3 ವರ್ಷದ ಸಾಧನೆ ಜೇಟ್ಲಿ ಭಾಷಣ ಇಂದು
Team Udayavani, May 28, 2017, 10:38 AM IST
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮೂರು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ
ಕೇಂದ್ರ ಸರ್ಕಾರ ದೇಶಾದ್ಯಂತ ಹಮ್ಮಿಕೊಂಡಿರುವ “ಮೇಕಿಂಗ್ ಆಫ್ ಡೆವಲಪ್ಡ್ ಇಂಡಿಯಾ’ (ಮೋದಿ) ಕಾರ್ಯಕ್ರಮಕ್ಕೆ ರಾಜ್ಯದಲ್ಲಿ ಭಾನುವಾರ ಅಧಿಕೃತ ಚಾಲನೆ ಸಿಗಲಿದೆ. ಭಾನುವಾರ ಸಂಜೆ 7 ಗಂಟೆಗೆ ನಗರದ ಜ್ಞಾನಜ್ಯೋತಿ
ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಅರುಣ್ ಜೇಟ್ಲಿ, “ಸಬ್‌ಕಾ ಸಾಥ್-ಸಬ್‌ಕಾ ವಿಕಾಸ್’ ಕುರಿತಂತೆ ಭಾಷಣ ಮಾಡುವ ಮೂಲಕ ಎಂಓಡಿಐಗೆ ಚಾಲನೆ ನೀಡಲಿದ್ದಾರೆ. ಬಿಜೆಪಿ ಬೆಂಗಳೂರು ಮಹಾನಗರ ಮತ್ತು ನಗರ ಜಿಲ್ಲೆ ವತಿಯಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದ್ದು, ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ
ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರರಾವ್, ಕೇಂದ್ರ ಸಚಿವರಾದ
ಅನಂತಕುಮಾರ್, ಡಿ.ವಿ.ಸದಾನಂದಗೌಡ, ಸಂಸದ ಪಿ.ಸಿ.ಮೋಹನ್, ಆರ್.ಅಶೋಕ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.
ಬಿಜೆಪಿ ಯುವ ಸಂಪರ್ಕ ಅಭಿಯಾನ: ರಾಜ್ಯ ಬಿಜೆಪಿ ಯುವ ಮೋರ್ಚಾ ವತಿಯಿಂದ ಭಾನುವಾರ ಬೆಂಗಳೂರಲ್ಲಿ ಯುವ ಸಂಪರ್ಕ ಅಭಿಯಾನ ಆಯೋಜಿಸಲಾಗಿದೆ. ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆಯಲಿರುವ ಈ ಅಭಿಯಾನದಲ್ಲಿ ರಾಜ್ಯದ 36 ಸಂಘಟನಾ ಜಿಲ್ಲೆಗಳಲ್ಲಿರುವ 279 ಮಂಡಲಗಳ ಸಾವಿರ ಯುವ ಮೋರ್ಚಾ ಸದಸ್ಯರು ಪಾಲ್ಗೊಳ್ಳಲಿದ್ದು,
ಬೆಳಗ್ಗೆ 11 ಗಂಟೆಗೆ ಆರಂಭವಾಗಲಿದೆ ಎಂದು ರಾಜ್ಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರೂ ಆಗಿರುವ ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು
Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.