ಆರ್‌ಬಿಐ ಅಂಬೇಡ್ಕರ್ ಚಿಂತನೆಗಳ ಫಲ
Team Udayavani, May 22, 2017, 4:45 PM IST
ಕಲಬುರಗಿ: ಡಾ| ಬಾಬಾಸಾಹೇಬ ಅಂಬೇಡ್ಕರ್ ಅವರ ಚಿಂತನೆಗಳ ಫಲವಾಗಿಯೇ ದೇಶಕ್ಕೆ ಮಾದರಿಯಾಗಿರುವ ಆರ್‌ಬಿಐ ಸೇರಿದಂತೆ ಬ್ಯಾಂಕಿಂಗ್ ವಲಯ ಸಾಕಾರಗೊಂಡಿದೆ ಎಂದು ಖ್ಯಾತ ವಿಚಾರವಾದಿ ಡಾ| ಚಂದ್ರಶೇಖರ ಕಟ್ಟಿಮನಿ ಅಭಿಪ್ರಾಯಪಟ್ಟರು.
ನಗರದ ಬಾಪುಗೌಡ ದರ್ಶನಾಪುರ ರಂಗಮಂದಿರದಲ್ಲಿ ರವಿವಾರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ನೌಕರರ ಕಲ್ಯಾಣ ಸಂಘ ಹಮ್ಮಿಕೊಂಡಿದ್ದ ಕಲಬುರಗಿ ಮತ್ತು ಬೀದರ ವಲಯ ಸಮ್ಮೇಳನದಲ್ಲಿ ಡಾ| ಅಂಬೇಡ್ಕರ್ ಚಳವಳಿಗಳ ಕುರಿತು ಅವರು ಮಾತನಾಡಿದರು.
ಬ್ಯಾಂಕಿಂಗ್ ಕ್ಷೇತ್ರ ಈಗ ತುಂಬಾ ಎತ್ತರದಲ್ಲಿದೆ. ಅದರ ಉನ್ನತಿಗಾಗಿ ಡಾ| ಅಂಬೇಡ್ಕರ್ ಅವರು ಕಾರಣರು. ಸರಕಾರಿ ನೌಕರರಿಗೆ ಕನಿಷ್ಠ ವೇತನ, ತುಟ್ಟಿ ಭತ್ಯೆ, ಭವಿಷ್ಯನಿಧಿ ಮುಂತಾದ ಸೌಲಭ್ಯಗಳು ಹಾಗೂ ಮಹಿಳಾ ನೌಕರರಿಗೂ ಹೆರಿಗೆ ರಜೆ ಸೇರಿದಂತೆ ಮುಂತಾದ ಸೌಕರ್ಯ ಒದಗಿಸುವುದನ್ನು ಸಂವಿಧಾನದಲ್ಲಿ ಬರೆಯುವ ಮೂಲಕ ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ಹೇಳಿದರು.
ಡಾ| ಅಂಬೇಡ್ಕರ್ ಕೊಟ್ಟ ಸವಲತ್ತುಗಳನ್ನು ಸರ್ಕಾರಿ ನೌಕರರು ಸದ್ಬಳಕೆ ಮಾಡಿಕೊಳ್ಳಬೇಕು. ಒಂದು ವೇಳೆ ಅಂಬೇಡ್ಕರ್ ಅವರು ಜನಿಸದೇ ಇದ್ದರೆ ಕಾರ್ಮಿಕರು ಬಂಡವಾಳಶಾಹಿಗಳ ಕೈಯಲ್ಲಿ ಗುಲಾಮರಾಗಿ ಮುಂದುವರಿಯಬೇಕಾಗಿತ್ತು ಎಂದು ಹೇಳಿದರು.
ಡಾ| ಅಂಬೇಡ್ಕರ್ ಅವರು ಕೇವಲ ಒಂದು ಜಾತಿಗೆ ಸೀಮಿತವಲ್ಲ. ಅವರು ಎಲ್ಲರ ಸ್ವತ್ತು. ಅಂಬೇಡ್ಕರ್ ಅವರನ್ನು ಒಂದು ಚೌಕಟ್ಟಿನಲ್ಲಿ ಕಟ್ಟಿ ಹಾಕಬೇಡಿ ಎಂದು ಸಲಹೆ ನೀಡಿದರು. ಸಂಘದ ರಾಜ್ಯಾಧ್ಯಕ್ಷ ಡಿ. ದೇವರಾಜ ಅಧ್ಯಕ್ಷತೆ ವಹಿಸಿದ್ದರು.
ಸ್ಟೇಟ್ ಬ್ಯಾಂಕ್ ಆಫ್ ಹೈದ್ರಾಬಾದ್ ಪ್ರಾದೇಶಿಕ ವ್ಯವಸ್ಥಾಪಕ ಶಂಕರ ಪ್ರಸಾದ, ಸಹಾಯಕ ವ್ಯವಸ್ಥಾಪಕ ಪ್ರಶಾಂತಕುಮಾರ, ಗೋವಿಂದರಾಜ, ಡಾ| ಸುರೇಶ ರಾಠೊಡ, ಡಾ| ಜಾಗೃತಿ ದೇಶಮಾನೆ, ಸಂಘದ ಸಂಘಟನಾ ಕಾರ್ಯದರ್ಶಿ ಬಿ. ಎಸ್. ಶೇರಖಾನೆ,
-ಪ್ರವೀಣ ಎ. ಸಾಗರ, ರಮೇಶ ಸಿಂಧೆ, ಪದ್ಮಾಜಿ, ರವಿಗೌಡ, ಪ್ರಕಾಶರಾವ, ಶ್ರೀಧರ ಪಾಲ್ಗೊಂಡಿದ್ದರು. ಸಿ.ಎಚ್. ಹವಾಲ್ದಾರ ಸ್ವಾಗತಿಸಿದರು. ಸಂಘದ ಕೇಂದ್ರ ಸಮಿತಿ ಸದಸ್ಯ ಮತ್ತು ಪ್ರಧಾನ ಕಾರ್ಯದರ್ಶಿ ಕೆ.ಎಲ್. ಚವ್ಹಾಣ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಾರುತಿ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!
SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.