ಪರಿಸರ ಸ್ನೇಹಿ ಗಣೇಶ ಮೂರ್ತಿ ಬಳಸಿ


Team Udayavani, May 21, 2017, 12:01 PM IST

mys2.jpg

ಮೈಸೂರು: ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬದಲ್ಲಿ ಪ್ಲಾಸ್ಟರ್‌ ಆಫ್ ಪ್ಯಾರಿಸ್‌ ಹಾಗೂ ವಿಷಕಾರಿ ರಾಸಾಯನಿಕ ಬಣ್ಣ ಬಳಸಿ ತಯಾರಿಸಿರುವ ಗಣೇಶ ಮೂರ್ತಿಗಳನ್ನು ಬಳಸಬಾರದೆಂದು ಮಹಾ ನಗರಪಾಲಿಕೆ ಆಯುಕ್ತ ಜಿ.ಜಗದೀಶ್‌ ಮನವಿ ಮಾಡಿದ್ದಾರೆ.

ವಿಷಕಾರಿ ರಾಸಾಯನಿಕ, ಲೋಹ ಲೇಪದ, ಪ್ಲಾಸ್ಟರ್‌ ಆಫ್ ಪ್ಯಾರಿಸ್‌ನ ಗಣೇಶನ ಮೂರ್ತಿ ಬಳಸಬಾರದು. ಸಾದಾ ಜೇಡಿ ಮಣ್ಣಿನ ಪುಟ್ಟ ಗಣೇಶ ವಿಗ್ರಹವನ್ನು ಸ್ಥಾಪಿಸಿ, ಎಲೆ, ಹೂವುಗಳಿಂದ ಮಾಡಿದ, ನೈಸರ್ಗಿಕ ಬಣ್ಣ ಹಚ್ಚಿದ ಗಣಪನನ್ನೇ ಪೂಜಿಸಬೇಕೆಂದು ಕೋರಿದ್ದಾರೆ.

ಸಾಮೂಹಿಕವಾಗಿ ನಡೆಸುವ ಗಣೇಶನ ಚಪ್ಪರಕ್ಕೆ ಪರಿಸರ ಸ್ನೇಹಿ ವಸ್ತುಗಳನ್ನೇ ಬಳಸಬೇಕು. ಎಲ್ಲೂ ಪ್ಲಾಸ್ಟಿಕ್‌ ವಸ್ತುಗಳ ಬಳಸಬಾರದು. ಬಾವಿ, ಕೆರೆ, ಹೊಳೆಗಳಲ್ಲಿ ಗಣಪತಿ ವಿಸರ್ಜನೆ ಮಾಡಬಾರದು. ಹಾಗೆ ಮಾಡಿದರೆ ಅಂತರ್ಜಲ, ಕುಡಿಯುವ ನೀರಿನ ಸೆಲೆ ಎಲ್ಲವೂ ಮಲಿನಗೊಳ್ಳುತ್ತವೆ. ಬದಲಿಗೆ ಬಕೆಟ್‌ನಲ್ಲಿ, ಸಂಚಾರಿ ವಿಸರ್ಜನಾ ವಾಹನದಲ್ಲಿ ವಿಸರ್ಜಿಸಿ, ಸೂಚಿತ ಕೆರೆಗಳಲ್ಲಿ ವಿಸರ್ಜಿಸುವ ಮುನ್ನ ಹೂವು, ವಸ್ತ್ರ, ಪ್ಲಾಸ್ಟಿಕ್‌ ಹಾರ ಎಲ್ಲವನ್ನೂ ತೆಗೆಯಬೇಕೆಂದು ಮನವಿ ಮಾಡಿದ್ದಾರೆ.

ಪಟಾಕಿ ಬೇಡ: ಗಣಪತಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಸಿಡಿಸಬಾರದು. ಪಟಾಕಿ ಹೊಗೆ ವಿಷಪೂರಿತವಾಗಿರುತ್ತದೆ. ಅಲ್ಲದೆ ರಸ್ತೆ ತುಂಬಾ ಕಸವಾಗುತ್ತದೆ. ಗಣೇಶ ಹಬ್ಬದಲ್ಲಿ ರಸ್ತೆ, ಚರಂಡಿಯಲ್ಲಿ ಹೂವಿನ ಹಾರ, ತಟ್ಟೆ, ಲೋಟ, ಎಲೆ ಎಸೆಯಬಾರದೆಂದು ತಿಳಿಸಿದ್ದಾರೆ.

ತಯಾರಿಕೆ ನಿಷೇಧ: ಗಣೇಶ ಮತ್ತು ಗೌರಿ ಮೂರ್ತಿಗಳನ್ನು ತಯಾರಿಸುವವರು ಹಾಗೂ ಮಾರುವವರು ವಿಷಪೂರಿತ, ರಾಸಾಯನಿಕವುಳ್ಳ ಬಣ್ಣ ಮತ್ತು ಪ್ಲಾಸ್ಟರ್‌ ಆಫ್ ಪ್ಯಾರಿಸ್‌ ಅನ್ನು ಮೂರ್ತಿಗಳ ತಯಾರಿಕೆಗೆ ಉಪಯೋಗಿಸಬಾರದು. ಒಂದು ವೇಳೆ ಈ ರೀತಿಯ ಮೂರ್ತಿಗಳನ್ನು ತಯಾರಿಸುವುದು ಅಥವಾ ಉಪಯೋಗಿಸುವುದು ಕಂಡುಬಂದರೆ ಅಂತಹ ಮೂರ್ತಿಗಳನ್ನು ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಜಪ್ತಿ ಮಾಡಿ ದಂಡ ವಿಧಿಸಲಾಗುವುದು.

ಸಂಬಂಧಪಟ್ಟವರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ಹೂಡಿ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದೆಂದು ತಿಳಿಸಿದ್ದಾರೆ. ನಗರ ಹೊಂದಿರುವ ಪರಿಸರ ಸ್ನೇಹಿ ಹಾಗೂ ಸ್ವತ್ಛನಗರ ಎಂಬ ಗರಿಮೆಯನ್ನು ಕಾಪಾಡಬೇಕೆಂದು ಮಹಾ ನಗರಪಾಲಿಕೆ ಆಯುಕ್ತ ಜಿ.ಜಗದೀಶ್‌ ಸೂಚಿಸಿದ್ದಾರೆ.

ಟಾಪ್ ನ್ಯೂಸ್

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Untitled-5

Kasaragod: ನಗ-ನಗದು ಕಳವು; ಆರೋಪಿ ಬಂಧನ

4

Punjalkatte: ರಾಯಿ; ಯುವಕ ನೇಣು ಬಿಗಿದು ಆತ್ಮಹತ್ಯೆ

Untitled-5

Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ

1-reee

Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್‌ ಕಾಂಚನ್‌ ಆಯ್ಕೆ

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.