ಯಲಹಂಕದಲ್ಲಿ 11 ಸೆಂ.ಮೀ. ವರ್ಷಧಾರೆ
Team Udayavani, May 28, 2017, 11:08 AM IST
ಬೆಂಗಳೂರು: ರಾಜಧಾನಿ ಬೆಂಗಳೂರು, ಸುಳ್ಯ, ದೇವನಹಳ್ಳಿ, ಮೈಸೂರು ಸೇರಿ ರಾಜ್ಯದ ಕೆಲವೆಡೆ ಮುಂಗಾರುಪೂರ್ವ
ಮಳೆಯ ಆರ್ಭಟ ಮುಂದುವರಿದಿದೆ. ಶನಿವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ
ಬೆಂಗಳೂರು ನಗರ ಜಿಲ್ಲೆಯ ಯಲಹಂಕದಲ್ಲಿ 11 ಸೆಂ.ಮೀ.ಗಳಷ್ಟು ಮಳೆ ಸುರಿಯಿತು.
ರಾಜಧಾನಿ ಬೆಂಗಳೂರಿನ ಹಲವೆಡೆ ಶನಿವಾರವೂ ಭಾರೀ ಮಳೆ ಸುರಿದಿದ್ದು, ಹಲವೆಡೆ ಮರ, ಕೊಂಬೆಗಳು ಧರೆಗುರು
ಳಿವೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ನಗರವಾಸಿಗಳು ಪರದಾಡುವಂತಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹಲವೆಡೆ ಉತ್ತಮ ಮಳೆಯಾಗಿದೆ. ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸತತ 2 ಗಂಟೆ ಕಾಲ ಸುರಿದ ಮಳೆಗೆ ವಿಮಾನ ನಿಲ್ದಾಣದ ಪಾರ್ಕಿಂಗ್ ಯಾರ್ಡ್‌ಗೆ ನೀರು ನುಗ್ಗಿತ್ತು. ದೇವನಹಳ್ಳಿ ತಾಲೂಕಿನ ಬುಳ್ಳಹಳ್ಳಿ ಗ್ರಾಮದ ಬಳಿ ಶಾಲಾ ವಾಹನವೊಂದು ಹಳ್ಳಕ್ಕೆ ಬಿದ್ದಿತ್ತು. ಅದೃಷ್ಟವಶಾತ್ ಮಕ್ಕಳಿಗೆ ಯಾವುದೇ ಹಾನಿ ಸಂಭವಿಸಿಲ್ಲ.
ಸುಳ್ಯ ತಾಲೂಕು ಪೈಕದಲ್ಲಿ ಸಿಡಿಲಿಗೆ ಹೈಟೆನ್ಶನ್ ತಂತಿಯೊಂದು ಕಡಿದು ರಿûಾದ ಮೇಲೆ ಬಿದ್ದಿದೆ. ಇದರಿಂದಾಗಿ
ರಿûಾ ಸಂಪೂರ್ಣ ಭಸ್ಮವಾಗಿದೆ. ಚಾಮರಾಜನಗರ, ಮೈಸೂರು ಜಿಲ್ಲೆಯ ಕೆಲವೆಡೆಯೂ ಮಳೆಯಾಗಿದ್ದು,
ನಂಜನಗೂಡು ತಾಲೂಕಿನ ಹೆಡತಲೆ ಗ್ರಾಮದಲ್ಲಿ 60ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. 6 ಗುಡಿಸಲುಗಳು
ನೆಲಸಮವಾಗಿವೆ. ಗುಂಡ್ಲು ನದಿಗೆ ಪ್ರವಾಹ ಬಂದಿದೆ. ಕೊಳ್ಳೇಗಾಲ ತಾಲೂಕಿನ ಉತ್ತಂಬಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮಳೆಯ ನೀರು ನುಗ್ಗಿದೆ. ಹನೂರು ಸುತ್ತಮುತ್ತ ಬಿರುಗಾಳಿ ಮಳೆಗೆ 20ಕ್ಕೂ ಹೆಚ್ಚು ಮನೆಗಳು ಹಾನಿಗೊಳಗಾಗಿದ್ದು, ಒಂದೇ ಕುಟುಂಬ ಮೂವರು ಗಾಯಗೊಂಡಿದ್ದಾರೆ.
ಉತ್ತರ ಒಳನಾಡಿನ ಬಹುತೇಕ ಎಲ್ಲೆಡೆ ಕರಾವಳಿಯ ಹಲವೆಡೆ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಅಧಿಕವಾಗಿತ್ತು.
ರಾಜ್ಯದ ದಕ್ಷಿಣ ಒಳನಾಡಿನ ಹಲವೆಡೆ ಸಾಧಾರಣದಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.