾಮಗ್ರಿಗಳನ್ನು ಬಳಸಿದರೆ ತ್ವರಿತವಾಗಿ ಕ್ಯಾಂಟೀನ್‌ ನಿರ್ಮಿಸಬಹುದು. ಇವು 60 ವರ್ಷಗಳಿಗೂ ಹೆಚ್ಚು ಕಾಲ ಬಾಳಿಕೆ ಬರಲಿವೆ.

ಯಂತ್ರಗಳನ್ನು ಬಳಸಿ ಅಂತಿಮ ಸ್ಪರ್ಶ ನೀಡುವುದರಿಂದ ಆಕರ್ಷಕವಾಗಿಯೂ ಕಾಣುತ್ತವೆ ಎಂಬುದಾಗಿ ಅಧಿಕಾರಿಗಳು ಸಭೆಯಲ್ಲಿ ಪ್ರಸ್ತಾವ ಸಲ್ಲಿಸಿದ್ದಾರೆ. ಇದೇ ಸಂದರ್ಭದಲ್ಲಿ ತಮಿಳುನಾಡು ಮೂಲದ ಕೆಇಎಫ್ ಇನ್‌ಫ್ರಾ ಕಂಪನಿಯು ತಲಾ 32 ಲಕ್ಷ ರೂ. ವೆಚ್ಚದಲ್ಲಿ  ಕ್ಯಾಂಟೀನ್‌ ನಿರ್ಮಿಸಿಕೊಡುವುದಾಗಿ ಪ್ರಸ್ತಾವ ಸಲ್ಲಿಸಿದೆ.

ಸಭೆಯ ಬಳಿಕ ಪ್ರತಿಕ್ರಿಯಿಸಿದ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌, “ಪಾಲಿಕೆ ವ್ಯಾಪ್ತಿಯಲ್ಲಿ ನಿರ್ಮಾಣವಾಗಲಿರುವ 199 ಕ್ಯಾಂಟೀನ್‌ಗಳಿಗೆ ಆಹಾರ ಪೂರೈಸಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಒಂದರಂತೆ 28 ಅಡುಗೆ ಮನೆ ನಿರ್ಮಿಸಲಾಗುವುದು. ಅಡುಗೆಮನೆಗೆ ಅಗತ್ಯವಾದ ಯಂತ್ರೋಪಕರಣಗಳು, ಸಾಧನಗಳನ್ನು ಬಿಬಿಎಂಪಿಯೇ ಸ್ವಂತ ವೆಚ್ಚದಲ್ಲಿ ಪೂರೈಸಲಿದೆ. ಗುಣಮಟ್ಟ ಹಾಗೂ ರುಚಿಯಲ್ಲಿ ಯಾವುದೇ ರಾಜಿಯಿಲ್ಲದಂತೆ ಮಾಡಲು ಈ ಕ್ರಮ ಕೈಗೊಳ್ಳಲಾಗುತ್ತಿದೆ.

ನಿರ್ವಹಣೆಯಲ್ಲಿ ಲೋಪಗಳಾದರೆ ನಿರ್ವಹಣಾ ಟೆಂಡರ್‌ ರದ್ದುಪಡಿಸಲಾಗುವುದು ಎಂದು ಹೇಳಿದರು. ಮೇಯರ್‌ ಜಿ.ಪದ್ಮಾವತಿ ಪ್ರತಿಕ್ರಿಯಿಸಿ, ಸ್ವಯಂಸೇವಾ ಸಂಘಗಳು, ಸ್ತ್ರೀಶಕ್ತಿ ಸಂಘಗಳು ಹಾಗೂ ಸರ್ಕಾರೇತರ ಸಂಘಗಳಿಂದ ಟೆಂಡರ್‌ ಆಹ್ವಾನಿಸಲಾಗುವುದು. ಕನಿಷ್ಠ 33 ಕ್ಯಾಂಟೀನ್‌ ಹಾಗೂ ಅದರ ಅಡುಗೆ ಮನೆಗಳನ್ನು ಸ್ತ್ರೀಶಕ್ತಿ ಸಂಘಗಳಿಗೆ ವಹಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

7-vitla

Vitla: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು

Kane Williamson makes a brilliant comeback

NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್‌ ವಿಲಿಯಮ್ಸನ್‌

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

11

BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Bomb Threat: ಹೋಟೆಲ್‌, ಶಾಲೆ ಆಯ್ತು, ಈಗ ಬ್ಯಾಂಕ್‌ಗೆ ಬಾಂಬ್‌ ಬೆದರಿಕೆ ಇ-ಮೇಲ್‌ ಸಂದೇಶ

Bomb Threat: ಹೋಟೆಲ್‌, ಶಾಲೆ ಆಯ್ತು, ಈಗ ಬ್ಯಾಂಕ್‌ಗೆ ಬಾಂಬ್‌ ಬೆದರಿಕೆ ಇ-ಮೇಲ್‌ ಸಂದೇಶ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

kuladalli keelyavudo kannada movie

Kannada Cinema: ಕ್ಲೈಮ್ಯಾಕ್ಸ್‌ ನತ್ತ ʼಕುಲದಲ್ಲಿ ಕೀಳ್ಯಾವುದೋʼ

7-vitla

Vitla: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು

Kane Williamson makes a brilliant comeback

NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್‌ ವಿಲಿಯಮ್ಸನ್‌

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.