ಪಾಕ್‌ ನಂಟಿನ ವಿಚಾರಣೆ ವೇಳೆ ಬೆಳಕಿಗೆ ಬಂತು ಮದುವೆ ಪ್ರಸಂಗ


Team Udayavani, May 28, 2017, 12:05 PM IST

pak-investigation.jpg

ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಕೇರಳ ಮೂಲದ ಶಿಹಾಬ್‌ ಮತ್ತು ಪಾಕಿಸ್ತಾನ ಪ್ರಜೆಗಳ ವಿಚಾರಣೆ ವೇಳೆ ಮತ್ತೂಂದು “ಮದುವೆ ಪ್ರಸಂಗ’ ಬೆಳಕಿಗೆ ಬಂದಿದೆ. ಪಾಕಿಸ್ತಾನದ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ ಕೇರಳದ ಮೊಹಮದ್‌ ಶಿಹಾಬ್‌ಗ ಈ ಮೊದಲು ಕೇರಳದಲ್ಲಿ ಯುವತಿಯೊಬ್ಬಳನ್ನು ವಿವಾಹವಾಗಿದ್ದ ಎಂಬುದು ಗೊತ್ತಾಗಿದೆ. 

ಕೇಂದ್ರ ತನಿಖಾ ಸಂಸ್ಥೆಗಳ ಜತೆಗೆ ಕೇರಳ ಪೊಲೀಸರು ಕೂಡ ಬೆಂಗಳೂರಿಗೆ ಧಾವಿಸಿ ವಿಚಾರಣೆ ನಡೆಸುತ್ತಿದ್ದು, ಇವರೊಂದಿಗೆ ಶಿಹಾಬ್‌ ಸಹೋದರ ಶಿಬ್ಲಿನ್‌ ಕೂಡ ಕೇರಳ ಪೊಲೀಸರ ಜತೆಗೆ ಬೆಂಗಳೂರಿಗೆ ಬಂದಿದ್ದಾನೆ. ಅಲ್ಲದೇ ಪೊಲೀಸರ ವಿಚಾರಣೆಗೆ ಸಹಕಾರ ನೀಡುತ್ತಿರುವ ಆತ, ಸಹೋದರನ ಮತ್ತೂಂದು ಮದುವೆ ಸುದ್ದಿಯನ್ನೂ ಹೊರಹಾಕಿದ್ದಾನೆ.

ಕೇರಳದಿಂದ ಖತಾರ್‌ಗೆ ತೆರಳಿದ್ದ ಮೊಹಮದ್‌ ಶಿಹಾಬ್‌ ಪಾಕಿಸ್ತಾನದ ನಜ್ಮಾ ಅವರನ್ನು ಪ್ರೀತಿಸಿ ವಿವಾಹವಾಗಿದ್ದ. ಇದಕ್ಕೂ ಮೊದಲು ಶಿಹಾಬ್‌ಗ 2013ರಲ್ಲೇ ಕೇರಳ ಮೂಲದ ಯುವತಿಯ ಜತೆ ಮದುವೆ ಆಗಿತ್ತು. ಮೊದಲ ಪತ್ನಿಗೆ ಹೆಣ್ಣು ಮಗು ಕೂಡ ಇದೆ. ಆದರೆ, ಖತಾರ್‌ನಲ್ಲಿ ಕೆಲಸಕ್ಕೆಂದು ತಂದೆಯ ಜತೆ ಹೋಗಿದ್ದ ಶಿಹಾಬ್‌, ತಂದೆ ಭಾರತಕ್ಕೆ ವಾಪಾಸಾದರೂ ಆತ ಮಾತ್ರ ಹಿಂದಿರುಗಲಿಲ್ಲ.

ಆಗ ಶಿಹಾಬ್‌ ಹಾಗೂ ಪಾಕಿಸ್ತಾನದ ಯುವತಿ ನಡುವೆ ಪ್ರೇಮಾಂಕುರವಾಗಿದ್ದು. ಮದುವೆ ಕೂಡ ಆಗಿದ್ದ. ಈ ವಿಚಾರ ಮನೆಯವರಿಗೆ ತಿಳಿದಿತ್ತು. ಬಳಿಕ ಕೇರಳಕ್ಕೆ ಬಂದು ಮೊದಲ ಪತ್ನಿಯಿಂದ ವಿಚ್ಛೇದ‌ನ ಪಡೆದುಕೊಂಡಿದ್ದ. ಆದರೆ, ಖತಾರ್‌ನಿಂದ ಬೆಂಗಳೂರಿಗೆ ಬಂದು ನೆಲೆಸಿರುವುದು ತಿಳಿದಿರಲಿಲ್ಲ. ಮಾಧ್ಯಮಗಳ ಮೂಲಕ ತಿಳಿಯಿತು ಎಂದು ಸಹೋದರ ಶಿಬ್ಲಿನ್‌ ಹೇಳಿರುವುದಾಗಿ ಪೊಲೀಸ್‌ ಮೂಲಗಳು ತಿಳಿಸಿವೆ.

ಪಾಕಿಸ್ತಾನದಿಂದ ಭಾರತಕ್ಕೆ ಆಗಮಿಸಿ ಇಲ್ಲಿನ ದಾಖಲೆಗಳನ್ನು ಸೃಷ್ಟಿಸಿಕೊಂಡು ಅಕ್ರಮವಾಗಿ ನೆಲೆಸಿದ್ದರು ಎನ್ನುವ ಆರೋಪದ ಮೇಲೆ ಸಿಸಿಬಿ ಪೊಲೀಸರು, ಕೇರಳದ ಮಹಮದ್‌ ಶಿಹಾಬ್‌ ಈತನ ಪತ್ನಿ ಪಾಕಿಸ್ತಾನದ ನಜ್ಮಾ, ಮಹಮದ್‌ ಖಾಸಿಫ್‌ ಮತ್ತು ಈತನ ಪತ್ನಿ ಝೈನಬ್‌ ಕಿರಣ್‌ ಅವರನ್ನು ಬಂಧಿಸಿದ್ದರು.

500 ರೂ.ಗೆ ಆಧಾರ್‌ ಕಾರ್ಡ್‌
ಆರೋಪಿಗಳು ನಕಲಿ ದಾಖಲೆಗಳನ್ನು ಕೊಟ್ಟು 500 ರೂಪಾಯಿಗೆ ಆಧಾರ ಕಾರ್ಡ್‌ ಪಡೆದುಕೊಂಡಿದ್ದಾರೆ. ಆಧಾರ್‌ ಪಡೆಯುವ ವೇಳೆ ಯಾವ ದಾಖಲೆಗಳನ್ನು ಕೊಟ್ಟಿದ್ದರು ಎಂಬ ಬಗ್ಗೆ ಆರೋಪಿಗಳು ಸರಿಯಾಗಿ ಉತ್ತರಿಸುತ್ತಿಲ್ಲ. ದಕ್ಷಿಣ ವಿಭಾಗದಲ್ಲೇ ಆಧಾರ್‌ ಮಾಡಿಸಿರುವುದು ಖಚಿತವಾಗಿದೆ. ಆದರೆ,ಯಾವ ಸೆಂಟರ್‌ನಲ್ಲಿ ಮಾಡಿಸಿದ್ದಾರೆ ಎನ್ನುವುದು ಗೊತ್ತಾಗುತ್ತಿಲ್ಲ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

1-leo

Football;ಕೇರಳದಲ್ಲಿ ಅಂತಾರಾಷ್ಟ್ರೀಯ ಪಂದ್ಯ ಆಡಲಿರುವ ದಿಗ್ಗಜ ಲಿಯೋನೆಲ್ ಮೆಸ್ಸಿ

delhi air

Delhi ಮಿತಿ ಮೀರಿದ ವಾಯು ಮಾಲಿನ್ಯ: ಸರಕಾರಿ ಕಚೇರಿಗಳ 50% ಸಿಬಂದಿಗಳಿಗೆ ಮನೆಯಿಂದಲೇ ಕೆಲಸ

1-wqewqe

BBK11: ದೊಡ್ಮನೆಯಲ್ಲಿ ಸೆಡೆ ಜಗಳ.. ಬಿಗ್ ಬಾಸ್ ನಿಂದ ಅಚೆ ಬರಲು ರೆಡಿಯಾದ ಸುರೇಶ್

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

1-shaa

Success ನಿಮ್ಮನ್ನು ಪ್ರತ್ಯೇಕಿಸಲು ಮತ್ತು ವೈಫಲ್ಯಕ್ಕೆ ಕಾರಣವಾಗಬಹುದು: ಶಾರುಖ್ ಖಾನ್

Arecanut

Hike Price: ಮಾರುಕಟ್ಟೆಯಲ್ಲಿ ಡಬ್ಬಲ್‌ ಚೋಲ್‌ ಚಾಲಿ ಅಡಿಕೆ ಧಾರಣೆ ಏರಿಕೆ

ANF-Coombing

History: ನಕ್ಸಲ್‌ ಚಳವಳಿಯ ರಕ್ತಸಿಕ್ತ ಇತಿಹಾಸ; ಸಾವಿನೊಂದಿಗೆ ಪೊಲೀಸ್‌-ನಕ್ಸಲ್‌ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Accident: ಆರೋಪಿ ಸೆರೆಗೆ 200 ಕ್ಯಾಮೆರಾ ಪರಿಶೀಲನೆ

Bengaluru: ಅಪಘಾತದಲ್ಲಿ ಬೈಕ್‌ ಸವಾರ ಸಾವು; ಬಸ್‌ ಚಾಲಕನಿಗೆ 15 ತಿಂಗಳು ಜೈಲು

Bengaluru: ಅಪಘಾತದಲ್ಲಿ ಬೈಕ್‌ ಸವಾರ ಸಾವು; ಬಸ್‌ ಚಾಲಕನಿಗೆ 15 ತಿಂಗಳು ಜೈಲು

Bengaluru: ಪತಿಯಿಂದ ಭಾರೀ ಸಾಲ; ಪತ್ನಿ ಆತ್ಮಹತ್ಯೆ

Bengaluru: ಪತಿಯಿಂದ ಭಾರೀ ಸಾಲ; ಪತ್ನಿ ಆತ್ಮಹತ್ಯೆ

Tragic: ಕ್ರಿಕೆಟ್‌ ತಂಡಕ್ಕೆ ಆಯ್ಕೆ ಆಗದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ

Tragic: ಕ್ರಿಕೆಟ್‌ ತಂಡಕ್ಕೆ ಆಯ್ಕೆ ಆಗದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

1-leo

Football;ಕೇರಳದಲ್ಲಿ ಅಂತಾರಾಷ್ಟ್ರೀಯ ಪಂದ್ಯ ಆಡಲಿರುವ ದಿಗ್ಗಜ ಲಿಯೋನೆಲ್ ಮೆಸ್ಸಿ

delhi air

Delhi ಮಿತಿ ಮೀರಿದ ವಾಯು ಮಾಲಿನ್ಯ: ಸರಕಾರಿ ಕಚೇರಿಗಳ 50% ಸಿಬಂದಿಗಳಿಗೆ ಮನೆಯಿಂದಲೇ ಕೆಲಸ

8

Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿಟ್ಟು ವ್ಯಕ್ತಿ ನಾಪತ್ತೆ ಪ್ರಕರಣ; ಶವ ಪತ್ತೆ

1-mag-1

Vertex Workspace ಸಂಸ್ಥೆಗೆ ಬೆಸ್ಟ್ ಇನ್ನೋವೇಟಿವ್ ಎಂಟರ್‌ಪೈಸ್ ಅವಾರ್ಡ್

de

Kulgeri: ಟ್ರ್ಯಾಕ್ಟರ್ ಹಿಂಬದಿಗೆ ಬೈಕ್ ಡಿಕ್ಕಿ; ಸವಾರ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.