ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣ ಸಂಸ್ಥೆ ನಡೆಸುವುದು ಕಷ್ಟ
Team Udayavani, May 22, 2017, 1:03 PM IST
ಹುಣಸೂರು: ತಾಲೂಕಿನ ಚಿಲ್ಕುಂದ ಬಳಿ ಎಸ್.ಕೆ ಕಾಳೆಗೌಡ ಕುಟುಂಬದವರು ಸ್ಥಾಪಿಸಿರುವ ಐಕಾನ್ ಇಂಟರ್‌ನ್ಯಾಷನಲ್ ಶಾಲೆಯನ್ನು ಭಾನುವಾರ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಉದ್ಘಾಟಿಸಿದರು.
ಶಾಲಾ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿ, ಗ್ರಾಮಾಂತರ ಪ್ರದೇಶಗಳಲ್ಲಿ ಶಿಕ್ಷಣ ಸಂಸ್ಥೆ ನಡೆಸುವುದು ತುಂಬ ಕಷ್ಟಕರವಾಗಿದ್ದು, ಇದನ್ನು ತಿಳಿದಿದ್ದರು ಸ್.ಕೆ.ರವಿಗೌಡ ಅವರ ಕುಟುಂಬದವರು ಹಳ್ಳಿಯಲ್ಲಿ ಶಿಕ್ಷಣ ಸಂಸ್ಥೆ ಆರಂಭಿಸಿರುವುದು ಅಭಿನಂದನಾರ್ಹವಾಗಿದೆ. ಇದೇ ಸಂಸ್ಥೆ ಬೆಂಗಳೂರಿನಲ್ಲಿ ಶಿಕ್ಷಣ ಸಂಸ್ಥೆ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.
ಗ್ರಾಮೀಣ ಪ್ರದೇಶದ ಮಕ್ಕಳಿಗೆ ಉತ್ತಮ ಶಿಕ್ಷಣ, ಸಂಸ್ಕಾರ ನೀಡುವ ನಿಟ್ಟಿನಲ್ಲಿ ಶಾಲೆ ನಡೆಸಿರೆಂದು ಸಲಹೆ ನೀಡಿದ ಅವರು ಈ ಶಾಲಾ ಕಟ್ಟಡ ನಿರ್ಮಾಣ ಹಂತದಲ್ಲಿದ್ದು, ಮತ್ತೂಮ್ಮೆ ಇಲ್ಲಿಗೆ ಭೇಟಿ ನೀಡುತ್ತೇನೆ ಎಂದು ತಿಳಿಸಿದರು.
ಬೆಟ್ಟದಪುರ ವಿರಕ್ತ ಮಠದ ಶ್ರೀ ಚಿಕ್ಕವೀರದೇಶೀಕೇಂದ್ರ ಸ್ವಾಮೀಜಿ ಮಾತನಾಡಿ, ಪ್ರತಿಯೊಂದು ಶಿಕ್ಷಣ ಸಂಸ್ಥೆಗಳು ಪಠ್ಯದೊಂದಿಗೆ ಈ ದೇಶದ ಶ್ರೀಮಂತ ಸಂಸ್ಕೃತಿ, ಸಂಸ್ಕಾರ ಕಲಿಸುವ, ಸಾಂಸ್ಕೃತಿಕ, ಕ್ರೀಡೆ ಸೇರಿದಂತೆ ಪಠ್ಯೇತರ ಚಟುವಟಿಕೆಗಳಿಗೂ ಪ್ರಾಧಾನ್ಯತೆ ನೀಡುವ ಮೂಲಕ ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಈ ಸಂಸ್ಥೆ ಪೂರಕವಾಗಿ ಕಾರ್ಯ ನಿರ್ವಹಿಸಲಿ ಎಂದು ಆಶಿಸಿದರು.
ವೇದಿಕೆ ಕಾರ್ಯಕ್ರಮವನ್ನು ಎಚ್.ಡಿ.ದೇವೇಗೌಡರು ಜ್ಯೋತಿ ಬೆಳಗಿಸಿ ಉದ್ಘಾಟಿಸಲು ಬಂದಾಗ ಪುತ್ರ ರೇವಣ್ಣ ಆಗಮನವಾಯಿತು, ಆಗ ದೇವೇಗೌ ಡರು ಮಗನಿಂದ ಉದ್ಘಾಟಿಸುವ ಸಲುವಾಗಿ ಹೊತ್ತಿಸಿದ್ದ ಮೊಂಬತ್ತಿ ಹಿಡಿದಿದ್ದ ಅವರು ದೀಪ ಹಚ್ಚದೆ, ಮಾತನಾಡಲು ಫೋಡಿಯಂ ಬಳಿ ತೆರಳಿದ್ದರಿಂದ ಜೊತೆಯಲ್ಲಿದ್ದವರು ಆಶ್ವರ್ಯಚಕಿತರಾದರು, ಕೊನೆಗೆ ವೇದಿಕೆ ಹತ್ತಿದ ರೇವಣ್ಣ ಜ್ಯೋತಿ ಬೆಳಗಿಸಿದರು.
ಅಧ್ಯಕ್ಷತೆ ಶಾಸಕ ಎಚ್.ಪಿ.ಮಂಜುನಾಥ್ ವಹಿಸಿದ್ದರು, ಮಾಜಿ ಸಚಿವ ಎಚ್.ಡಿ.ರೇವಣ್ಣ ಕಾರ್ಯಕ್ರಮ ಉದ್ಘಾಟಿಸಿದರು. ಜಿಪಂ ಮಾಜಿ ಸದಸ್ಯರಾದ ಸಿ.ಟಿ.ರಾಜಣ್ಣ, ತೊಂಡಾಳುರಾಮಕಷ್ಣೇಗೌಡ, ವರ್ಜೀನಿಯಾ ತಂಬಾಕು ಬೆಳೆಗಾರರ ಸಂಘದ ಅಧ್ಯಕ್ಷ ಬಿ.ವಿ.ಜವರೇಗೌಡ, ಜೆಡಿಎಸ್ ನಗರ ಅಧ್ಯಕ್ಷ ಹರೀಶ್‌ಗೌಡ, ಪಿರಿಯಾಪಟ್ಟಣ ಜೆಡಿಎಸ್ ಅಧ್ಯಕ್ಷ ಕೆ.ಮಹದೇವ್, ಸಂಸ್ಥೆಯ ಸಂಸ್ಥಾಪಕ ಎಸ್.ಕೆ.ಕಾಳೇಗೌಡ, ಅಧ್ಯಕ್ಷ ಎಸ್.ಕೆ.ರವಿಗೌಡ, ಕಾರ್ಯದರ್ಶಿ ಎಸ್.ಕೆ.ರಾಮಚಂದ್ರ ಉಪಸ್ಥಿತರಿದ್ದರು.
ಶಾಸಕರು-ಸಂಸದರು ಗೈರು: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಮೆಸೂರು ಜಿಲ್ಲೆಯ ಯಾವುದೇ ಸಮಾರಂಭಕ್ಕೆ ಆಗಮಿಸಿದರೂ ತಪ್ಪದೆ ಭಾಗ ವಹಿಸುತ್ತಿದ್ದ ಶಾಸಕರಾದ ಚಿಕ್ಕಮಾದು, ಸಾ.ರಾ.ಮಹೇಶ್, ಜಿ.ಟಿ.ದೇವೇಗೌಡ ಸೇರಿದಂತೆ ಪಿರಿಯಾಪಟ್ಟಣ ತಾಲೂಕಿನ ಶಾಸಕ ವೆಂಕಟೇಶ್ ಹಾಗೂ ಸಂಸದ ಪ್ರತಾಪಸಿಂಹ, ಮಾಜಿ ಸಂಸದ ವಿಶ್ವನಾಥ್ ಸಹ ಗೈರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ
MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.