ರೋಜರ್ ಟೆನಿಸ್ ಕಪ್ ಶರಪೋವಾಗೆ ವೈಲ್ಡ್ ಕಾರ್ಡ್
Team Udayavani, May 25, 2017, 12:06 PM IST
ಟೊರೊಂಟೊ: ದ್ರವ್ಯ ನಿಷೇಧದ ಬಳಿಕ ಟೆನಿಸ್ಗೆ ಮರಳಿರುವ ಮರಿಯಾ ಶರಪೋವಾ ಆಗಸ್ಟ್ನಲ್ಲಿ ನಡೆಯಲಿರುವ ರೋಜರ್ ಕಪ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಟೊರೊಂಟೊದಲ್ಲಿ ನಡೆಯಲಿರುವ ಈ ಕೂಟಕ್ಕೆ ಸಂಘಟಕರು ಶರಪೋವಾ ಅವರಿಗೆ ವೈಲ್ಡ್ ಕಾರ್ಡ್ ನೀಡಿರುವುದನ್ನು ದೃಢಪಡಿಸಿದ್ದಾರೆ.
ಕಳೆದ ವರ್ಷದ ಆಸ್ಟ್ರೇಲಿಯನ್ ಓಪನ್ ವೇಳೆ ನಿಷೇಧಿತ ದ್ರವ್ಯ ಸೇವಿಸಿ ಸಿಕ್ಕಿ ಬಿದ್ದಿದ್ದ ಶರಪೋವಾ ಅವರಿಗೆ 15 ತಿಂಗಳ ನಿಷೇಧ ಹೇರಲಾಗಿತ್ತು. ಒಂದು ತಿಂಗಳ ಹಿಂದೆಯಷ್ಟೇ ಅವರು ಟೆನಿಸ್ಗೆ ಮರಳಿದ್ದು ಇಷ್ಟರವರೆಗೆ ಮೂರು ಡಬ್ಲ್ಯುಟಿಎ ಕೂಟಗಳಲ್ಲಿ ಅವರಿಗೆ ವೈಲ್ಡ್ಕಾರ್ಡ್ ನೀಡಲಾಗಿತ್ತು.
ಸ್ಟಟ್ಗರ್ಟ್ನಲ್ಲಿ ನಡೆದ ಮೊದಲ ಕೂಟದಲ್ಲಿ ರಶ್ಯನ್ ತಾರೆ ಸೆಮಿಫೈನಲ್ ತಲುಪಿದ್ದರು. ಆದರೆ ಆಶ್ಚರ್ಯವೆಂಬಂತೆ ಶರಪೋವಾ ಅವರಿಗೆ ಫ್ರೆಂಚ್ ಓಪನ್ ಸಂಘಟಕರು ವೈಲ್ಡ್ಕಾರ್ಡ್ ನೀಡಲು ನಿರಾಕರಿಸಿದ್ದಾರೆ. ಶರಪೋವಾ ಎರಡು ಬಾರಿ ಫ್ರೆಂಚ್ ಓಪನ್ ಜಯಿಸಿದ್ದರು.
ಟೆನಿಸ್ನ ಖ್ಯಾತ ಆಟಗಾರರಲ್ಲಿ ಒಬ್ಬರೆಂದು ಪರಿಗಣಿಸಲ್ಪಡುವ ಶರಪೋವಾ ಜುಲೈಯಲ್ಲಿ ನಡೆಯಲಿರುವ ವಿಂಬಲ್ಡನ್ ಕೂಟಕ್ಕೆ ಅರ್ಹತೆ ಗಳಿಸಲು ಪ್ರಯತ್ನಿಸುತ್ತಿದ್ದಾರೆ. ಯುಎಸ್ ಓಪನ್ ಕೂಟಕ್ಕೆ ಮುಂಚಿತವಾಗಿ ನಡೆಯುವ ಅಭ್ಯಾಸ ಕೂಟಗಳಲ್ಲಿ ಒಂದಾದ ರೋಜರ್ ಕಪ್ನಲ್ಲಿ ಆಡಲು ಇದೀಗ ಶರಪೋವಾಗೆ ಆಹ್ವಾನ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL : ಸಿಎಸ್ಕೆ ಮಾಲಿಕ ಶ್ರೀನಿವಾಸನ್ ವಿರುದ್ದ ಫಿಕ್ಸಿಂಗ್ ಆರೋಪ ಮಾಡಿದ ಲಲಿತ್ ಮೋದಿ
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
ICC World Rankings: ಟೆಸ್ಟ್ ಬೌಲಿಂಗ್ ರ್ಯಾಂಕಿಂಗ್ ಬುಮ್ರಾ ಮರಳಿ ನಂ.1
Brand Value: ಬಾಲಿವುಡ್ ತಾರೆಯರನ್ನು ಮೀರಿಸಿದ ಕ್ರಿಕೆಟಿಗರ ಬ್ರ್ಯಾಂಡ್ ಮೌಲ್ಯ!
IPL Auction: 27 ಕೋ. ರೂ. ಒಡೆಯ ರಿಷಭ್ ಪಂತ್ಗೆ ಸಿಗುವುದು 18.90 ಕೋಟಿ ಮಾತ್ರ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ
Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ
Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Kiccha Sudeepa: ಕ್ರಿಸ್ಮಸ್ ಗೆ ಬರುತ್ತಿದೆ ʼಮ್ಯಾಕ್ಸ್ʼ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.