ಮನೆ ಮನೆಗೆ ಕಾಮಗಾರಿ ಮಾಹಿತಿ: ಸಚಿವ ಪ್ರಮೋದ್
Team Udayavani, May 20, 2017, 3:35 PM IST
ಬ್ರಹ್ಮಾವರ: ಜನರ ಸಮಸ್ಯೆಗಳನ್ನು ಆಲಿಸಿ, ಅದಕ್ಕೆ ಪರಿಹಾರ ಕಂಡುಕೊಳ್ಳಲು ರಾಜ್ಯದಲ್ಲೇ ವಿನೂತನವಾದ ಗ್ರಾಮ ಮಟ್ಟದ ಜನಸಂಪರ್ಕ ಸಭೆ ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಜರಗುತ್ತಿದೆ. ಇದಕ್ಕೂ ಮೊದಲು ಗ್ರಾಮದ ಪ್ರತಿ ಮನೆಗೂ ಆಯಾ ಗ್ರಾಮ ವ್ಯಾಪ್ತಿಯಲ್ಲಿ ಕಳೆದ 4 ವರ್ಷಗಳಲ್ಲಿ ನಡೆದ ಅಭಿವೃದ್ದಿ ಕಾಮಗಾರಿಗಳ ಪಟ್ಟಿಯನ್ನು ನೀಡಲಾಗುತ್ತದೆ. ಇದರಿಂದ ಅವ್ಯವಹಾರಕ್ಕೆ, ಭ್ರಷ್ಟಾಚಾರಕ್ಕೆ ಕಡಿವಾಣ ಬೀಳಲಿದೆ ಎಂದು ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.
ಅವರು ಶುಕ್ರವಾರ ಬ್ರಹ್ಮಾವರ ಮದರ್ ಪ್ಯಾಲೇಸ್ ಸಭಾಂಗಣದಲ್ಲಿ ವಾರಂಬಳ್ಳಿ ಗ್ರಾಮ ಮಟ್ಟದ ಜನಸಂಪರ್ಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ಉಡುಪಿ ನಗರ ಸಭೆಯ 35 ವಾರ್ಡ್ ಹಾಗೂ ಗ್ರಾಮಾಂತರದ 30 ಗ್ರಾಮಗಳಲ್ಲಿ ಜನಸಂಪರ್ಕ ಸಭೆ ಆಯೋಜಿಸಲಾಗಿದೆ. ಈಗಾಗಲೇ 30 ಕಡೆಗಳಲ್ಲಿ ಸಭೆ ಪೂರ್ಣಗೊಂಡಿದೆ ಎಂದರು.
ರಾಜ್ಯಸರಕಾರದ ಸಾಧನೆ
ಸಿದ್ದರಾಮಯ್ಯ ಅವರ ಸರಕಾರ ರಾಜ್ಯದಲ್ಲಿ ಆಡಳಿ ತಕ್ಕೆ ಬಂದ ಅನಂತರ ಬಿಪಿಎಲ್ ಕಾರ್ಡ್ ಹಂಚಿಕೆ, ತನ್ಮೂಲಕ ಹತ್ತು ಹಲವು ಸೌಲಭ್ಯ, ಹೈನುಗಾರರಿಗೆ ಪ್ರೋತ್ಸಾಹ, ಉಚಿತ ವಿದ್ಯುತ್ ಸಂಪರ್ಕ, ವಿದ್ಯಾರ್ಥಿಗಳಿಗೆ ಕೊಡುಗೆ, ಸಮಾಜದ ಎಲ್ಲ ವರ್ಗದ ಜನರಿಗೂ ಯೋಜನೆಗಳನ್ನು ಕಲ್ಪಿಸಲಾಗಿದೆ ಎಂದು ಸಚಿವ ಪ್ರಮೋದ್ ಹೇಳಿದರು.
ಈ ಸಂದರ್ಭ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್, ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಸದಸ್ಯ ಮೈರ್ಮಾಡಿ ಸುಧಾಕರ ಶೆಟ್ಟಿ, ತಾ.ಪಂ. ಸದಸ್ಯ ಸುಧೀರ್ ಕುಮಾರ್ ಶೆಟ್ಟಿ, ಮಾಜಿ ಅಧ್ಯಕ್ಷ ನಿತ್ಯಾನಂದ ಶೆಟ್ಟಿ ಹಾರಾಡಿ, ವಿಶೇಷ ತಹಶೀಲ್ದಾರ್ ಪ್ರದೀಪ್ ಕುಡೇìಕರ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಶೇಷಪ್ಪ, ಸತೀಶ್ ಅಮೀನ್ ಪಡುಕರೆ, ಕೆಡಿಪಿ ಸದಸ್ಯ ಉಮೇಶ್ ನಾಯ್ಕ, ಗ್ರಾ.ಪಂ. ಅಧ್ಯಕ್ಷ ನವೀನ್‌ಚಂದ್ರ ನಾಯಕ್, ಸದಸ್ಯರು ಉಪಸ್ಥಿತರಿದ್ದರು.
ವಿವಿಧ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲಾಯಿತು.
ಪಂಚಾಯತ್ ಮಾಜಿ ಅಧ್ಯಕ್ಷರಾದ ಬಿರ್ತಿ ರಾಜೇಶ್ ಶೆಟ್ಟಿ ಸ್ವಾಗತಿಸಿ, ನಿತ್ಯಾನಂದ ಬಿ.ಆರ್. ಪ್ರಸ್ತಾವನೆಗೈದರು. ಸತೀಶ್ಚಂದ್ರ ಶೆಟ್ಟಿ ಚಿತ್ರಪಾಡಿ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ
CT Ravi ಬಂಧನ ಪ್ರಕರಣ; ಗೃಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ
Kaup town: ಟ್ರಾಫಿಕ್ ಒತ್ತಡ, ಪಾರ್ಕಿಂಗ್ ಕಿರಿಕಿರಿ
Udupi: ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ ಸಾಬೀತು; ಆರೋಪಿಗೆ 20 ವರ್ಷ ಜೈಲು ಶಿಕ್ಷೆ ಪ್ರಕಟ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್ ಕ್ಲಾಸ್ ಫ್ಯಾಮಿಲಿ: ರಿಲೀಸ್ ದಿನಾಂಕ ಬಂತು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.