8 ಮೇಲ್ಮನೆ ಸದಸ್ಯರ ಸದಸ್ಯತ್ವ ರದ್ದುಪಡಿಸುವಂತೆ ಮನವಿ
Team Udayavani, May 21, 2017, 11:32 AM IST
ಬೆಂಗಳೂರು: ದೂರದ ಊರಿನ ವಿಳಾಸ ನೀಡಿ ಅಕ್ರಮವಾಗಿ ಸಾರಿಗೆ ಭತ್ಯೆ ಪಡೆದು ಸರ್ಕಾರಕ್ಕೆ ವಂಚಿಸುತ್ತಿರುವ ಆರೋಪದ ಮೇಲೆ ಕಾಂಗ್ರೆಸ್ ಹಾಗೂ ಜೆಡಿಎಸ್ನ ಎಂಟು ವಿಧಾನಪರಿಷತ್ ಸದಸ್ಯರನ್ನು ಅನರ್ಹಗೊಳಿಸುವಂತೆ ಕೋರಿ ಬಿಬಿಎಂಪಿ ಪ್ರತಿಪಕ್ಷ ನಾಯಕ ಪದ್ಮನಾಭರೆಡ್ಡಿ ಶನಿವಾರ ವಿಧಾನಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ ಅವರಿಗೆ ದೂರು ಸಲ್ಲಿಸಿದ್ದಾರೆ.
ವಿಧಾನಸೌಧದಲ್ಲಿ ಶನಿವಾರ ವಕೀಲರ ತಂಡದ ಜತೆ ಶಂಕರಮೂರ್ತಿ ಅವರನ್ನು ಭೇಟಿ ಮಾಡಿದ ಪದ್ಮನಾಭರೆಡ್ಡಿ, ಬೆಂಗಳೂರಿನ ವಿಳಾಸ ನೀಡಿ ಬಿಬಿಎಂಪಿ ಮೇಯರ್, ಉಪಮೇಯರ್ ಚುನಾವಣೆಯಲ್ಲಿ ಮತ ಚಲಾವಣೆ ಮಾಡಿರುವ ಎಂಟು ಮಂದಿ ವಿಧಾನ ಪರಿಷತ್ ಸದಸ್ಯರು ಭತ್ಯೆ ಪಡೆಯಲು ತಮ್ಮ ಸ್ವಗ್ರಾಮ ಹಾಗೂ ಸ್ವಂತ ಊರಿನ ವಿಳಾಸ ನೀಡಿದ್ದಾರೆ. ಹೀಗಾಗಿ, ಕೂಡಲೇ ಅವರ ಸದಸ್ವತ್ಯ ರದ್ದುಪಡಿಸುವಂತೆ ಮನವಿ ಮಾಡಿದರು.
ಇವರು ಅಕ್ರಮವಾಗಿ ಸಾರಿಗೆ ಭತ್ಯೆ ಪಡೆದು ವಿಧಾನ ಪರಿಷತ್ ಸದಸ್ಯ ಸ್ಥಾನದ ಗೌರವಕ್ಕೆ ಚ್ಯುತಿ ತಂದಿದ್ದು, ಅವರಿಗೆ ಆ ಸ್ಥಾನದಲ್ಲಿ ಮುಂದುವರಿಯಲು ಅವಕಾಶ ನೀಡಬಾರದು. ವಿಧಾನ ಪರಿಷತ್ ಸದಸ್ಯರಾದ ಕಾಂಗ್ರೆಸ್ನ ಅಲ್ಲಂ ವೀರಭದ್ರಪ್ಪ, ಆರ್.ಬಿ.ತಿಮ್ಮಾಪುರ, ರಘು ಆಚಾರ್, ಎನ್.ಎಸ್.ಬೋಸರಾಜು,
-ಎಸ್.ರವಿ, ಎಂ.ಡಿ.ಲಕ್ಷ್ಮೀನಾರಾಯಣ್, ಜೆಡಿಎಸ್ನ ಸಿ.ಆರ್.ಮನೋಹರ್, ಅಪ್ಪಾಜಿಗೌಡ ಅವರು ಬೆಂಗಳೂರಿನ ವಾಸದ ವಿವರ ನೀಡಿ 2016ರಲ್ಲಿ ನಡೆದ ಮೇಯರ್, ಉಪಮೇಯರ್ ಚುನಾವಣೆಯಲ್ಲಿ ಮತ ಚಲಾಯಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಮನವಿ ಸ್ವೀಕರಿಸಿದ ಶಂಕರಮೂರ್ತಿ ಅವರು ಈ ಬಗ್ಗೆ ಪರಿಶೀಲಿಸುವುದಾಗಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.