ಕಬ್ಬಿನ ಬೆಂಬಲ ಬೆಲೆ 25 ರೂ. ಕನಿಷ್ಠ ಹೆಚ್ಚಳ
Team Udayavani, May 25, 2017, 2:25 AM IST
ಹೊಸದಿಲ್ಲಿ: ಕರ್ನಾಟಕ ಮತ್ತು ದೇಶದ ಇತರ ಭಾಗಗಳ ಕಬ್ಬು ಬೆಳೆಗಾರರಿಗೆ ಸಂತಸದ ಸುದ್ದಿ. ಕೇಂದ್ರ ಸರಕಾರ 2017-18ನೇ ಸಾಲಿನಲ್ಲಿ ಕಬ್ಬಿಗೆ ನೀಡುತ್ತಿದ್ದ ಕನಿಷ್ಠ ಬೆಂಬಲ ಬೆಲೆಯನ್ನು ಕ್ವಿಂಟಾಲಿಗೆ 25 ರೂ. ನಷ್ಟು ಏರಿಸಿದೆ. ಇದರಿಂದ ಪ್ರತಿ ಕ್ವಿಂಟಾಲ್ ಕಬ್ಬಿಗೆ 225 ರೂ. ಬೆಂಬಲ ಬೆಲೆ ಸಿಗಲಿದೆ. ಕೇಂದ್ರ ಸಚಿವ ಸಂಪುಟದ ಆರ್ಥಿಕ ವ್ಯವಹಾರಗಳ ಕುರಿತ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ದೇಶಾದ್ಯಂತ ಸಕ್ಕರೆ ಕಾರ್ಖಾನೆಗಳ ಪರಿಸ್ಥಿತಿ ಸುಧಾರಿಸಿದ್ದು, ಬೆಂಬಲ ಬೆಲೆಯನ್ನು ಶೇ.10.6ರಷ್ಟು ಹೆಚ್ಚಳಗೊಳಿಸಲಾಗಿದೆ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ. ಅಲ್ಲದೆ ಕಳೆದ ವರ್ಷ ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಬರಗಾಲ ಕಾಡಿದ್ದರಿಂದ ಕಬ್ಬಿನ ಇಳುವರಿ ಕಡಿಮೆಯಾಗಿತ್ತು. ಆದರೆ ಈ ಬಾರಿ ಉತ್ತಮ ಮುಂಗಾರು ಆಗಲಿದೆ ಎಂದು ಹೇಳಿರುವುದರಿಂದಾಗಿ ಪರಿಸ್ಥಿತಿ ಸುಧಾರಿಸಬಹುದು ಎಂದು ತಿಳಿಸಿದ್ದಾರೆ.
ಎಫ್ಡಿಐ ಪರಿಶೀಲನಾ ಮಂಡಳಿ ರದ್ದು: ಈಗಿದ್ದ ವಿದೇಶಿ ನೇರ ಬಂಡವಾಳ ಹೂಡಿಕೆ ಕುರಿತ ಪರಿಶೀಲನಾ ಮಂಡಳಿಯನ್ನು ಕೇಂದ್ರ ಸಂಪುಟ ರದ್ದುಗೊಳಿಸಿದೆ. ಇದಕ್ಕೆ ಬದಲಾಗಿ ಬೇರೆಯೇ ಸಮಿತಿಯನ್ನು ಸ್ಥಾಪಿಸುವುದಾಗಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.