ಜನರ ಸಮಸ್ಯೆಗೆ ಸ್ಪಂದಿಸಲು ಸೂಚನೆ


Team Udayavani, May 24, 2017, 1:19 PM IST

dvg4.jpg

ಜಗಳೂರು: ಕುಡಿಯುವ ನೀರಿನ ಸಮಸ್ಯೆ, ಸ್ಥಗಿತಗೊಂಡಿರುವ ವೃದ್ಯಾಪ ವೇತನ, ಪಾವತಿಯಾಗದ ಬರ ಪರಿಹಾರ, ನಿರ್ಮಿಸಲಾಗಿರುವ ಶೌಚಾಲಯಗಳಿಗೆ ಆಗುತ್ತಿರುವ ಬಿಲ್‌ ವಿಳಂಬ, ಅಳವಡಿಕೆಯಾಗದ ವಿದ್ಯುತ್‌ ಪರಿವರ್ತಕ ಸೇರಿದಂತೆ ಮತ್ತಿತರರ ಸಮಸ್ಯೆಗಳನ್ನು ಬಗೆಹರಿಸುವಂತೆ ಶಾಸಕ ಎಚ್‌.ಪಿ.ರಾಜೇಶ್‌ ಅವರಿಗೆ ಸಾರ್ವಜನಿಕರು ಕೇಳಿಕೊಂಡರು. 

ತಾಲೂಕಿನ ಹಿರೇಮಲ್ಲನಹೊಳೆ ಗ್ರಾಮ ಪಂಚಾಯತ್‌ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ “ಶಾಸಕರ ನಡೆ ಹಳ್ಳಿಯ ಅಭಿವೃದ್ಧಿ ಕಡೆ’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರು ವೈಯಕ್ತಿಕವಾಗಿ ಮತ್ತು ಗ್ರಾಮದಲ್ಲಿ ವಿವಿಧ ಸಮಸ್ಯೆಗಳನ್ನು ಮಂಡಿಸುವ ಮೂಲಕ ಸಾರ್ವಜನಿಕರ ಗಮನ ಸೆಳೆದರು. 

ತಾಯಿಟೋಣೆ ಗ್ರಾಮದ ಮಂಜಣ್ಣ ಎಂಬುವರು ಮಾತನಾಡಿ ನಮ್ಮ ಗ್ರಾಮದಲ್ಲಿ ಕುಡಿವ ನೀರಿನ ಸಮಸ್ಯೆ ಇದೆ. ಟ್ಯಾಂಕರ್‌ ಮೂಲಕ ಪೂರೈಕೆಯಾಗುತ್ತಿದೆ. ನೀರು ನೀಡಿದ ಗುತ್ತಿಗೆದಾರರಿಗೆ ಹಣ ಪಾವತಿಯಾಗಿಲ್ಲ. ಹಣ ಬಿಡುಗಡೆ ಮಾಡುವಂತೆ ಕ್ರಮಕೈಗೊಳ್ಳಬೇಕೆಂದು ಶಾಸಕರಿಗೆ ಮನವಿ ಮಾಡಿದರು.

ಕಳೆದ ಎರಡು ವರ್ಷದ ಹಿಂದೆ ಮಾಸಾಶನಕ್ಕೆ ಅರ್ಜಿ ಸಲ್ಲಿಸಿದ್ದೆ. ಆ ಸಂದರ್ಭದಲ್ಲಿ ನಾಲ್ಕೆ çದು ಸಾವಿರ ಖರ್ಚಾಯಿತು. ಆದರೆ ಆದೇಶ ಕಾμ ಇನ್ನು ನನ್ನ ಕೈ ಸೇರಿಲ್ಲ. ನನಗೆ ಮಾಸಾಶನ ಮಂಜೂರು ಮಾಡುವಂತೆ ತಿಪ್ಪಮ್ಮ ಎಂಬ ವಯೋವೃದ್ಧಿ ಕೋರಿದರು. 

ಹಿರೇಮಲ್ಲನಹೊಳೆ ಗೊಲ್ಲರಹಟ್ಟಿಯ ಅಂಗನವಾಡಿಯಲ್ಲಿ ಗರ್ಭಿಣಿ, ಬಾಣಂತಿಯರಿಗೆ ಮತ್ತು ಮಕ್ಕಳಿಗೆ ಸರಿಯಾಗಿ ಆಹಾರ ಧಾನ್ಯ ವಿತರಿಸುತ್ತಿಲ್ಲ ಎಂದು ಗ್ರಾಮದ ಮಹಾಲಿಂಗಪ್ಪ ಎಂಬುವರು ದೂರಿದರು. ವಿದ್ಯುತ್‌ ಪರಿವರ್ತಕ ಸುಟ್ಟು ಹದಿನೈದು ದಿನ ಕಳೆದಿದೆ.

ಇದರಿಂದ ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗಿದ್ದು ಕೇಳದರೆ ಸಂಬಂಧಪಟ್ಟ ಬೆಸ್ಕಾಂ ಅಧಿಕಾರಿಗಳು ಸಬೂಬು ಹೇಳುತ್ತಿದ್ದಾರೆ. ತುರ್ತಾಗಿ ವಿದ್ಯುತ್‌ ಪರಿವರ್ತಕವನ್ನು ಅಳವಡಿಸುವಂತೆ ಸೂಚನೆ ನೀಡಬೇಕೆಂದು ಕಮಂಡಲಗೊಂದಿ ಗ್ರಾಮದ ಗ್ರಾಪಂ ಸದಸ್ಯ ಹುಲಿಯಪ್ಪರೆಡ್ಡಿ ಎನ್ನುವರು ಶಾಸಕರಲ್ಲಿ ಮನವಿ ಮಾಡಿದರು.

ಗ್ರಾಪಂ ಪ್ರಬಾರಿ ಪಿಡಿಒ ಮೂಗಣ್ಣ ಅವರಿಗೆ ಎರಡು ಪಂಚಾಯಿತಿಗಳ ಜವಾಬ್ದಾರಿ ನೀಡಲಾಗಿದೆ. ಇದರಿಂದ ಈ ಗ್ರಾಮಪಂಚಾಯಿತಿ ಕೆಲಸ ಕಾರ್ಯಗಳಿಗೆ ಅಡಚಣೆಯಾಗಿದ್ದು ಹಿರೇಮಲ್ಲನಹೊಳೆ ಗ್ರಾಮ ಪಂಚಾಯಿತಿಯಲ್ಲಿ ಮಾತ್ರ ಕಾರ್ಯಭಾರ ಮಾಡುವಂತೆ ಆದೇಶ ನೀಡಬೇಕೆಂದು ಕೆಲ ಸಾರ್ವಜನಿಕರು ಅವಲತ್ತುಕೊಂಡರು. 

ಸಾರ್ವಜನಿಕ ಸಮಸ್ಯೆ ಆಲಿಸಿ ಮಾತನಾಡಿದ ಶಾಸಕ ಎಚ್‌.ಪಿ. ರಾಜೇಶ್‌, ಗ್ರಾಮೀಣ ಪ್ರದೇಶದಲ್ಲಿ ಇಂತಹ ಸಮಸ್ಯೆಗಳು ಸಾಕಷ್ಟಿವೆ ಎಂಬುದನ್ನು ತಿಳಿದು ರಾಜ್ಯ ಸರ್ಕಾರ ಶಾಸಕರ ನಡೆದ ಹಳ್ಳಿಯ ಅಭಿವೃದ್ಧಿಯ ಕಡೆ ಎಂಬ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇಲ್ಲಿನ ಸಮಸ್ಯೆಗಳನ್ನು ಪಟ್ಟಿ ಮಾಡಿ ಕೂಡಲೇ ಬಗೆಹರಿಸಿ ವರದಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಾಕೀತು ಮಾಡಿದರು. 

ವಿಶೇಷ ಅಭಿವೃದ್ಧಿ ಯೋಜನೆಯಡಿ ಹಿರೇಮಲ್ಲನಹೊಳೆ, 30 ಲಕ್ಷ ರೂ. ಚಿಕ್ಕಮಲ್ಲನಹೊಳೆ 15 ಲಕ್ಷ ರೂ. ಮಲ್ಲಾಪುರ 15 ಲಕ್ಷ ರೂ. ಕಮಂಡಲಗೊಂದಿ 15 ಲಕ್ಷ ರೂ. ಸೇರಿದಂತೆ 75 ಲಕ್ಷದ ಮೊತ್ತದ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಬಹುತೇಕ ಹಳ್ಳಿಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಗಿದೆ. 

ದಿಬ್ಬದಹಳ್ಳಿ ಬಳಿ 2ಕೋಟಿ ವೆಚ್ಚದಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್‌ ನಿರ್ಮಿಸಲಾಗಿದೆ. ಲೋಕೋಪಯೋಗಿ ಇಲಾಖೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಯ ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಯಡಿ ಸಿಸಿ ರಸ್ತೆ ನಿರ್ಮಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು. 

ಗ್ರಾಪಂ ಅಧ್ಯಕ್ಷ ಶೇಖರಪ್ಪ, ಎಪಿಎಂಸಿ ಸದಸ್ಯ ಎಸ್‌.ಕೆ.ರಾಮರೆಡ್ಡಿ, ಜಿ.ಪಂ. ಮಾಜಿ ಸದಸ್ಯ ಕೆ.ಪಿ.ಪಾಲಯ್ಯ, ತಹಶೀಲ್ದಾರ್‌ ಶ್ರೀಧರಮೂರ್ತಿ, ತಾಪಂ ಇಒ ಲಕ್ಷಿಪತಿ, ಶಿಶುಭಿವೃದ್ಧಿ ಯೋಜನಾಧಿಕಾರಿ ಭಾರತಿಬಣಕಾರ್‌, ಬೆಸ್ಕಾಂ ಎಇಇ ಸುಧಾಮಣಿ, ಗ್ರಾಪಂ ಸದಸ್ಯರಾದ ತಿಮ್ಮರಾಜ್‌, ಲೋಕೇಶ್‌, ಸೇರಿದಂತೆ ಮತ್ತಿತರರಿದ್ದರು. 

ಟಾಪ್ ನ್ಯೂಸ್

2-ai

Artificial Intelligence: ಎಐ ಯುಗದಲ್ಲಿ ನಾವು ನೀವು?

Pushpa 2 Movie: ವರ್ಷದ ಅತೀ ಉದ್ದದ ಸಿನಿಮಾ..? ʼಪುಷ್ಪ-2ʼ ರನ್‌ ಟೈಮ್‌ ಎಷ್ಟು?

Pushpa 2 Movie: ವರ್ಷದ ಅತೀ ಉದ್ದದ ಸಿನಿಮಾ..? ʼಪುಷ್ಪ-2ʼ ರನ್‌ ಟೈಮ್‌ ಎಷ್ಟು?

1-bheesh

Chikkamagaluru: 92 ರ ಹರೆಯದಲ್ಲಿ ಬೀದಿಗೆ ಬಿದ್ದ ಜಿಲ್ಲಾ ಬಿಜೆಪಿ ಭೀಷ್ಮ ವಿಟ್ಠಲ ಆಚಾರ್ಯ

adani

Gautam Adani, ಸೋದರಳಿಯ ಸಾಗರ್ ವಿರುದ್ಧ ಲಂಚದ ಆರೋಪ ಇಲ್ಲ: ಅದಾನಿ ಗ್ರೂಪ್

1-bang

Bangladesh: ಚಿನ್ಮಯ್‌ ಕೃಷ್ಣದಾಸ್‌ ಬಂಧನ ಖಂಡಿಸಿ ಪ್ರತಿಭಟನೆ: ವಕೀಲನ ಹ*ತ್ಯೆ

Samantha Ruth Prabhu: ನನ್ನ ಸೆಕೆಂಡ್‌ ಹ್ಯಾಂಡ್‌ ಅಂದ್ರು!: ಸಮಂತಾ ದುಃಖದ ಮಾತು

Samantha Ruth Prabhu: ನನ್ನ ಸೆಕೆಂಡ್‌ ಹ್ಯಾಂಡ್‌ ಅಂದ್ರು!: ಸಮಂತಾ ದುಃಖದ ಮಾತು

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

8-

ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

3-aranthodu

Aranthodu: ವಾಹನ ಡಿಕ್ಕಿ ಹೊಡೆದು ಕಾಡು ಹಂದಿ ಸಾವು

2-ai

Artificial Intelligence: ಎಐ ಯುಗದಲ್ಲಿ ನಾವು ನೀವು?

Pushpa 2 Movie: ವರ್ಷದ ಅತೀ ಉದ್ದದ ಸಿನಿಮಾ..? ʼಪುಷ್ಪ-2ʼ ರನ್‌ ಟೈಮ್‌ ಎಷ್ಟು?

Pushpa 2 Movie: ವರ್ಷದ ಅತೀ ಉದ್ದದ ಸಿನಿಮಾ..? ʼಪುಷ್ಪ-2ʼ ರನ್‌ ಟೈಮ್‌ ಎಷ್ಟು?

1-bheesh

Chikkamagaluru: 92 ರ ಹರೆಯದಲ್ಲಿ ಬೀದಿಗೆ ಬಿದ್ದ ಜಿಲ್ಲಾ ಬಿಜೆಪಿ ಭೀಷ್ಮ ವಿಟ್ಠಲ ಆಚಾರ್ಯ

1-kushtagi

Kushtagi: ಬಸ್ ಸೇವೆ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.