ಬಸವಣ್ಣ ಪ್ರಬುದ್ಧ ತತ್ವಜ್ಞಾನಿ


Team Udayavani, May 21, 2017, 4:45 PM IST

gul1.jpg

ಶಹಬಾದ: ದೇಶ ಕಂಡ ಅತಿ ಪ್ರಬುದ್ಧ ತತ್ವಜ್ಞಾನಿ ಯಾರಾದರೂ ಇದ್ದರೆ ಅವರು ಬಸವಣ್ಣನವರು ಎಂದು ಐಟಿ-ಬಿಟಿ ಹಾಗೂ ಪ್ರವಾಸೋದ್ಯಮ ಖಾತೆ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು. ನಗರದಲ್ಲಿ ಬಸವಾದಿ ಶರಣರ ಒಕ್ಕೂಟ ಸಮಿತಿ ವತಿಯಿಂದ ಪಾರ್ವತಿ ಸಬಾಂಗಣದಲ್ಲಿ ಆಯೋಜಿಸಲಾಗಿದ್ದ ಬಸವಾದಿ ಶರಣರ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. 

ನಾಡಿನಲ್ಲಿ ಸಂತರು, ಮಹಾತ್ಮರು ಹಾಗೂ ದಾರ್ಶನಿಕರೆಲ್ಲರೂ ಸಮಾನತೆ ಬಗ್ಗೆ ಮಾತನಾಡಿದ್ದಾರೆ. ಆದರೆ ಸಮಾನತೆ ಜತೆಗೆ ಕಾಯಕದ ಬಗ್ಗೆ ಮಾತನಾಡಿದವರು ಬಸವಣ್ಣನವರೇ ಮೊದಲಿಗರು. ಬಸವಣ್ಣನವರ ತತ್ವ ಕಾಯಕ, ದಾಸೋಹ ಹಾಗೂ ಪ್ರಸಾದ ಎಂಬ ಮೂರು ಸ್ತಂಭದ ಮೇಲೆ ನಿಂತಿದೆ.

ಅವರ ತತ್ವಗಳನ್ನೇ ಇಟ್ಟುಕೊಂಡು ಸಿದ್ದರಾಮಯ್ಯನವರ ಸರ್ಕಾರ ಸರ್ವರಿಗೂ ಸಮಬಾಳು ಮತ್ತು ಸಮಪಾಲು ಎಂಬ ನೀತಿ ಅನುಸರಿಸಿಕೊಂಡಿದೆ. ಆದರೆ ಅಧಿವೇಶನದಲ್ಲಿ ಪ್ರತಿಪಕ್ಷದವರು ನಮ್ಮ ಸರ್ಕಾರವನ್ನು ಅಹಿಂದ ಸರ್ಕಾರ ಎಂದು ಅಪವಾದ ಮಾಡುತ್ತಿದ್ದಾರೆ.

ನಮ್ಮ ಸರ್ಕಾರ ಸಮಾಜದ ಎಲ್ಲ ಜನರಿಗೆ ಕ್ಷೀರಭಾಗ್ಯ, ಕೃಷಿಭಾಗ್ಯ, ಆರೋಗ್ಯಭಾಗ್ಯ, ಅನ್ನಭಾಗ್ಯ, ವಿದ್ಯಾಸಿರಿ, ಮನಸ್ವಿನಿ ಸೇರಿದಂತೆ ಅನೇಕ ಯೋಜನೆ ತಂದಿದೆ. ಕೇವಲ ಅಲ್ಪಸಂಖ್ಯಾತರಿಗೆ, ಹಿಂದುಳಿದವರಿಗೆ ಮಾತ್ರವಲ್ಲ. ಆರ್ಥಿಕವಾಗಿ ಹಿಂದುಳಿದ ಯಾವುದೇ ಜನಾಂಗವಿರಲಿ ಅವರಿಗೆ ಯೋಜನೆಗಳು ಒಳಪಡುತ್ತವೆ ಎಂದು ಹೇಳಿದರು. 

12ನೇ ಶತಮಾನದಲ್ಲಿ ನಿರ್ಮಾಣವಾದ ಅನುಭವ ಮಂಟಪದಲ್ಲಿ ಬ್ರಾಹ್ಮಣ ಹಾಗೂ ಮೇಲ್ವರ್ಗದ ಜನರಿರಲಿಲ್ಲ. ಇಪ್ಪತೊಂದನೇ ಶತಮಾನದಲ್ಲಿ ಅನುಭವ ಮಂಟಪ ಮಾಡಲು ನಮ್ಮಿಂದ ಸಾಧ್ಯವೇ ಎಂದು ತಿಳಿದುಕೊಳ್ಳಬೇಕಾಗಿದೆ. ಜಾತಿ ಬಿಡಿ. ಉಪಜಾತಿಗಳಾಗಿ ಇಬ್ಭಾಗ ಮಾಡಿಕೊಂಡಿದ್ದೇವೆ. ಸಮಾಜ ಬೆಳೆಯುತ್ತಿದೆ. 

ಮೌಲ್ಯಗಳನ್ನು ಮರೆಯುತ್ತಿದ್ದೇವೆ ಎಂದು ಹೇಳಿದರು. ಬುದ್ಧನ ನಂತರ ಬಂದ ಬಸವಣ್ಣ ಸಮಾಜದಲ್ಲಿ ಸಮಾನತೆ ಹಾಗೂ ಐಕ್ಯತೆ ಕಾಪಾಡಿದರು. ಆದ್ದರಿಂದ ಯುವಕರು ವ್ಯಕ್ತಿ ಪೂಜೆಗೆ ಮಹತ್ವ ನೀಡದೇ ತತ್ವಪೂಜೆ ಮಾಡಿದರೆ ಸಾಕು ಸ್ವಪ್ರಕಾಶಿತರಾಗಿ ಉತ್ತಮ ಸಮಾಜಕ್ಕೆ ದಾರಿದೀಪವಾಗಿ ಜಗತ್ತನೇ ಬೆಳಗಿಸಬಹುದು ಎಂದು ಹೇಳಿದರು. 

ಗುರುಮಿಠಕಲ್‌ನ ಶಾಂತವೀರ ಮುರುಘರಾಜೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಗೀತಾ ಸಾಹೇಬಗೌಡ ಬೋಗುಂಡಿ ಧ್ವಜಾರೋಹಣ ನೆರವೇರಿಸಿದರು. ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಜಿ. ರಾಮಕೃಷ್ಣ, ಕಲಬುರಗಿ ಮಹಾನಗರ ಪಾಲಿಕೆ ಮಹಾಪೌರ ಶರಣು ಮೋದಿ, ಜಿಪಂ ವಿರೋಧ ಪಕ್ಷದ ನಾಯಕ ಶಿವಾನಂದ ಪಾಟೀಲ, ವಾಡಿ-ಶಹಾಬಾದ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹಾಷಮ್‌ಖಾನ್‌,

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಡಾ| ರಶೀದ್‌ ಮರ್ಚಂಟ್‌, ಮಾಜಿ ನಗರಸಭೆ ಅಧ್ಯಕ್ಷ ಗಿರೀಶ ಕಂಬಾನೂರ, ಕಲಬುರಗಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ| ಮೈಕಲ್‌, ನಗರಸಭೆ ಉಪಾಧ್ಯಕ್ಷೆ ಲಕ್ಷಿಬಾಯಿ ಕುಸಾಳೆ ಇದ್ದರು. ಅಖೀಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಅನಿಲ ಮರಗೋಳ ಅಧ್ಯಕ್ಷತೆ ವಹಿಸಿದ್ದರು. ಶರಣಗೌಡ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಮೃತ್ಯುಂಜಯ ಹಿರೇಮಠ ಸ್ವಾಗತಿಸಿದರು. ವಿಶ್ವನಾಥ ಹಡಪದ ನಿರೂಪಿಸಿ, ವಂದಿಸಿದರು. 

ಟಾಪ್ ನ್ಯೂಸ್

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

1-dsad

Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್‌ನಲ್ಲಿ ಸಿಲುಕಿಕೊಂಡ ಮಹಿಳೆ!!

CHandrababu-Naidu

Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Kalaburagi: ಸಿಎಂ ಸಿದ್ಧರಾಮಯ್ಯ ರಾಜೀನಾಮೆ ಕೊಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ

Kalaburagi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ

1-qwewewqe

Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

7

Test Cricket: ಲಂಕಾ-ನ್ಯೂಜಿಲ್ಯಾಂಡ್‌ ಟೆಸ್ಟ್‌ ಪಂದ್ಯಕ್ಕೆ ರೆಸ್ಟ್‌

Muloor: ಮಹಿಳೆಗೆ ರಿಕ್ಷಾ ಢಿಕ್ಕಿ ; ಗಾಯ

Muloor: ಮಹಿಳೆಗೆ ರಿಕ್ಷಾ ಢಿಕ್ಕಿ ; ಗಾಯ

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

Thekkatte: ಇಸ್ಪೀಟು ಜುಗಾರಿ ಅಡ್ಡೆಯ ಮೇಲೆ ದಾಳಿ

Thekkatte: ಇಸ್ಪೀಟು ಜುಗಾರಿ ಅಡ್ಡೆಯ ಮೇಲೆ ದಾಳಿ

Mangaluru: ಬಾಲಕಿಯ ಅತ್ಯಾಚಾರ; ಆರೋಪಿಗೆ 20 ವರ್ಷ ಕಠಿನ ಶಿಕ್ಷೆ

Mangaluru: ಬಾಲಕಿಯ ಅತ್ಯಾಚಾರ; ಆರೋಪಿಗೆ 20 ವರ್ಷ ಕಠಿನ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.