ಇಲಾಖೆಯ ಘನತೆ, ಗೌರವ ರಕ್ಷಣೆ ಕರ್ತವ್ಯ:  ಡಾ| ವೇದಮೂರ್ತಿ


Team Udayavani, May 26, 2017, 12:00 PM IST

2505mlr36.jpg

ಮಂಗಳೂರು: ಇಲಾಖೆಯ ಸಮವಸ್ತ್ರ ಧರಿಸಿದ ಬಳಿಕ ಅದರ ಘನತೆ, ಗೌರವವನ್ನು ಕಾಯುವುದು ನಮ್ಮ ಕರ್ತವ್ಯ ಎಂದು ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಡಾ| ವೇದಮೂರ್ತಿ ಹೇಳಿದರು.

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ವತಿಯಿಂದ ನಗರದ ಜಿಲ್ಲಾ ಪೊಲೀಸ್‌ ಕವಾಯತು ಮೈದಾನದಲ್ಲಿ ಗುರುವಾರ ಆಯೋಜಿಸಲಾದ ವಾರ್ಷಿಕ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

ಪೊಲೀಸ್‌ ಹಾಗೂ ಗೃಹರಕ್ಷಕ ದಳ ಇಲಾಖೆಯಲ್ಲಿ ಯಾವುದೇ ಭೇದಭಾವ ಇಲ್ಲವಾಗಿದ್ದು, ಹಲವಾರು ಪೊಲೀಸ್‌ ಠಾಣೆಗಳಲ್ಲಿ ಗೃಹರಕ್ಷಕ ದಳದ ಸಿಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಸರಕಾರದಿಂದ ದೊರೆಯುವ ಗೌರವಧನ ಕಡಿಮೆಯಾಗಿದ್ದರೂ ನಿಷ್ಕಾಮ ರೀತಿಯಲ್ಲಿ ಗೃಹರಕ್ಷಕ ದಳ ಸಿಬಂದಿ ಸೇವೆ ಸಲ್ಲಿಸುತ್ತಿದ್ದಾರೆ. ವಾರ್ಷಿಕ ತರಬೇತಿ ಯನ್ನು ಉತ್ತಮವಾಗಿ ಪಡೆದುಕೊಂಡಿರುವ ಗೃಹ ರಕ್ಷಕದಳದ ಸಿಬಂದಿ, ತರಬೇತಿಯ ಸದುಪಯೋಗ ಹಾಗೂ ಉತ್ತಮ ನಿರ್ವಹಣೆಯಾಗಿರುವುದು ಶ್ಲಾಘನೀಯ ಎಂದರು.

ಉಡುಪಿ ಜಿಲ್ಲಾ ಗೃಹರಕ್ಷಕ ದಳದ ಕಮಾಂಡೆಂಟ್‌ ಡಾ| ಕೆ. ಪ್ರಶಾಂತ್‌ ಶೆಟ್ಟಿ ಮಾತನಾಡಿ, ಕಡಿಮೆ ಗೌರವ ಧನವಿದ್ದರೂ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಗೃಹ ರಕ್ಷಕ ದಳದ ಸಿಬಂದಿ ಸೇವೆ ಶ್ಲಾಘನೀಯ. ಪ್ರತಿ  ಸಿಬಂದಿ ತಮ್ಮ ಇಲಾಖೆಯ ಬಗ್ಗೆ ಹೆಮ್ಮೆಪಡಬೇಕು ಎಂದರು.  ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಜಿಲ್ಲಾ ಗೃಹರಕ್ಷಕ ದಳದ ಕಮಾಂಡೆಂಟ್‌ ಡಾ| ಮುರಲೀ ಮೋಹನ ಚೂಂತಾರು ಅವರು, 100 ಗೃಹ ರಕ್ಷಕರಿಗೆ 10 ದಿನಗಳ ಕಾಲ ಉತ್ತಮ ತರಬೇತಿ ನೀಡಿ ಸಾಮಾಜಿಕ ಸೇವೆಗಾಗಿ ಅವರನ್ನು ನೀಡಲಾಗಿದೆ. ನಾವು ಮಾಡುವ ಪ್ರತಿಯೊಂದು ಕಾರ್ಯವನ್ನು ಸಮಾಜ ನೋಡುತ್ತಿದ್ದು, ನಾವು ನಮ್ಮ ಘನತೆ, ಗೌರವವನ್ನು ಉಳಿಸಿಕೊಳ್ಳಬೇಕು. ರಾಜ್ಯದಲ್ಲಿ 25,000 ಗೃಹರಕ್ಷಕರಿದ್ದು, ಜಿಲ್ಲೆಯಲ್ಲಿ 1,000 ಗೃಹ ರಕ್ಷಕರಿದ್ದಾರೆ. ತರಬೇತಿಯ ಮೂಲಕ ಪುನಃ 100 ಗೃಹ ರಕ್ಷಕರನ್ನು ಸೇವೆಗೆ ನಿಯುಕ್ತಿ ಗೊಳಿಸಲಾಗಿದೆ  ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಡೆಪ್ಯೂಟಿ ಕಮಾಂಡೆಂಟ್‌ ರಮೇಶ್‌ ಸ್ವಾಗತಿಸಿ, ಸೆಕೆಂಡ್‌ ಇನ್‌ ಕಮಾಂಡ್‌ ಮಹಮ್ಮದ್‌ ಇಸ್ಮಾಯಿಲ್‌ ವಂದಿಸಿದರು. ಬೆಳ್ತಂಗಡಿ ಘಟಕ ಯುನಿಟ್‌ ಹೆಡ್‌ ಜಯಾನಂದ ನಿರೂಪಿಸಿದರು. ಉತ್ತಮ ಪಥಸಂಚಲನದಲ್ಲಿ ವೈಯಕ್ತಿಕವಾಗಿ ಪ್ರಸಾದ್‌, ಸಬೀನಾ ಪ್ರಶಸ್ತಿ ಪಡೆದುಕೊಂಡರು.

ಟಾಪ್ ನ್ಯೂಸ್

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwe

ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

6

Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ

5

Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ

4(1

Mangaluru: ಪಂಪ್‌ವೆಲ್‌-ಪಡೀಲ್‌ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ

2

Ullal: ತೊಕ್ಕೊಟ್ಟು-ಮುಡಿಪು ರಸ್ತೆಗೆ ತೇಪೆ ಕಾಮಗಾರಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

1-qweqwe

ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.