ಪಾತಕಿ ದಾವೂದ್ ಸಂಬಂಧಿ ಮದುವೆಯಲ್ಲಿ ಬಿಜೆಪಿ ಸಚಿವ, ಪೊಲೀಸರು ಭಾಗಿ!
Team Udayavani, May 25, 2017, 4:03 PM IST
ನಾಸಿಕ್: ಭಾರತದ ಮೋಸ್ಟ್ ವಾಂಟೆಡ್ ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಸಂಬಂಧಿ ಮದುವೆ ಸಮಾರಂಭದಲ್ಲಿ
ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಆಪ್ತ ಸಚಿವ ಸೇರಿದಂತೆ ಹಲವು ಶಾಸಕರು ಹಾಗೂ 10 ಮಂದಿ ಪೊಲೀಸ್ ಅಧಿಕಾರಿಗಳು ಪಾಲ್ಗೊಂಡಿದ್ದು ವಿವಾದಕ್ಕೆ ಎಡೆಮಾಡಿಕೊಟ್ಟಿದೆ.
ಸೋಮವಾರ ಮಹಾರಾಷ್ಟ್ರ ನಾಸಿಕ್ ನಲ್ಲಿ ಮೇ 19ರಂದು ದಾವೂದ್ ಇಬ್ರಾಹಿಂನ ತಂಗಿ ಮಗಳ ವಿವಾಹ ಕಾರ್ಯಕ್ರಮ ನಡೆದಿತ್ತು. ಈ ಸಮಾರಂಭದಲ್ಲಿ ಮಹಾರಾಷ್ಟ್ರ ಶಿಕ್ಷಣ ಸಚಿವ, ಫಡ್ನವೀಸ್ ಆಪ್ತ ಗಿರೀಶ್ ಮಹಾಜನ್, ಬಿಜೆಪಿ ಶಾಸಕರಾದ ದೇವಯಾನಿ ಫರ್ನಾಂಡೆ, ಬಾಳಾಸಾಹೇಬ್ , ಸೀಮಾ ಹಿರಾಯ್ ಹಾಗೂ ನಾಸಿಕ್ ಮೇಯರ್ ರಂಜನಾ ಭಾನ್ಸಿ, ಉಪ ಮೇಯರ್ ಪ್ರಥಮೇಶ್ ಗಿಟೆ ಸೇರಿದಂತೆ ಸ್ಥಳೀಯ ಮುನ್ಸಿಪಲ್ ಕಾರ್ಪೋರೇಟರ್ಸ್ ಗಳು ಪಾಲ್ಗೊಂಡಿದ್ದರು.
ಅಷ್ಟೇ ಅಲ್ಲ ಒಬ್ಬ ಅಸಿಸ್ಟೆಂಟ್ ಪೊಲೀಸ್ ಕಮಿಷನರ್ ಹಾಗೂ ಒಂಬತ್ತು ಮಂದಿ ಇನ್ಸ್ ಪೆಕ್ಟರ್ಸ್ಸ್ ಗಳು ದಾವೂದ್ ಸಂಬಂಧಿ ಮದುವೆಯಲ್ಲಿ ಭಾಗಿಯಾಗಿದ್ದರು. ಅತಿಥಿಗಳ ಪಟ್ಟಿಯಲ್ಲಿ ಪೊಲೀಸರ ಹೆಸರು ಇದ್ದಿರುವ ನಿಟ್ಟಿನಲ್ಲಿ ನಾಸಿಕ್ ಪೊಲೀಸ್ ವರಿಷ್ಠಾಧಿಕಾರಿ ರವೀಂದ್ರ ಸಿಂಘಾಲ್ ತನಿಖೆಗೆ ಆದೇಶ ನೀಡಿದ್ದಾರೆ.
ದಾವೂದ್ ಇಬ್ರಾಹಿಂನ ಹೆಂಡತಿ ಮತ್ತು ಮದುಮಗಳ ತಾಯಿ ಸಹೋದರಿಯರು ಎಂದು ಪೊಲೀಸ್ ಇಲಾಖೆ ಮೂಲಗಳು ಖಚಿತಪಡಿಸಿರುವುದಾಗಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ
NCB ನಿರಂತರ ಕಾರ್ಯಾಚರಣೆ: ಡ್ರಗ್ಸ್ ಜಾಲ ಮುರಿಯಲು ಆಪರೇಷನ್ ಸಾಗರ ಮಂಥನ
J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ
Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್ಗಳ ಪ್ರವೇಶಕ್ಕೆ ನಿರ್ಬಂಧ
Maharashtra: ಕಾಂಗ್ರೆಸ್ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.