ಮತ್ತೆ ಥ್ರಿಲ್ಲರ್‌ನಲ್ಲಿ ರಾಧಿಕಾ
Team Udayavani, May 22, 2017, 11:58 AM IST
ಥ್ರಿಲ್ಲರ್, ಮರ್ಡರ್ ಮಿಸ್ಟ್ರಿ ಸಿನಿಮಾಗಳ ಸಂಖ್ಯೆ ಹೆಚ್ಚುತ್ತಿದೆ. ಅದರಲ್ಲೂ ಚಿತ್ರರಂಗಕ್ಕೆ ಬರುವ ಹೊಸಬರಿಗೆ ಆ ಜಾನರ್ ಅಂದರೆ ತುಂಬಾ ಇಷ್ಟದಂತೆ ಕಾಣುತ್ತಿದೆ. ಈಗ ಹೊಸಬರ ತಂಡ ಕೂಡಾ ಥ್ರಿಲ್ಲರ್ ಸಿನಿಮಾದೊಂದಿಗೆ ಬಂದಿದ್ದು, ಚಿತ್ರ ಈಗ ಬಿಡುಗಡೆಯ ಹಂತಕ್ಕೆ ಬಂದಿದೆ. ಅದು “ಬಿಬಿ5′. ಈ ಚಿತ್ರ ಆರಂಭವಾಗಿರುವ ಬಗ್ಗೆ ನಿಮಗೆ ಗೊತ್ತಿರಬಹುದು.
ಈಗ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಬಿಡುಗಡೆಯ ತಯಾರಿಯಲ್ಲಿದೆ. ರಾಧಿಕಾ ಚೇತನ್, ರಾಜೇಶ್ ನಟರಂಗ ಚಿತ್ರದ ಪ್ರಧಾನ ಭೂಮಿಕೆಯಲ್ಲಿದ್ದಾರೆ. ಜನಾರ್ಧನ್ ಎನ್ ಎನ್ನುವವರು ಈ ಸಿನಿಮಾದ ನಿರ್ದೇಶಕರು. ಈಗಾಗಲೇ ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಟ್ರೇಲರ್ ಅನ್ನು ಜನ ಇಷ್ಟಪಟ್ಟ ಖುಷಿ ಚಿತ್ರತಂಡದ್ದು. ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಜನಾರ್ಧನ್, “ಇದೊಂದು ಥ್ರಿಲ್ಲರ್ ಸಿನಿಮಾ.
ಒಂದು ಕೊಲೆಯ ಜಾಡು ಹಿಡಿದು ಇಡೀ ಕಥೆ ಸಾಗುತ್ತದೆ. ಒಬ್ಬ ಉದಯೋನ್ಮುಖ ಬರಹಗಾರ ಹಾಗೂ ಪ್ರಸಿದ್ಧ ಸಿನಿಮಾ ನಿರ್ದೇಶಕ ಭೇಟಿಯಾದ ಮೇಲೆ ದಿಢೀರನೇ ಕಿಡ್ನಾಪ್, ಮರ್ಡರ್ ನಡೆಯುತ್ತದೆ. ಅಷ್ಟಕ್ಕೂ ಈ ಘಟನೆಗಳಿಗೆ ಕಾರಣವೇನು, ಅದರ ಹಿಂದಿರುವ ಕಾರಣಗಳೇನು, ಅಸಲಿಗೆ ಏನು ನಡೆದಿದೆ ಎಂಬುದನ್ನು ತನಿಖೆ ಮಾಡುವುದು ಕಥೆಯ ಲೈನ್’ ಎಂದು ಚಿತ್ರದ ಬಗ್ಗೆ ವಿವರ ಕೊಡುತ್ತಾರೆ.
ಇನ್ನು ಚಿತ್ರದಲ್ಲಿ ನಟಿಸಿರುವ ರಾಧಿಕಾ ಚೇತನ್ ಅವರಿಗೆ “ಬಿಬಿ5′ ಕಥೆ ತುಂಬಾ ಇಂಟರೆಸ್ಟಿಂಗ್ ಅನಿಸಿತಂತೆ. ಹಾಗಾಗಿ ಅವರು ಸಿನಿಮಾ ಒಪ್ಪಿಕೊಂಡರಂತೆ.ಈಗ ಸಿನಿಮಾ ಸಿದ್ಧವಾಗಿದ್ದು, ಟ್ರೇಲರ್‌ಗೆ ಮೆಚ್ಚುಗೆ ವ್ಯಕ್ತವಾಗುತ್ತಿರುವ ಖುಷಿ ರಾಧಿಕಾಗಿದೆ. ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿರುವ ರಾಜೇಶ್ ನಟರಂಗ ಅವರಿಗೆ ಹೊಸಬರ ಜೋಶ್, ಫ್ರೆಶ್‌ನೆಸ್ ಖುಷಿಯಾಯಿತಂತೆ.
ಹೊಸಬರ ತಂಡಕ್ಕೆ ಯಶಸ್ಸು ಸಿಗಲಿ ಎಂಬುದು ರಾಜೇಶ್ ನಟರಂಗ ಮಾತು. ಚಿತ್ರದಲ್ಲಿ ಪೂರ್ಣಚಂದ್ರ ಮೈಸೂರು ರಶ್ಮಿ ಪ್ರಭಾಕರ್ ಪ್ರಮುಖ ಪಾತ್ರ ಮಾಡಿದ್ದಾರೆ. “ಜಟ್ಟ’ ಗಿರಿರಾಜ್ ಇಲ್ಲಿ ನಟನಾಗಿ ಕಾಣಿಸಿಕೊಂಡಿದ್ದು, ಅವರದ್ದು ಒಂದು ಆಸಕ್ತಿಕರ ಪಾತ್ರವಂತೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್ ಅನಿಸಿತು…
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
Upendra: ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ
Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ
Sullia: ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ
Mangaluru: ಎಂಸಿಸಿ ಬ್ಯಾಂಕ್ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ
Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.