ಮೀರಾರೋಡ್:ಬಾಲಾಜಿ ಸನ್ನಿಧಿಯಲ್ಲಿ ಶನೀಶ್ವರ ಜಯಂತಿ ಆಚರಣೆ
Team Udayavani, May 27, 2017, 5:06 PM IST
ಮುಂಬಯಿ: ಮೀರಾರೋಡ್ ಪೂರ್ವದ ಬಾಲಾಜಿ ಸನ್ನಿಧಿಯಲ್ಲಿ ಶ್ರೀ ಶನೀಶ್ವರ ಜಯಂತಿಯು ಮೇ 25ರಂದು ವಿವಿಧ ಧಾರ್ಮಿಕ, ಆಧ್ಯಾತ್ಮಿಕ ವಿಧಿ ವಿಧಾನಗಳೊಂದಿಗೆ ನೆರವೇರಿತು.
ವಿದ್ವಾನ್ ಗೋಪಾಲ್ ಭಟ್ ಅವರು ಶ್ರೀ ದೇವರ ಗ್ರಂಥ ಪಾರಾಯಣಗೈದು ಶ್ರೀ ಶನಿದೇವರ ಮಹಾತೆ¾ಯನ್ನು ತಿಳಿಸಿ, ನಾನು- ನನ್ನದು, ಎಲ್ಲವೂ ನನ್ನಿಂದಲೇ ಎಂಬ ಅಹಂನ್ನು ತೊರೆದಾಗ ಮಾತ್ರ ಮನುಷ್ಯ ಶ್ರೀ ಶನಿದೇವರ ಕೃಪಾಕಟಾಕ್ಷಕ್ಕೆ ಪಾತ್ರನಾಗುತ್ತಾನೆ. ಲೌಖೀಕ ಜಗತ್ತಿನಲ್ಲಿ ಯಾವುದೂ ಶಾಶ್ವತವಲ್ಲ. ಪರೋಪಕಾರ ಜೀವನ, ಸತ್ಯತೆ, ಪ್ರಾಮಾಣಿಕ ದುಡಿಮೆಯಿಂದ ಜೀವನ ಸವೆಸುಸುವುದೇ ಶನಿಗ್ರಂಥದ ತಾತ್ಪರ್ಯವಾಗಿದೆ ಎಂದರು.
ಟ್ರಸ್ಟಿ ಸಚ್ಚಿದಾನಂದ ರಾವ್ ಅವರು ಕಾರ್ಯಕ್ರಮಗಳ ಬಗ್ಗೆ ವಿವರಣೆ ನೀಡಿ, ಜೂನ್ 1ರಿಂದ ಜೂ. 10ರವರೆಗೆ ಉಚಿತ ವಸಂತ ಶಿಬಿರವನ್ನು ಬಾಲಾಜಿ ಸನ್ನಿಧಿಯಲ್ಲಿ ಆಯೋಜಿಸಲಾಗಿದೆ. ಈಗಾಗಲೇ ನಮ್ಮ ನಿರೀಕ್ಷೆಗೂ ಮೀರಿ ಅನೇಕ ಮಂದಿ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ಜಾತಿ, ಮತ, ಧರ್ಮ ಬೇಧವಿಲ್ಲದೆ ಎಲ್ಲರೂ ಮುಕ್ತವಾಗಿ ಶಿಬಿರದಲ್ಲಿ ಭಾಗವಹಿಸಬಹುದು. ಸಂಪನ್ಮೂಲ ವ್ಯಕ್ತಿಯಾಗಿ ವಿದ್ವಾನ್ ರಮಣ ಆಚಾರ್ಯ ಅವರು ವೇದ, ಉಪನಿಷತ್ತು, ಸಂಸ್ಕೃತದ ಬಗ್ಗೆ ಪ್ರವಚನ ನೀಡಲಿದ್ದಾರೆ ಎಂದು ಹೇಳಿ ಎಲ್ಲರಿಗೂ ಶುಭ ಹಾರೈಸಿದರು.
ಇದೇ ಸಂದರ್ಭದಲ್ಲಿ ಬಾಲಾಜಿ ಮಹಿಳಾ ವಿಭಾಗದ ಸದಸ್ಯೆಯರಿಂದ ಭಜನ ಕಾರ್ಯಕ್ರಮ ನಡೆಯಿತು. ಮಠದ ಪ್ರಬಂಧಕ ಹಾಗೂ ಟ್ರಸ್ಟಿ ರಾಧಾಕೃಷ್ಣ ಭಟ್, ಅರ್ಚಕ ವಿಷ್ಣು ಭಟ್, ಜಯರಾಮ ಭಟ್, ಪರಿವಾರದ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಕೊನೆಯಲ್ಲಿ ಮಹಾಮಂಗಳಾರತಿಯ ಬಳಿಕ ಪ್ರಸಾದ ರೂಪದಲ್ಲಿ ಅನ್ನಸಂತರ್ಪಣೆ ಜರಗಿತು. ನೂರಾರು ಮಂದಿ ಭಕ್ತಾದಿಗಳು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ತುಳು-ಕನ್ನಡಿಗರು, ವಿವಿಧ ಕ್ಷೇತ್ರಗಳ ಗಣ್ಯರು ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
ಇಂಗ್ಲೆಂಡ್‌ನ ರಾದರಮ್ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್
MUST WATCH
ಹೊಸ ಸೇರ್ಪಡೆ
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.