ಹುಣಸೂರಲ್ಲಿ ಭಾರೀ ಮಳೆ: ಜನ ಜೀವನ ಅಸ್ತವ್ಯಸ್ತ


Team Udayavani, May 22, 2017, 1:03 PM IST

mys3.jpg

ಹುಣಸೂರು: ನಗರದಲ್ಲಿ ಶನಿವಾರ ಮಧ್ಯರಾತ್ರಿ ಸುರಿದ ಮಳೆಯಿಂದ ನ್ಯೂ ಮಾರುತಿ ಹಾಗೂ ಮಂಜುನಾಥ ಬಡಾವಣೆಯ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದ್ದು, ರಸ್ತೆಯಲ್ಲಿ ಓಡಾಡಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ತಾಲೂಕಿನ ಹಲವಾರು ಗ್ರಾಮಗಳಲ್ಲಿ ಮನೆ ಹಾಗೂ ತಂಬಾಕು ಬ್ಯಾರನ್‌ ಗಳಿಗೂ ಹಾನಿಯಾಗಿದೆ.

ಭಾರೀ ಮಳೆಯಿಂದಾಗಿ ಬಡಾವಣೆ ಮೇಲ್ಭಾಗದ ವಳ್ಳಿಯಮ್ಮನಕಟ್ಟೆ ತುಂಬಿ ಕೋಡಿ ಬಿದ್ದ ನೀರು ಸರಾಗವಾಗಿ ಹರಿದು ಹೋಗಲು ಚರಂಡಿ ಇಲ್ಲದೆ ನ್ಯೂ ಮಾರುತಿ ಹಾಗೂ ಗೋಕುಲ ಬಡಾವಣೆಯ ಮನೆಗಳಿಗೆ ನುಗ್ಗಿದ್ದರೆ, ಮಂಜುನಾಥ ಬಡಾವಣೆಯ ರಸ್ತೆ ಮೇಲೆ ನೀರು ಹರಿದು ಹತ್ತಾರು ಮನೆಗಳಿಗೆ ನೀರು ನುಗ್ಗಿದೆ. ರಸ್ತೆ  ಮನೆ ಪಕ್ಕದಲ್ಲಿ ನಿಲ್ಲಿಸಿದ್ದ ವಾಹನಗಳು ನೀರುನಲ್ಲಿ ಮುಳುಗಿ ಹೋಗಿದೆ. ಇನ್ನು ತಿಪ್ಪಲಾಪುರ ಹಾಗೂ ನಾಗನಹಳ್ಳಿಗಳಲ್ಲಿ ಮನೆ ಮತ್ತು ತಂಬಾಕು ಹದ ಮಾಡುವ ಬ್ಯಾರನ್‌ ಗಳಿಗೂ ಹಾನಿಯಾಗಿದೆ.

ಮಧ್ಯರಾತ್ರಿಯಲ್ಲಿ ಬಿದ್ದ ಮಳೆಯಿಂದಾಗಿ ಇದರ ಪರಿವೇ ಇಲ್ಲದೆ ಮಲಗಿದ್ದವರು, ಮನೆಯೊಳಗೆ ನೀರು ನುಗ್ಗಿದ್ದನ್ನು ಕಂಡು ಗಾಬರಿಯಾದರು, ಮನೆಯೊಳಗಿದ್ದ ವಸ್ತುಗಳಿಗೆ ಸಹ ಸಾಕಷ್ಟು ಹಾನಿಯಾಗಿದೆ. ರಾತ್ರಿ ಇಡೀ ನಿದ್ದೆ ಮಾಡದೆ ನೀರನ್ನು ಹೊರ ಹಾಕುವ ಕಾರ್ಯದಲ್ಲಿ ನಿರತರಾಗಿದ್ದರು. ಈ ಭಾಗದ ರಸ್ತೆಗಳು ಕೆಸರುಮಯವಾಗಿದ್ದು, ಓಡಾಡಲಾರದಂಥ  ಸ್ಥಿತಿಗೆ ತಲುಪಿದೆ. 

ಮಳೆ ನೀರಿನಿಂದ ಹಾನಿಗೊಳಗಾದ ಪ್ರದೇಶಗಳಿಗೆ ನಗರಸಭಾ ಸದಸ್ಯ ಪ್ರೇಮಾನಂಜಪ್ಪ, ಶ್ರೀನಿವಾಸ್‌ , ಆರ್‌.ಐ. ಸೋಮಶೇಖರ್‌, ಪೌರಾಯುಕ್ತ ಶಿವಪ್ಪನಾಯ್ಕ, ಭೇಟಿ ನೀಡಿ ಪರಿಶೀಲಿಸಿದರು. 1990-92ರಲ್ಲಿ ಮಂಜುನಾಥ ಬಡಾವಣೆಯಲ್ಲಿ ಮನೆ ನಿರ್ಮಿಸಿಕೊಂಡಿದ್ದು, ನಗರಸಭೆಗೆ ಕಟ್ಟಬೇಕಿರುವ ಎಲ್ಲ ತೆರಿಗೆಗಳನ್ನು ಪಾವತಿಸಿದ್ದರೂ ಬಡಾವಣೆ ಅಭಿವೃದ್ಧಿಯಾಗಿಲ್ಲ, ಇಲ್ಲಿನ ದುರವಸ್ಥೆ ನಿಜಕ್ಕೂ ಬೇಸರ ಮೂಡಿಸಿದೆ.

ಪ್ರತಿ ಮಳೆಗಾದಲ್ಲಿ ಖಾಲಿ ನಿವೇಶನ ಹಾಗೂ ಹಳ್ಳದಲ್ಲಿ ನೀರು ನಿಂತು ಸೊಳ್ಳೆಗಳಿಗೆ ಆವಾಸ ಸ್ಥಾನಕ್ಕೆ ನಗರಸಭೆಯೇ ದಾರಿ ಮಾಡಿಕೊಟ್ಟಿದ್ದು, ನೆಮ್ಮದಿಯಾಗಿ ವಾಸಿಸಲಾಗದ ಪರಿಸ್ಥಿತಿ ಇದ್ದು, ಮಳೆ ನೀರು ಹರಿದು ಹೋಗಲು ಸುಸಜ್ಜಿತ ಚರಂಡಿ ಹಾಗೂ ರಸ್ತೆಗಳ ಡಾಂಬರೀಕರಣವಾಗಬೇಕಿದೆ ಎಂದು ಬಡಾವಣೆ ನಿವಾಸಿಗಳು ಆಗ್ರಸಿದ್ದಾರೆ.

ಮಂಜುನಾಥ ಬಡಾವಣೆಯಲ್ಲಿ ಸಂಗ್ರಹಗೊಂಡಿರುವ ಮಳೆ ನೀರನ್ನು ಸೋಮವಾರ ಹೊರ ಕಳುಹಿಸಲಾ ಗುವುದು. ಈಗಾಗಲೆ ಆದರ್ಶ ಶಾಲೆ ರಸ್ತೆಯನ್ನು ನಗರೋತ್ಥಾನ ಯೋಜನೆಯಡಿ 35 ಲಕ್ಷ ರೂ ವೆಚ್ಚದಲ್ಲಿ  ಮುಖ್ಯರಸ್ತೆಯಿಂದ ಛಾಯಾದೇವಿ ಸಂಸ್ಥೆವರೆಗೆ ಎರಡೂ ಕಡೆ ಚರಂಡಿ ಹಾಗೂ ರಸ್ತೆಗಳ ಅಭಿವೃದ್ಧಿಗೊಳಿಸಲಾಗುತ್ತದೆ.
-ಶಿವಪ್ಪನಾಯ್ಕ, ನಗರಸಭೆ ಪೌರಾಯುಕ್ತ

ಟಾಪ್ ನ್ಯೂಸ್

I have not encroached on anyone’s jurisdiction: Modi

Narendra Modi: ನಾನು ಯಾರದ್ದೇ ಅಧಿಕಾರ ವ್ಯಾಪ್ತಿ ಅತಿಕ್ರಮಿಸಿಕೊಂಡಿಲ್ಲ: ಮೋದಿ

Trump imposes no taxes on India, only taxes on Canada and China!

US: ಭಾರತದ ಮೇಲೆ ತೆರಿಗೆ ಇಲ್ಲ, ಕೆನಡಾ, ಚೀನಾಕ್ಕಷ್ಟೇ ತೆರಿಗೆ ವಿಧಿಸಿದ ಟ್ರಂಪ್‌!

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

I have not encroached on anyone’s jurisdiction: Modi

Narendra Modi: ನಾನು ಯಾರದ್ದೇ ಅಧಿಕಾರ ವ್ಯಾಪ್ತಿ ಅತಿಕ್ರಮಿಸಿಕೊಂಡಿಲ್ಲ: ಮೋದಿ

Trump imposes no taxes on India, only taxes on Canada and China!

US: ಭಾರತದ ಮೇಲೆ ತೆರಿಗೆ ಇಲ್ಲ, ಕೆನಡಾ, ಚೀನಾಕ್ಕಷ್ಟೇ ತೆರಿಗೆ ವಿಧಿಸಿದ ಟ್ರಂಪ್‌!

ban

Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.