ನೀಟ್ ಫಲಿತಾಂಶ ಪ್ರಕಟಕ್ಕೆ ಮಧುರೈ ಹೈಕೋರ್ಟ್ ತಡೆ
Team Udayavani, May 25, 2017, 2:10 AM IST
ಮಧುರೈ: ವೈದ್ಯಕೀಯ ಕೋರ್ಸ್ಗಳಿಗೆ ಸೇರ್ಪಡೆಗಾಗಿ ನಡೆಸಲಾದ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್)ಯ ಫಲಿತಾಂಶಕ್ಕೆ ಮಧುರೈ ಹೈಕೋರ್ಟ್ ಪೀಠ ಬುಧವಾರ ಮಧ್ಯಾಂತರ ತಡೆ ನೀಡಿದೆ. ನೀಟ್ ಪರೀಕ್ಷೆಯಲ್ಲಿ ತಮಿಳು ಮಾಧ್ಯಮ ಮತ್ತು ಇಂಗ್ಲಿಷ್ ಮಾಧ್ಯಮ ಪ್ರಶ್ನೆಪತ್ರಿಕೆಗಳಲ್ಲಿ ಸಾಕಷ್ಟು ವ್ಯತ್ಯಾಸಗಳು ಕಂಡುಬಂದಿದ್ದು, ಏಕರೂಪದ ಪ್ರಶ್ನೆಪತ್ರಿಕೆಗಳನ್ನು ನೀಡಲಾಗಿಲ್ಲ ಎಂದು ಆರೋಪಿಸಿ ಕೆಲವು ವಿದ್ಯಾರ್ಥಿಗಳು ಕೋರ್ಟ್ ಮೆಟ್ಟಿಲೇರಿದ್ದರು. ಈ ಹಿನ್ನೆಲೆಯಲ್ಲಿ ಮದ್ರಾಸು ಹೈಕೋರ್ಟ್ನ ಮಧುರೈ ಪೀಠ ಈ ಆದೇಶ ನೀಡಿದೆ.ಜೊತೆಗೆ ಜೂ.7ರಂದು ಈ ಬಗ್ಗೆ ಅಫಿದವಿಟ್ ಸಲ್ಲಿಸುವಂತೆ ಭಾರತೀಯ ವೈದ್ಯಕೀಯ ಮಂಡಳಿ ಮತ್ತು ಸಿಬಿಎಸ್ಇಗೆ ಆದೇಶ ನೀಡಿದೆ.
ಅರ್ಜಿಯಲ್ಲಿ ವಿದ್ಯಾರ್ಥಿಗಳು ನೀಟ್ ಪರೀಕ್ಷೆಯನ್ನು ರದ್ದುಗೊಳಿಸಿ, ಹೊಸತಾಗಿ ಪರೀಕ್ಷೆ ನಡೆಸಬೇಕೆಂದು ಬೇಡಿಕೆ ಸಲ್ಲಿಸಿದ್ದರು. ಏಕರೂಪದ ಪಠ್ಯಕ್ರಮ ಇದ್ದರೂ, ದೇಶಾದ್ಯಂತ ವಿವಿಧ ಮಾಧ್ಯಮಗಳ ಪ್ರಶ್ನೆಪತ್ರಿಕೆಗಳನ್ನು ಬೇರೆ ಬೇರೆಯದಾಗಿ ನೀಡಲಾಗಿದೆ ಎಂದು ದೂರಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI court; ಕಸ್ಟಡಿ ಸಾ*ವು ಪ್ರಕರಣ: ಹಿಮಾಚಲ ಐಜಿ ಸೇರಿ 7 ಮಂದಿ ಪೊಲೀಸರಿಗೆ ಶಿಕ್ಷೆ
Rohingya; ತ್ರಿಪುರಾದಲ್ಲಿ 6 ರೋಹಿಂಗ್ಯಾ ಮಹಿಳೆಯರ ಬಂಧನ
Saif Ali Khan ಪ್ರಕರಣ: ಶಂಕಿತ ಆರೋಪಿ ಛತ್ತೀಸ್ಘಡದಲ್ಲಿ ರೈಲ್ವೆ ಪೊಲೀಸರ ಬಲೆಗೆ?
Court Verdict: ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ… ಆರೋಪಿ ಸಂಜಯ್ ರಾಯ್ ದೋಷಿ
Suffocation: ಚಳಿಗೆಂದು ಹಾಕಿದ ಬೆಂಕಿ… ಬೆಳಗಾಗುವಷ್ಟರಲ್ಲಿ ದಂಪತಿಯ ಜೀವವೇ ಹೋಗಿತ್ತು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.