ಜಿಲ್ಲಾಧ್ಯಕ್ಷ ಸ್ಥಾನದಿಂದ ಬೆಲ್ಲದ ವಜಾ
Team Udayavani, May 22, 2017, 4:27 PM IST
ಧಾರವಾಡ: ಇಲ್ಲಿನ ಚೆನ್ನಬಸವೇಶ್ವರ ನಗರದಲ್ಲಿ ನೂತನವಾಗಿ ನಿರ್ಮಾಣವಾಗಿರುವ ವೀರಶೈವ ಲಿಂಗಾಯತ ಭವನಕ್ಕೆ ಬೆಲ್ಲದ ಕುಟುಂಬ ಸದಸ್ಯರ ಹೆಸರಿಟ್ಟ ಪ್ರಕರಣ ಕೊನೆಗೂ ವೀರಶೈವ ಮಹಾಸಭೆ ಜಿಲ್ಲಾಧ್ಯಕ್ಷ ಶಿವಣ್ಣ ಬೆಲ್ಲದ ಅವರು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಂತೆ ಮಾಡಿದ್ದು, ಮಾಜಿ ಶಾಸಕ ಶಿವಾನಂದ ಅಂಬಡಗಟ್ಟಿ ಪ್ರಭಾರ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.
ಭವನ ನಿರ್ಮಾಣಕ್ಕೆ 1ಲಕ್ಷ ರೂ. ನೀಡಿದ್ದ 43 ಜನರ ಸದಸ್ಯತ್ವವನ್ನು ಅಖೀಲ ಭಾರತ ವೀರಶೈವ ಮಹಾಸಭೆ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ರದ್ದು ಗೊಳಿಸಿದ್ದರಿಂದ ಅನಿವಾರ್ಯವಾಗಿ ಶಿವಣ್ಣ ಬೆಲ್ಲದ ಅವರು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಬೇಕಾಯಿತು.
ಕಳೆದ ಕೆಲವು ದಿನಗಳಿಂದ ಮಹಾಸಭೆಯ ಪದಾಧಿಕಾರಿಗಳು ಶಿವಣ್ಣ ಬೆಲ್ಲದ ಅವರಿಗೆ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವಂತೆ ಕೋರಿದ್ದರೂ ಪ್ರಯೋಜನ ವಾಗಿರಲಿಲ್ಲ, ಹೀಗಾಗಿ ಸರ್ವ ಸದಸ್ಯರು ಶಿವಣ್ಣ ಬೆಲ್ಲದ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿಯೇ ಜಿಲ್ಲಾ ವೀರಶೈವ ಮಹಾಸಭಾ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸುವ ತೀರ್ಮಾನ ಕೈಗೊಂಡರು.
ವೀರಶೈವ-ಲಿಂಗಾಯತ ಭವನ ನಿರ್ಮಾಣ ಸಂದರ್ಭದಲ್ಲಿ ಲಕ್ಷ ರೂ.ಗಿಂತಲೂ ಹೆಚ್ಚಿಗೆ ಅನುದಾನ ನೀಡಿದ ಶಾಸಕ ಅರವಿಂದ ಬೆಲ್ಲದ ಸೇರಿದಂತೆ 12ಕ್ಕೂ ಹೆಚ್ಚು ಜನ ಬೆಲ್ಲದ ಕುಟುಂಬ ಸದಸ್ಯರ ಸದಸ್ಯತ್ವ ಹಾಗೂ ಇತರ 31ಜನ ಸೇರಿ ಒಟ್ಟು 43 ಜನರಿಗೆ ಮಹಾಸಭೆ ಸದಸ್ಯತ್ವ ನೀಡಲು 2016ನೇ ಇಸ್ವಿ ಫೆಬ್ರುವರಿ ತಿಂಗಳಲ್ಲಿ ನಡೆದ ಕಾರ್ಯಕಾರಿ ಸಮಿತಿಯಲ್ಲಿ ಆದೇಶ ಹೊರಡಿಸಿದ ಕಾರಣದಿಂದ ಬೆಲ್ಲದ ಕುಟುಂಬಸ್ಥರು ಇದಕ್ಕೆ ಸದಸ್ಯರಾಗಿದ್ದರು.
ಆದರೆ ಡಿಸೆಂಬರ್ನಲ್ಲಿ ನಡೆದ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಈ ಆದೇಶ ಹಿಂಪಡೆದ ಕಾರಣ ದಾನಿಗಳ ಸದಸ್ಯತ್ವ ರದ್ದಾಗಿತ್ತು. ಆದಾಗ್ಯೂ ಸಹ ಶಿವಣ್ಣ ಬೆಲ್ಲದ ಅವರು ಅಧ್ಯಕ್ಷರಾಗಿಯೇ ಮುಂದುವರಿದಿದ್ದರು. ಈ ಹಿಂದೆ ಭವನ ನಾಮಕರಣ ಕುರಿತು ನಡೆದ ಸಭೆಯಲ್ಲಿ ಸಹ ಅವರಿಗೆ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವಂತೆ ಸದಸ್ಯರು ಮನವಿ ಮಾಡಿದ್ದರು.
ಆದರೆ ಅವರು ಅದಕ್ಕೆ ಬೆಲೆ ಕೊಡದ ಕಾರಣ ರವಿವಾರ ನಡೆದ ಸಭೆಯಲ್ಲಿ ಎಲ್ಲ ಸದಸ್ಯರ ಆಗ್ರಹದ ಮೇರೆಗೆ ಅವರನ್ನು ವಜಾಗೊಳಿಸಿ, ಉಪಾಧ್ಯಕ್ಷರಾಗಿದ್ದ ಮಾಜಿ ಶಾಸಕ ಶಿವಾನಂದ ಅಂಬಡಗಟ್ಟಿ ಅವರನ್ನು ಪ್ರಭಾರ ಜಿಲ್ಲಾಧ್ಯಕ್ಷರನ್ನಾಗಿ ನೇಮಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್ಕುಮಾರ್
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.