ಪುಲ್ವಾಮಾ ಕ್ರಿಕೆಟ್ ಪಂದ್ಯದಲ್ಲಿ ಪಿಓಕೆ ರಾಷ್ಟ್ರಗೀತೆ:ವಿಡಿಯೋ ವೈರಲ್
Team Udayavani, May 22, 2017, 12:13 PM IST
ಶ್ರೀನಗರ : ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಮೊನ್ನೆ ಶನಿವಾರ ನಡೆದಿದ್ದ ಸ್ಥಳೀಯ ಕ್ರಿಕೆಟ್ ಪಂದ್ಯವೊಂದರ ವೇಳೆ ಪಾಕ್ ಆಕ್ರಮಿ ಕಾಶ್ಮೀರದ (ಪಿಓಕೆ) ರಾಷ್ಟ್ರಗೀತೆಯನ್ನು ನುಡಿಸಲಾದ ಪ್ರಚೋದನಾತ್ಮಕ ಘಟನೆ ವರದಿಯಾಗಿದೆ. ಈ ಕುರಿತ ವಿಡಿಯೋ ಚಿತ್ರಿಕೆಯೊಂದು ಇಂಟರ್ನೆಟ್ನಲ್ಲಿ ವೈರಲ್ ಆಗಿದೆ.
ಪುಲ್ವಾಮಾ ಹಂಟರ್ಸ್ ಮತ್ತು ಪ್ಯಾಂಪೋರಾ ಇಲೆವೆನ್ ಎಂಬ ಎರಡು ಸ್ಥಳೀಯ ಕ್ರಿಕೆಟ್ ಪಂದ್ಯಗಳ ನಡುವೆ ಮೊನ್ನೆ ಶನಿವಾರ ಪಂದ್ಯವೊಂದು ನಡೆದಿದ್ದಾಗ ಪಿಓಕೆ ರಾಷ್ಟ್ರಗೀತೆಯನ್ನು ನುಡಿಸಲಾಯಿತು.
ಪಂದ್ಯದ ವೇಳೆ ದರ್ಶಕರಲ್ಲಿ ಕೆಲವರು ಭಾರತ ವಿರೋಧಿ ಘೋಷಣೆಗಳನ್ನು ಕೂಗುತ್ತಿದ್ದುದು ಕೂಡ ಕೇಳಿ ಬಂದಿತ್ತು. ಪೊಲೀಸರು ಈ ಬಗ್ಗೆ ಇನ್ನಷ್ಟೇ ತನಿಖೆ, ಕ್ರಮ ನಡೆಸಬೇಕಾಗಿದೆ.
ಕಳೆದ ತಿಂಗಳಲ್ಲಿ ಕಾಶ್ಮೀರದ ಸ್ಥಳೀಯ ಕ್ರಿಕೆಟ್ ಕ್ಲಬ್ ಒಂದರ ಆಟಗಾರರು ಪಾಕ್ ಕ್ರಿಕೆಟ್ ತಂಡದ ಸದಸ್ಯರು ತೊಡುವ ರೀತಿಯ ಸಮವಸ್ತ್ರವನ್ನು ಧರಿಸಿಕೊಂಡು ಪಂದ್ಯವನ್ನು ಆಡಿದ್ದುದರ ವಿಡಿಯೋ ಭಾರೀ ವೈರಲ್ ಆಗಿತ್ತು. ಹಾಗೆ ಪಾಕ್ ಕ್ರಿಕೆಟ್ ಸಮವಸ್ತ್ರ ಧರಿಸಿದ್ದ ಆಟಗಾರರು ಪಂದ್ಯಾರಂಭಕ್ಕೆ ಮೊದಲು ಪಾಕ್ ರಾಷ್ಟ್ರ ಗೀತೆಯನ್ನು ಕೂಡ ಹಾಡಿ ವಿವಾದ ಸೃಷ್ಟಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India; ಆಸ್ಟ್ರೇಲಿಯ ಸೋಲಿಗಿಂತ ತವರಿನ ವೈಟ್ವಾಶ್ ಆಘಾತಕಾರಿ: ಯುವಿ
ICC Champions Trophy: ಅಫ್ಘಾನಿಸ್ಥಾನ ವಿರುದ್ಧದ ಪಂದ್ಯಕ್ಕೆ ಇಂಗ್ಲೆಂಡ್ ಬಹಿಷ್ಕಾರ?
Jasprit Bumrah: ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ ರೇಸ್ನಲ್ಲಿ ಬುಮ್ರಾ
WTC “ಟೆಸ್ಟ್ ಫೈನಲ್’ಗೂ ಮುನ್ನ ಒಂದು ಟೆಸ್ಟ್ ಆಡಲು ದ. ಆಫ್ರಿಕಾ ಯೋಜನೆ
Team India; ದ್ರಾವಿಡ್ ಇದ್ದಾಗ ಎಲ್ಲ ಸರಿಯಿತ್ತು: ಹರ್ಭಜನ್
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.