ಮಲಯಾಳ ಕಡ್ಡಾಯ ಹೇರಿಕೆ ಜಿಲ್ಲಾಧಿಕಾರಿ ಕಚೇರಿ ದಿಗ್ಬಂಧನ

Team Udayavani, May 24, 2017, 3:43 PM IST

23ksdm1.jpg

ಕಾಸರಗೋಡು: ಗಡಿನಾಡಿನ ಕನ್ನಡ ಭಾಷಾ ಅಲ್ಪಸಂಖ್ಯಾಕರ ಮೇಲೆ ರಾಜ್ಯ ಸರಕಾರ ಭಾಷಾ ಮಸೂದೆಯ ಮೂಲಕ ಕಡ್ಡಾಯ ಮಲಯಾಳ ಹೇರುವುದನ್ನು ಪ್ರತಿಭಟಿಸಿ ಸಹಸ್ರ ಸಂಖ್ಯೆಯ ಕನ್ನಡಿಗರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ದಿಗ್ಬಂಧನ ನಡೆಸಿದರು.

ಕನ್ನಡ ಪರ ಸಂಘಟನೆಗಳು ಕರೆ ನೀಡಿದ್ದ ಜಿಲ್ಲಾಧಿಕಾರಿ ಕಚೇರಿ ದಿಗ್ಬಂಧನದಲ್ಲಿ  ಸಾಮಾಜಿಕ ಕಾರ್ಯಕರ್ತರು, ಸರಕಾರಿ ನೌಕರರು, ರಾಜಕಾರಣಿಗಳು, ಅಧ್ಯಾಪಕರು, ವಿದ್ಯಾರ್ಥಿಗಳು ಸಹಿತ ಜನಸಾಮಾನ್ಯರು ಪಾಲ್ಗೊಂಡಿದ್ದರು.
 
ಜಿಲ್ಲಾಧಿಕಾರಿ ಕಚೇರಿ ವ್ಯಾಪ್ತಿಯ ಎಂಟು ಪ್ರವೇಶ ದ್ವಾರಗಳ ಮುಂದೆ ಪ್ರತಿಭಟನಕಾರರು ಜಮಾಯಿಸಿ ಸಿಬಂದಿಗಳ ಒಳಪ್ರವೇಶವನ್ನು ತಡೆದರು. ಇದರಿಂದ ಜಿಲ್ಲಾಧಿಕಾರಿ ಕಚೇರಿ ಕಾರ್ಯಚಟುವಟಿಕೆಗಳು ಸ್ತಬ್ಧಗೊಂಡಿದ್ದವು. ಕನ್ನಡ ಉಳಿಸಿ, ಕನ್ನಡ ರಕ್ಷಿಸಿ ಎಂಬ ಘೋಷಣೆಗಳು ಮುಗಿಲು ಮುಟ್ಟಿದವು.

ಚಳವಳಿಯನ್ನು ಕೊಂಡೆವೂರು ಶ್ರೀ ಯೋಗಾನಂದ ಸರಸ್ವತಿ, ಬೇಳ ಶೋಕಮಾತಾ ಇಗರ್ಜಿಯ ಧರ್ಮಗುರು ವಂ| ವಿನ್ಸೆಂಟ್‌ ಡಿ’ಸೋಜಾ, ಧಾರ್ಮಿಕ ನೇತಾರ ಮೌಲಾನಾ ಅಬ್ದುಲ್‌ ಅಸೀಸ್‌ ಚೆಂಡೆ ಬಾರಿಸಿ ಉದ್ಘಾಟಿಸಿದರು.

ಹಕ್ಕಿಗಾಗಿ ಹೋರಾಟ
ಈ ಸಂದರ್ಭ ಕೊಂಡೆವೂರು ಶ್ರೀಗಳು ಮಾತನಾಡಿ, ಕನ್ನಡಿಗರ ಏಕಧ್ವನಿ ಕೇರಳ ಸರಕಾರಕ್ಕೆ ಎಚ್ಚರಿಕೆಯ ಘಂಟೆಯಾಗಿದೆ. ಕನ್ನಡಿಗರ ಹಕ್ಕಿಗಾಗಿ ನಡೆಯುತ್ತಿರುವ ಹೋರಾಟವು ಮುಂದಿನ ದಿನಗಳಲ್ಲಿ ಹೆಚ್ಚು ಪ್ರಖರವಾಗಲಿದೆ. ಕನ್ನಡ ಸಂಸ್ಕೃತಿ ಹಾಗೂ ಭಾಷೆಯನ್ನು ಉಳಿಸಲು ನಡೆಯುತ್ತಿರುವ ಕಾನೂನಾತ್ಮಕ ಹೋರಾಟವಾಗಿದ್ದು, ಬಲವಂತದ ಮಲಯಾಳ ಭಾಷಾ ಹೇರಿಕೆ ಸಲ್ಲ ಎಂದರು.

ಒಗ್ಗಟ್ಟಿಗೆ ಸಾಕ್ಷಿ
ಮೌಲನಾ ಅಬ್ದುಲ್‌ ಅಸೀಸ್‌ ಮಾತನಾಡಿ, ಬೃಹತ್‌ ಸಂಖ್ಯೆಯಲ್ಲಿ ಸೇರಿರುವ ಜನರು ಕನ್ನಡಿಗರ ಒಗ್ಗಟ್ಟಿಗೆ ಸಾಕ್ಷಿ. ಹಲವು ಆಚಾರ ವಿಚಾರಗಳಿಗೆ ಮಾನ್ಯತೆ ನೀಡಿದ ಕನ್ನಡ ಸಂಸ್ಕೃತಿಯ ಮೇಲೆ ಬಲವಂತದ ಭಾಷಾ ಮಸೂದೆ ಹೇರಿಕೆ ಸರಿಯಲ್ಲ. ಕನ್ನಡಿಗರ ಸಂಸ್ಕೃತಿ ಅಸ್ಮಿತೆಗೆ ಧಕ್ಕೆ ಬಂದಲ್ಲಿ  ಜಾತಿ, ಮತ ಭೇದವಿಲ್ಲದೆ ಹೋರಾಡಲು ಸದಾ ಸಿದ್ಧ ಎಂದರು. ಜಿಲ್ಲೆಯಲ್ಲಿನ ಭಾಷಾ ಅಲ್ಪಸಂಖ್ಯಾಕ ಕನ್ನಡಿಗರ ಹಕ್ಕನ್ನು ಕಸಿಯಬಾರದು, ಎಲ್ಲ ಸ್ತರಗಳಲ್ಲೂ ಕನ್ನಡಿಗರಿಗೆ ಮಾನ್ಯತೆ ಹಾಗೂ ಗೌರವ ದೊರಕಬೇಕು ಎಂದರು.

ರಕ್ತ ಸುರಿಸಲೂ ಸಿದ್ಧ 
ಬೇಳ ಇಗರ್ಜಿಯ ಧರ್ಮಗುರು ವಂ| ವಿನ್ಸೆಂಟ್‌ ಡಿ’ಸೋಜಾ ಮಾತನಾಡಿ, ಕನ್ನಡ ತನು, ಮನ ಹಾಗೂ ಭುಜಗಳು ಹೋರಾಟದ ಮೂಲಕ ಒಂದಾಗಿವೆ. ಕನ್ನಡ ಉಳಿಸಲು ರಕ್ತ ಸುರಿಸಲೂ ಸಿದ್ಧ ಎಂದರು. ಭಾಷಾ ಮಸೂದೆ ಎಂಬುದು ನಿಧಾನಗತಿಯ ವಿಷವಿದ್ದಂತೆ. ಇಂತಹ ಮಸೂದೆಯು ಕಾಸರಗೋಡಿಗೆ ಅಗತ್ಯವಿಲ್ಲ, ಜಿಲ್ಲೆಧಿಯಿಂದ ಈ ಮಸೂದೆಯನ್ನು ಜೂನ್‌ 1ರೊಳಗೆ ಹಿಂಪಡೆಯಬೇಕು ಎಂದರು. ಕೊಂಕಣಿ ಕ್ರೈಸ್ತ ಸಮುದಾಯದ 20,000 ಮಂದಿ ಕನ್ನಡದ ಪರ ಇದ್ದಾರೆ ಎನ್ನುವ ಭರವಸೆಯ ಮಾತಗಳನ್ನಾಡಿದರು. 

ಮಹಾಲಿಂಗೇಶ್ವರ ಎಂ.ವಿ. ದಿಕ್ಸೂಚಿ ಭಾಷಣ ಮಾಡಿದರು. ಕಾಸರಗೋಡು ಜಿ.ಪಂ. ಅಧ್ಯಕ್ಷ ಎ.ಜಿ.ಸಿ. ಬಶೀರ್‌, ಜಿ.ಪಂ. ಸದಸ್ಯ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ನ್ಯಾಯವಾದಿ ಕೆ. ಶ್ರೀಕಾಂತ್‌, ಜಿ.ಪಂ. ಸದಸ್ಯ ಹರ್ಷಾದ್‌ ವರ್ಕಾಡಿ ಮಾತನಾಡಿದರು. ಬೆಂಗಳೂರಿನ ಕರ್ನಾಟಕ ನವ ನಿರ್ಮಾಣ ಸೇನೆಯ ಕಾರ್ಯಕರ್ತರು ರಾಜ್ಯಾಧ್ಯಕ್ಷ ಭೀಮಾಶಂಕರ್‌ ಪಾಟೀಲ್‌ ನೇತೃತ್ವದಲ್ಲಿ ಭಾಗವಹಿಸಿದರು.

ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಹಕೀಂ ಕುನ್ನಿಲ್‌, ಕೇರಳ ತುಳು ಅಕಾಡೆಮಿ ಮಾಜಿ ಅಧ್ಯಕ್ಷ ಸುಬ್ಬಯ್ಯ ರೈ, ಹಿರಿಯ ಕನ್ನಡ ಹೋರಾಟಗಾರ ಅಡೂರು ಉಮೇಶ್‌ ನಾೖಕ್‌, ಪುರುಷೋತ್ತಮ ಮಾಸ್ಟರ್‌, ಗೋವಿಂದ ಪೈ ಸ್ಮಾರಕ ಟ್ರಸ್ಟ್‌ ಕಾರ್ಯನಿರ್ವಾಹಕ ಅಧಿಕಾರಿ ಡಾ| ಕಮಲಾಕ್ಷ, ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಎಸ್‌.ವಿ. ಭಟ್‌, ಜಾನಪದ ಪರಿಷತ್ತಿನ ಕೇಶವ ಪ್ರಸಾದ್‌ ನಾಣಿತ್ತಿಲು, ರಂಗಭೂಮಿ ಕಲಾವಿದ ಕಾಸರಗೋಡು ಚಿನ್ನಾ, ಬ್ಯಾರಿ ಅಕಾಡೆಮಿಯ ಆಯಿಷಾ ಪೆರ್ಲ, ಪ್ರಭಾವತಿ ಕೆದಿಲಾಯ ಮೊದಲಾದವರಿದ್ದರು. ಕನ್ನಡ ಹೋರಾಟ ಸಮಿತಿಯ ಅಧ್ಯಕ್ಷ ಮುರಳೀಧರ ಬಳ್ಳಕ್ಕುರಾಯ ಅಧ್ಯಕ್ಷತೆ ವಹಿಸಿದರು. ಸುಬ್ರಹ್ಮಣ್ಯ ಭಟ್‌ ಸ್ವಾಗತಿಸಿದರು. ಟಿ.ಡಿ. ಸದಾಶಿವ ರಾವ್‌ ವಂದಿಸಿದರು. ಸತೀಶ್‌ ಧರ್ಮತ್ತಡ್ಕ ನಿರೂಪಿಸಿದರು.

ಟಾಪ್ ನ್ಯೂಸ್

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-madikeri

Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ

8-madikeri

Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು

Arrest

Madikeri: ವೀರ ಸೇನಾನಿಗಳಿಗೆ ಅಗೌರವ: ಆರೋಪಿ ಸೆರೆ

Kumbale: ವರ್ಕಾಡಿ ಪ್ಲೈವುಡ್‌ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: ಬೆಂಕಿ: ಕೋಟ್ಯಂತರ ರೂ. ನಷ್ಟ

Kumbale: ವರ್ಕಾಡಿ ಪ್ಲೈವುಡ್‌ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: ಬೆಂಕಿ: ಕೋಟ್ಯಂತರ ರೂ. ನಷ್ಟ

1

Kasargod: ಬೆಕ್ಕಿಗಾಗಿ ಬಾವಿಗಿಳಿದ ವಿದ್ಯಾರ್ಥಿಯ ರಕ್ಷಣೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.