ಪೂರ್ಣಾವಧಿ ಹಾಜರಿ ನೀಡದ್ದಕ್ಕೆ ಆಕ್ರೋಶ
Team Udayavani, May 24, 2017, 5:02 PM IST
ಚಿಂಚೋಳಿ: ತಾಲೂಕಿನ ಸಾಮಾಜಿಕ ವಲಯ ಅರಣ್ಯ ಇಲಾಖೆ, ಪ್ರಾದೇಶಿಕ ವಲಯ ಅರಣ್ಯ ಇಲಾಖೆಯಿಂದ ಉದ್ಯೋಗ ಖಾತ್ರಿ ಯೋಜನೆ ಅಡಿ (ಟ್ರಂಚ್ ವರ್ಕ್) ಒಡ್ಡು ನಿರ್ಮಾಣ ಮಾಡಿದ ಕೂಲಿಕಾರರಿಗೆ ಪೂರ್ಣಾವಧಿ ಹಾಜರಿ ಹಾಕದಿರುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮಂಗಳವಾರ ಪಟ್ಟಣದ ಪ್ರಾದೇಶಿಕ ವಲಯ ಅರಣ್ಯ ಇಲಾಖೆ ಎದುರು ಕರ್ನಾಟಕ ಪ್ರಾಂತ ರೈತ ಸಂಘದ ಕೂಲಿಕಾರ್ಮಿಕರು ಪ್ರತಿಭಟನೆ ನಡೆಸಿದರು.
ಜಿಲ್ಲಾ ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿ, ತಾಲೂಕಿನ ರುಮ್ಮನಗೂಡ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಅರಣ್ಯಪ್ರದೇಶದ ಗುಡ್ಡಗಾಡು ಸ್ಥಳದಲ್ಲಿ 446 ಕೂಲಿ ಕಾರ್ಮಿಕರು ಉದ್ಯೋಗ ಖಾತ್ರಿಯೋಜನೆ ಅಡಿಯಲ್ಲಿ ಟ್ರಂಚ್ ವರ್ಕ್ ಮಾಡಿದ್ದಾರೆ.
ಆದರೆ ಅರಣ್ಯಇಲಾಖೆ ಇಂಜಿನಿಯರ್ ರಾಜಶೇಖರ ಕೂಲಿಕಾರ್ಮಿಕರಿಗೆ 224 ರೂ. ವೇತನ ನೀಡದೆ ಕೇವಲ 112 ರೂ.ನೀಡಿ ವಂಚಿಸಿದ್ದಾರೆ. ಬಡ ಕೂಲಿಕಾರ್ಮಿಕರು ಬೇಸಿಗೆ ದಿನಗಳಲ್ಲಿ ಬಿಸಿಲಿನ ತಾಪದೊಂದಿಗೆ ತಮ್ಮ ಹೊಟ್ಟೆಪಾಡಿಗಾಗಿ ಕೆಲಸ ಮಾಡಿದ್ದಾರೆ.ಆದರೆ ಅಧಿಕಾರಿಗಳು ಬಡವರ ಹಣ ದೋಚಿಕೊಳ್ಳುತ್ತಿರುವುದು ಅತ್ಯಂತ ಖಂಡನೀಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಶಾಸಕ ಡಾ|ಉಮೇಶ ಜಾಧವ್ ಉದ್ಯೋಗ ಖಾತ್ರಿ ಯೋಜನೆ ಬಗ್ಗೆ ಕೆಡಿಪಿ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿಲ್ಲ. ಕುಂಚಾವರಂ ಅರಣ್ಯಪ್ರದೇಶದಲ್ಲಿ ಹಾಗೂ ಸರಕಾರಿ ಜಮೀನಿನಲ್ಲಿ ಸಾಗುವಳಿ ಮಾಡಿದ ರೈತರಿಗೆ ಹಕ್ಕುಪತ್ರ ಕೊಡಿಸುವುದಾಗಿ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳ ದಬ್ಟಾಳಿಕೆಯನ್ನು ನಿಲ್ಲಿಸುತ್ತೇನೆಂದು ರೈತರಿಗೆ ಭರವಸೆ ನೀಡಿದ್ದರು.
ಅಲ್ಲದೇ ಸಮಾಜ ಕಲ್ಯಾಣ ಇಲಾಖೆಯಿಂದ ಅರಣ್ಯ ಹಕ್ಕು ಕಾಯಿದೆ ಕುರಿತು ಜಾಗೃತಿ ಮೂಡಿಸಿದ್ದರು.ಆದರೆ ರೈತರ ಹಿತ ಕಾಪಾಡುವಲ್ಲಿ ಅವರು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಆರೋಪಿಸಿದರು. ಪ್ರತಿಭಟನೆಯಲ್ಲಿ ತಾಲೂಕು ಉದ್ಯೋಗ ಖಾತ್ರಿ ಯೋಜನೆ ನೋಡಲ್ ಅಧಿಕಾರಿ ಸಂತೋಷಕುಮಾರ ಯಾಚೆ ಮತ್ತು ಶರಣಬಸಪ್ಪ ಮಮಶೆಟ್ಟಿ ಮಧ್ಯೆ ಮಾತಿನ ಚಕಮಕಿ ನಡೆದಾಗ ಅರಣ್ಯ ಇಲಾಖೆ ಎದುರು ಬಿಗುವಿನ ವಾತಾವರಣ ಉಂಟಾಗಿತ್ತು.
ತಹಶೀಲ್ದಾರ ದಯಾನಂದ ಪಾಟೀಲ, ಸಬ್ ಇನ್ಸಪೆಕ್ಟರ್ ಶರಣಬಸಪ್ಪ ಕೋಡ್ಲಾ ಇಬ್ಬರನ್ನು ಸಮಾಧಾನಪಡಿಸಿದರು. ಉದ್ಯೋಗ ಖಾತ್ರಿ ಯೋಜನೆ ಅಡಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆಗೆ ಒಳಪಡಿಸುತ್ತೇನೆಂದು ತಾಲೂಕು ನೋಡಲ್ ಅಧಿಕಾರಿ ಸಂತೋಷಕುಮಾರ ಯಾಚೆ ಭರವಸೆ ನೀಡಿದಾಗ ಪ್ರತಿಭಟನೆ ಹಿಂದಕ್ಕೆ ಪಡೆಯಲಾಯಿತು.
ತಾಲೂಕು ಕಾರ್ಯದರ್ಶಿ ಸಿದ್ದಾರ್ಥ ಠಾಕೂರ, ತಾಲೂಕುಅಧ್ಯಕ್ಷ ದೇವೀಂದ್ರಪ್ಪ ಪಾಟೀಲ ಕೊರವಿ, ಜಾಫರ ಮಿರಿಯಾಣ,ತಾಲೂಕ ಕಾರ್ಯದರ್ಶಿ ಸಿದ್ದಲಿಂಗಯ್ಯ ಸ್ವಾಮಿ ಎಂಪಳ್ಳಿ ಮಾತನಾಡಿದರು. ತಹಶೀಲ್ದಾರ ದಯಾನಂದ ಪಾಟೀಲ, ಉಪ ವಲಯ ಅರಣ್ಯಾಧಿಕಾರಿ ಸಂಜೀವ ಚವ್ಹಾಣ ಮನವಿ ಪತ್ರ ಸ್ವೀಕರಿಸಿದರು. ರುಮ್ಮನಗೂಡ, ಎಂಪಳ್ಳಿ,ರಟಕಲ್ ಗ್ರಾಮಗಳ ಕೂಲಿಕಾರ್ಮಿಕರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್ ಎಚ್ಚರಿಕೆ
ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.