ಸ್ವಉದ್ಯೋಗಕ್ಕೆ ಯುವಕರನ್ನು ಪ್ರೋತ್ಸಾಹಿಸಿ


Team Udayavani, May 21, 2017, 4:22 PM IST

hub5.jpg

ಧಾರವಾಡ: ಯುವಶಕ್ತಿ ಈ ದೇಶದ ಬೆನ್ನೆಲುಬು, ಅವರಿಗೆ ತಾಂತ್ರಿಕ ಶಿಕ್ಷಣ ನೀಡಿ ಸ್ವಾವಲಂಬಿ ಜೀವನ ನಡೆಸಲು ಪ್ರೋತ್ಸಾಹ ನೀಡಿದಲ್ಲಿ ಈ ದೇಶದ ಚಿತ್ರಣ ಬದಲಾಗುವುದರಲ್ಲಿ ಸಂದೇಹವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಹೇಳಿದರು. 

ನಗರದ ಜೆ.ಎಸ್‌.ಎಸ್‌ ಆವರಣದಲ್ಲಿ ಜರುಗಿದ ಸ್ಕಿಲ್‌ ಎಕ್ಸಪೋ-2017 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಲಿತವರಿಗೆಲ್ಲ ಉದ್ಯೋಗ ದೊರೆಯುವ ಕಾಲ ಈಗಿಲ್ಲ. ಈಗ ಏನಿದ್ದರೂ ಗುಣಮಟ್ಟವನ್ನು ಕೈಗಾರಿಕೆಗಳು ಅಪೇಕ್ಷಿಸುತ್ತವೆ.

ಯಾವ ಕಾಲೇಜು ಗುಣಮಟ್ಟದ ಶಿಕ್ಷಣ ನೀಡುತ್ತದೆಯೋ ಆ ವಿದ್ಯಾರ್ಥಿಗಳು ಮಾತ್ರ ಉದ್ಯೋಗ ಗಿಟ್ಟಿಸಿಕೊಳ್ಳುತ್ತಾರೆ. ಗುಣಾತ್ಮಕ ಶಿಕ್ಷಣ ಪಡೆಯಲು ತಾಂತ್ರಿಕ ವಸ್ತು ಪ್ರದರ್ಶನಗಳು ಸಹಾಯಕಾರಿಯಾಗುತ್ತವೆ. ಕೇವಲ ನೌಕರಿ ಗೀಳಿಗೆ ಬೀಳದೆ ಸ್ವಉದ್ಯೋಗದ ಕಡೆಗೆ ವಿದ್ಯಾರ್ಥಿಗಳು ಗಮನ ನೀಡಬೇಕು ಎಂದರು. 

ಪಿ. ರಮೇಶ್ಯರ ಮಾತನಾಡಿ, ಮುಂದಿನ ದಿನಗಳಲ್ಲಿ ಈ ತಾಂತ್ರಿಕ ಐ.ಟಿ.ಐ ಮೇಳಗಳನ್ನು ಕೈಗಾರಿಕೆಗಳೊಂದಿಗೆ ಜಂಟಿಯಾಗಿ ಇನ್ನೂ ಪರಣಾಮಕಾರಿಯಾಗಿ ಆಯೋಜಿಸಲಾಗುವುದು ಎಂದರು ಜನತಾ ಶಿಕ್ಷಣ ಸಮಿತಿ ಕಾರ್ಯದರ್ಶಿ ಡಾ| ವಜ್ರಕುಮಾರ ಮಾತನಾಡಿ, ದುಡಿಯುವ ಕೈಗಳಿಗೆ ಆರ್ಥಿಕ ಶಕ್ತಿ ತುಂಬಿದರೆ ದೇಶದ ಆರ್ಥಿಕ ಪರಿಸ್ಥಿತಿ ಸುಧಾರಿಸುವಲ್ಲಿ ಯಾವುದೇ ಸಂಶಯವಿಲ್ಲ ಎಂದರು. 

ಜನತಾ ಶಿಕ್ಷಣ ಸಮಿತಿಯ ವಿತ್ತಾಧಿಕಾರಿ ಡಾ| ಅಜಿತ ಪ್ರಸಾದ ಮಾತನಾಡಿ, ಅಧ್ಯಾಪಕರು ನಿರಂತರ ಅಧ್ಯಯನಶೀಲರಾಗಬೇಕು. ಆಗ ಮಾತ್ರ ವಿದ್ಯಾರ್ಥಿಗಳಿಗೆ ನೂತನ ತಾಂತ್ರಿಕತೆಯ ಪರಿಚಯ ಮಾಡಲು ಸಾಧ್ಯ. ಈ ಮೇಳಗಳು ನೂತನ ಅವಿಷ್ಕಾರಗಳಿಗೆ ಮೆಟ್ಟಿಲುಗಳಾಗಲಿ ಎಂದರು. 

ಮಹಾವೀರ ಉಪಾಧ್ಯೆ ಮಾತನಾಡಿ, ಐ.ಟಿ.ಐ ಕಾಲೇಜುಗಳ ವಿದ್ಯಾರ್ಥಿಗಳಿಗೆ ಈ ತಾಂತ್ರಿಕ ವಸ್ತು ಪ್ರದರ್ಶನವನ್ನು ಅವರ ಅವಿಷ್ಕಾರ ಮನೋಭಾವನೆಯನ್ನು ಹೊರ ಹಾಕಲು ವೇದಿಕೆಯಾಗಲಿದೆ ಎಂದರು. ಜೆ.ಎಸ್‌.ಎಸ್‌ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಜಿನದತ್ತ ಹಡಗಲಿ ನಿರೂಪಿಸಿದರು. 

ರವೀಂದ್ರ ದ್ಯಾಬೇರಿ ವಂದಿಸಿದರು. ವಸ್ತು ಪ್ರದರ್ಶನದಲ್ಲಿ 35 ಕಾಲೇಜುಗಳ 125 ಮಾದರಿಗಳು ಭಾಗವಹಿಸಿದ್ದವು. ಅದರಲ್ಲಿ ಸೈಕಲ್‌ ಚಾಲಿತ ನೀರಿನ ಪಂಪ್‌, ಫೈರ್‌ ಅಲಾರಾಂ, ಮಳೆ ನೀರು ಸಂಗ್ರಹಣೆ, ಮೊಬೈಲ್‌ ಚಾಲಿತ ಗೃಹಪಯೋಗಿ ವಸ್ತುಗಳು, ವಿದ್ಯಾರ್ಥಿನಿಯರು ತಯಾರಿಸಿದ ಸಿದ್ಧ ಉಡುಪುಗಳ ಮಾದರಿಗಳು ಗಮನ ಸೆಳೆದವು.  

ಟಾಪ್ ನ್ಯೂಸ್

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-

NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ

4-

ಸಿಎಂ ಆಗಿದ್ದವರು ಈ‌ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ

ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

CM-siddu

Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ

b s yediyurappa

By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್‌ ವೈ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.