ರಾಜ್ಯ ಎಜುಕೇಷನ್‌ ಹಬ್‌ ಆಗಲು ರಾಮಯ್ಯ ಸಂಸ್ಥೆಗಳ ಶ್ರಮ ಅಪಾರ


Team Udayavani, May 22, 2017, 12:41 PM IST

ramaiah.jpg

ಬೆಂಗಳೂರು: ದೇಶದ ಜನರಿಗೆ ಉತ್ತಮ ಆರೋಗ್ಯ, ಶಿಕ್ಷಣ ಸೇರಿದಂತೆ ಮೂಲಸೌಕರ್ಯ ಒದಗಿಸಲು ಖಾಸಗಿ ಕ್ಷೇತ್ರಕ್ಕೆ ಉತ್ತೇಜನ ನೀಡುವುದು ಅವಶ್ಯಕ ಎಂದು ಕೇಂದ್ರ ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು ಹೇಳಿದರು. ನಗರದ ಎಂ.ಎಸ್‌. ರಾಮಯ್ಯ ಆಸ್ಪತ್ರೆ ಹಾಗೂ ಶಿಕ್ಷಣ ಸಂಸ್ಥೆ ಆವರಣದಲ್ಲಿ ಭಾನುವಾರ ನಡೆದ ಡಾ.ಎಂ.ಎಸ್‌ ರಾಮಯ್ಯರವರ ಕಂಚಿನ ಪ್ರತಿಮೆ ಅನಾವರಣ ಹಾಗು ಎಂಎಸ್‌ ರಾಮಯ್ಯ ಸಮೂಹ ಸಂಸ್ಥೆಗಳ ಲಾಂಛನ ಬಿಡುಗಡೆ ಸಮಾರಂಭದಲ್ಲಿ  ಮಾತನಾಡಿದರು.

ಭಾರತ ನಾಲೇಡ್ಜ್ ಹಬ್‌ ಆಗಿದ್ದು, ಕರ್ನಾಟಕ ಎಜುಕೇಷನ್‌ ಹಬ್‌ ಎನಿಸಿಕೊಂಡಿದೆ. ಇದಕ್ಕೆ ಖಾಸಗಿ ಸಂಸ್ಥೆಗಳ ಕೊಡುಗೆ ಸಾಕಷ್ಟಿದೆ. ಎಂ.ಎಸ್‌.ರಾಮಯ್ಯ ಶಿಕ್ಷಣ ಸಂಸ್ಥೆ, ಮಣಿಪಾಲ್‌ ವಿಶ್ವವಿದ್ಯಾಲಯ ಹೀಗೆ ಅನೇಕ ಖಾಸಗಿ ಶಿಕ್ಷಣ ಸಂಸ್ಥೆಗಳು ಇಲ್ಲಿನ ಶೈಕ್ಷಣಿಕ ಗುಣಮಟ್ಟ ಉನ್ನತೀಕರಿಸುವಲ್ಲಿ ಸಹಕಾರಿಯಾಗಿವೆ. ಖಾಸಗಿ ಸಹಭಾಗಿತ್ವದಲ್ಲಿ ಶಿಕ್ಷಣ ಕ್ಷೇತ್ರವನ್ನು ಉನ್ನತೀಕರಿಸಲು ಕೇಂದ್ರ ಸರ್ಕಾರ ಸಿದ್ಧವಾಗಿದೆ ಎಂದು ಹೇಳಿದರು.

ಖಾಸಗಿ ಸಂಸ್ಥೆಗಳು ಯಾವ ಧ್ಯೇಯೋದ್ಧೇಶ ಇಟ್ಟುಕೊಂಡು ಸೇವೆ ಆರಂಭಿಸುತ್ತವೋ ಅದನ್ನು ಸರಿಯಾಗಿ ಪಾಲನೆ ಮಾಡಿದರೆ ಸಾಕು. ಅದಕ್ಕಿಂತ ಹೆಚ್ಚಿನದನ್ನು ಸಮಾಜ ಬಯಸುವುದಿಲ್ಲ. ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ನಡೆಸುವವರು ಹೊರ ದೇಶದವರೇನಲ್ಲ, ಎÇÉಾ ನಮ್ಮ ದೇಶದವರೆ. ಈ ಶಿಕ್ಷಣ ಸಂಸ್ಥೆಗಳು ತಪ್ಪು$ಮಾಡಿದರೆ ನಿಯಂತ್ರಿಸುವ ಅಧಿಕಾರ ಸರ್ಕಾರಕ್ಕೆ ಇರುತ್ತದೆ. ಶಿಕ್ಷಣ ಹಾಗೂ ಆರೋಗ್ಯ ಸೇವೆಯಲ್ಲಿ ಎಂ.ಎಸ್‌. ರಾಮಯ್ಯ ಸಂಸ್ಥೆಯ ಸೇವೆ ಅನುಕರಣೀಯ ಎಂದು ಸಚಿವ ನಾಯ್ಡು ಶ್ಲಾ ಸಿದರು.

ಸಮಾಜದ ಉದ್ಧಾರಕ್ಕಾಗಿ ಮಾಡುವ ಕೆಲಸವನ್ನು ಜನರು ಸದಾ ನೆನಪಿನಲ್ಲಿಟ್ಟುಕೊಳ್ಳುತ್ತಾರೆ.  ಈ ನಿಟ್ಟಿನಲ್ಲಿ ಡಾ.ಎಂ.ಎಸ್‌.ರಾಮಯ್ಯ ಅವರ ಜೀವನ ಸಮಾಜಕ್ಕೆ ಪ್ರೇರಣೆಯಾಗಿದೆ. ಈ ಶಿಕ್ಷಣ ಸಂಸ್ಥೆ ದೇಶ ವಿದೇಶದಲ್ಲೂ ಖ್ಯಾತಿ ಪಡೆದಿದೆ. ಶಿಕ್ಷಣ ಸಂಸ್ಥೆಗಳು ತಮ್ಮ ಶೈಕ್ಷಣಿಕ ಗುಣಮಟ್ಟ ಕಾಯ್ದುಕೊಳ್ಳಬೇಕು. ಭಾರತದಲ್ಲಿ ಸಾಮರ್ಥ್ಯ ಹೊಂದಿದವರು ಎಲ್ಲಾ ಕ್ಷೇತ್ರದಲ್ಲೂ ಇದ್ದಾರೆ. ಟ್ಯಾಲೆಂಟ್‌ ಕೊರತೆ ಇಲ್ಲ.  ವಿಜ್ಞಾನಿ, ಇಂಜಿನಿಯರ್‌, ವೈದ್ಯರು ಹಾಗೂ ಪ್ರಾಧ್ಯಾಪಕರಂತೆ ಇತರೇ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವವರು ಕಾಲಕಾಲಕ್ಕೆ ತಮ್ಮ ಟ್ಯಾಲೆಂಟ್‌ ಅಪ್‌ಗೆÅàಡ್‌ ಮಾಡಿಕೊಳ್ಳುತ್ತಿರಬೇಕು ಎಂದು ಸಲಹೆ ನೀಡಿದರು.

ದೇಶದಲ್ಲಿ ಪ್ರತಿಯೊಂದನ್ನು ರಾಜಕೀಯ ದೃಷ್ಟಿಯಿಂದಲೇ ನೋಡಲಾಗುತ್ತಿದೆ. ಅದು ಸರಿಯಲ್ಲ. ಧರ್ಮ ವೈಯುಕ್ತಿಕವಾಗಿರಬೇಕು. ಹಿರಿಯರನ್ನು ಗೌರವಿಸುವುದು ನಿಜವಾದ ಧರ್ಮ. ದೇಶಕ್ಕೆ, ತಾಯಿಗೆ, ಹಿರಿಯರಿಗೆ ಗೌರವ ನೀಡುವುದು ಸಂಸ್ಕೃತಿ. ಧರ್ಮ ಜೀವನ ಪದ್ಧತಿಯಾಗದರೆ, ಸಂಸ್ಕೃತಿ ನಾವು ನಿರ್ವಹಿಸುವ ಕೆಲಸದ ಆಧಾರದಲ್ಲಿ ನಿರ್ಣಯವಾಗುತ್ತದೆ. ತಾಯಿ, ತಾಯ್ನಾಡು ಮತ್ತು ಮಾತೃಭಾಷೆಯನ್ನು ಎಂದಿಗೂ ಮರೆಯಬಾರದು. ವಿವಿಧತೆಯಲ್ಲಿ ಏಕತೆ ಭಾರತದ ವಿಶೇಷತೆ ಎಂದು ಬಣ್ಣಿಸಿದರು. ದೇಶದ ಅಭಿವೃದ್ಧಿಗೆ ಎಲ್ಲರೂ ಸಮರ್ಪಣಾ ಭಾವದಿಂದ ದುಡಿಯೋಣ. ಈ ನಿಟ್ಟಿನಲ್ಲಿ ಜ್ಞಾನ ನೀಡುವ ಶಿಕ್ಷಣ ಸಂಸ್ಥೆಗಳ ಪಾತ್ರವೂ ದೊಡ್ಡದು ಎಂದರು.

ಎಂ.ಎಸ್‌. ರಾಮಯ್ಯ ಸಂಸ್ಥೆಯ ನೂತನ ಲಾಂಛನ ಬಿಡುಗಡೆ ಮಾಡಿ ಮಾತನಾಡಿದ ಇಸ್ರೋ ಸಂಸ್ಥೆಯ ಅಧ್ಯಕ್ಷ ಕಿರಣ್‌ಕುಮಾರ್‌ ಅವರು, ಇಸ್ರೋ ಸಂಸ್ಥೆ ಜನರ ವಿಶ್ವಾಸದ ಆಧಾರದಲ್ಲಿ ದೇಶದ ಉನ್ನತಿಗೆ ಶ್ರಮಿಸುತ್ತಿದೆ. ಮೀನುಗಾರರು ಸಮುದ್ರದ ಯಾವ ಭಾಗದಲ್ಲಿ ಮೀನು ಹಿಡಿಯಬೇಕು ಮತ್ತು ಹವಾಮಾನ ವರದಿ ಇತ್ಯಾದಿ ಎಲ್ಲವನ್ನು ಅವರ ಪ್ರಾದೇಶಿಕ ಭಾಷೆಯಲ್ಲೇ ಇಸ್ರೋ ನೀಡುತ್ತಿದೆ. ನಮ್ಮಲ್ಲಿ ಲಭ್ಯವಿರುವ ಸೌಲಭ್ಯ ಬಳಸಿಕೊಂಡು ಸತತ ಪರಿಶ್ರಮದ ಮೂಲಕ ಸಮಾಜದ ಒಳಿತಿಗೆ ಬೇಕಾದ ಉತ್ತಮ ಅಂಶವನ್ನು ನೀಡಲು ಸಾಧ್ಯ ಎಂದರು.

ಬಾಹ್ಯಾಕಾಶದಲ್ಲಿ ಇಸ್ರೋ ಸಂಸ್ಥೆಯ ಸಾಧನೆ ಜಗತ್ತಿನ ಗಮನ ಸೆಳೆಯುತ್ತಿದೆ. ನಮ್ಮಲ್ಲಿರುವ ಜ್ಞಾನ ಮತ್ತು ತಂತ್ರಜ್ಞಾನ ಬಳಸಿಕೊಂಡು ಇಸ್ರೋ ಕೆಲಸ ಮಾಡುತ್ತಿದೆ. ಜಗತ್ತು ವೇಗವಾಗಿ ಬದಲಾಗುತ್ತಿದೆ. ಸಾಮಾಜಿಕ ಹಾಗೂ ಭೌಗೋಳಿಕವಾಗಿ ಬದಲಾಗುತ್ತಿದೆ. ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಜ್ಞಾನ ಮತ್ತು ಕೌಶಲ್ಯ ನೀಡುವ ಮೂಲಕ ಹೊಸ ಸಂಶೋಧನೆಗೆ ಒಗ್ಗಿಕೊಳ್ಳುವಂತೆ ಪ್ರೇರಣೆಯಾಗಬೇಕು. ಭವಿಷ್ಯದಲ್ಲಿ ಭಾರತಕ್ಕೆ ಬರುವವರ ಸಂಖ್ಯೆ ಹೆಚ್ಚಾಗಲಿದೆ. ಭವಿಷ್ಯ ಭಾರತದ ಪಾಲಿಗೆ ವರವಾಗಲಿದೆ ಎಂದು ಹೇಳಿದರು.

ಎಂ.ಎಸ್‌. ರಾಮಯ್ಯ ಆಸ್ಪತ್ರೆಯ ಆವರಣದಲ್ಲಿ ಸ್ಥಾಪಿಸಿರುವ ಡಾ.ಎಂ.ಎಸ್‌. ರಾಮಯ್ಯ ಅವರ ಆಳೆತ್ತರದ ಕಂಚಿನ ಪ್ರತಿಮೆಯನ್ನು ಅನಾವರಣ ಮಾಡಲಾಯಿತು.
ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್‌ ಪಾಟೀಲ, ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ, ಗೋಕುಲ ಶಿಕ್ಷಣ ಪ್ರತಿಷ್ಠಾನದ ಉಪಾಧ್ಯಕ್ಷ ಹಾಗೂ ರಾಜ್ಯ ಯೋಜನಾ, ತಂತ್ರಜ್ಞಾನ ಸಚಿವ ಎಂ.ಆರ್‌.ಸೀತಾರಾಮ್‌, ಗೋಕುಲ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಆರ್‌.ಜಯರಾಮ್‌, ಕಾರ್ಯದರ್ಶಿ ಎಂ.ಆರ್‌.ರಾಮಯ್ಯ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಪೆಂಚಕುಂಡ ಪಂಚಿತೆ
ಪೆಂಚಕುಂಡ ಪಂಚಿತೆ, ಪಂಚಕೂಡ ಉಂಡದು….(ಆದಾಯ ವೃದ್ಧಿಸಿಕೊಳ್ಳದೇ ದಾನ ಮಾಡಲು ಹೊರಟರೆ ಪಂಚೆಯೂ ಉಳಿಯುವುದಿಲ್ಲ). ಹೀಗಾಗಿ ಮೊದಲು ಉತ್ತಮ ಮಾರ್ಗದಲ್ಲಿ ಹಣ ಸಂಪಾದನೆ ಮಾಡಬೇಕು. ನಂತರ ಅದರಲ್ಲಿ ಸ್ವಲ್ಪ ಭಾಗವನ್ನು ಸಮಾಜದ ಏಳ್ಗೆಗಾಗಿ ವಿನಿಯೋಗ ಮಾಡಬೇಕು.  ಸಂಪತ್ತು ಸಂಗ್ರಹಿಸದೇ ದಾನ ಮಾಡಿದರೆ, ನಮ್ಮಲ್ಲಿ ಏನೂ ಉಳಿಯುವುದಿಲ್ಲ ಎಂದು  ಸಚಿವ ವೆಂಕಯ್ಯ ನಾಯ್ಡು ಹೇಳಿದರು.

ಟಾಪ್ ನ್ಯೂಸ್

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-bng

Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್‌

17-bng

Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ

16-bng

Bengaluru: ಮರಕ್ಕೆ ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

14-bng

Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್‌!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.