ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಮಾನವ ಸರಪಳಿ
Team Udayavani, May 23, 2017, 4:54 PM IST
ಕಲಬುರಗಿ: ಅಫಜಲಪುರ ತಾಲೂಕಿನ ದೇವಲಗಾಣಗಾಪುರ ಗ್ರಾಪಂ ಅಭಿವೃದ್ಧಿ ಅಧಿಕಾರಿ ಡಾ|. ಅಮಿತಕುಮಾರ ಅವರ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಪಂ ಅಧ್ಯಕ್ಷ ಮಹೇಶ ಗುತ್ತೇದಾರ ಹಾಗೂ ಆತನ ತಂದೆ ಮಹಾದೇವ ಗುತ್ತೇದಾರ ಬಂಧನಕ್ಕೆ ಆಗ್ರಹಿಸಿ ದಲಿತ ಸಂಘಟನೆಗಳ ಸಮನ್ವಯ ಸಮಿತಿಯಿಂದ ನಗರದ ಮಿನಿವಿಧಾನಸೌಧದ ಎದುರು ಸೋಮವಾರ ಮಾನವ ಸರಪಳಿ ನಿರ್ಮಾಣ ಮಾಡಿ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಪ್ರತಿಭಟನೆಕಾರರು, ಹಲ್ಲೆ ಕುರಿತು ನಗರದ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದರೂ, ಇಲ್ಲಿಯವರೆಗೆ ಆರೋಪಿಗಳನ್ನು ಬಂಧಿಸಿಲ್ಲ ಎಂದು ದೂರಿದರು.
ತಂದೆ ಹಾಗೂ ಪುತ್ರನ ವಿರುದ್ಧ ಮಾರಣಾಂತಿಕ ಹಲ್ಲೆ, ಕೊಲೆ ಯತ್ನ, ಜೀವ ಬೆದರಿಕೆ, ದಲಿತರ ಮೇಲಿನ ದೌರ್ಜನ್ಯ ಕಾಯ್ದೆ ಮುಂತಾದ ಸೆಕ್ಷನ್‌ಡಿ ಪ್ರಕರಣ ದಾಖಲಾಗಿದ್ದರೂ ಪೊಲೀಸರು ಆರೋಪಿಗಳನ್ನು ಬಂಧಿಸಿಲ್ಲ. ಇದರ ಹಿಂದೆ ಪ್ರಭಾವಿಗಳ ಕೈವಾಡದ ಅನುಮಾನವಿದೆ.
ಅದಕ್ಕೆಲ್ಲ ಪೊಲೀಸರು ಬಗ್ಗಬಾರದು ಎಂದು ಆಗ್ರಹಿಸಿದ್ದಾರೆ. ಸಮಿತಿ ವರಿಷ್ಠ ಡಾ| ವಿಠಲ ದೊಡ್ಡಮನಿ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಲಕ್ಷಿಕಾಂತ ಹುಬ್ಬಳ್ಳಿ, ಮಾಜಿ ಮಹಾಪೌರ ಸಂತೋಷಕುಮಾರ ಮೇಲ್ಮನಿ, ಪಾಲಿಕೆ ಮಾಜಿ ಸದಸ್ಯ ಸೂರ್ಯಕಾಂತ ನಿಂಬಾಳಕರ್, ಅನಿಲ ಟೆಂಗಳಿ, ಚಿದಾನಂದ, ಸಂತೋಷ ಮೇಲ್ಮನಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.