ವಾರವಿಡೀ ಸುರಿದ ಮಳೆಗೆ 400 ಮರಗಳು ಧರೆಗೆ


Team Udayavani, May 28, 2017, 12:05 PM IST

rain-week.jpg

ಬೆಂಗಳೂರು: ಮುಂಗಾರು ಪೂರ್ವ ಮಳೆಗೆ ರಾಜಧಾನಿ ಬೆಂಗಳೂರು ತತ್ತರಿಸಿದ್ದು, ಕಳೆದೊಂದು ವಾರದಿಂದ ಸುರಿದ ಮಳೆಗೆ 400ಕ್ಕೂ ಹೆಚ್ಚು ಮರ, ಕೊಂಬೆಗಳು ಧರೆಗುರುಳಿದ್ದು, ಹಲವು  ಪ್ರದೇಶಗಳಲ್ಲಿ ಮನೆಗಳಿಗೆ ನೀರು ನುಗ್ಗಿದ್ದರಿಂದ ಜನಜೀವನ ಅಸ್ತವ್ಯಸ್ಥಗೊಂಡಿದೆ.

ಕಳೆದೊಂದು ವಾರದಿಂದ ನಗರದಲ್ಲಿ ಮುಂಗಾರು ಪೂರ್ವ ಮಳೆಯಾಗುತ್ತಿದ್ದು, ಶುಕ್ರವಾರ ಸುರಿದ ಭಾರಿ ಮಳೆ ಹಾಗೂ ಶನಿವಾರ ಆಲಿಕಲ್ಲು ಸಮೇತ ಸುರಿದ ಮಳೆಗೆ 250ಕ್ಕೂ ಹೆಚ್ಚು ಮರಗಳು ನೆಲಕ್ಕುರುಳಿವೆ. ತಗ್ಗು ಪ್ರದೇಶಗಳಲ್ಲಿರುವ ನೂರಾರು ಮನೆಗಳಿಗೆ ನೀರು ನುಗ್ಗಿದ್ದರಿಂದ ಜನರು ಪರದಾಡುವಂತಾಗಿದೆ. ಜತೆಗೆ ನಗರದಲ್ಲಿ 70ಕ್ಕೂ ಹೆಚ್ಚು ಭಾಗಗಳಲ್ಲಿ ವಿದ್ಯುತ್‌ ಕಂಬಗಳು ಬಿದ್ದು ವಿದ್ಯುತ್‌ ವ್ಯತ್ಯಯವಾಗಿದೆ.

ಶುಕ್ರವಾರ ನಗರದ ಹಲವೆಡೆ ಮರಗಳು ವಾಹನ ಸವಾರರ ಮೇಲೆ ಬಿದ್ದ ಪರಿಣಾಮ ನಾಲ್ಕೈದು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. 40ಕ್ಕೂ ಹೆಚ್ಚು ವಾಹನಗಳು ಜಖಂಗೊಂಡಿವೆ. ಗಾಂಧಿ ಬಜಾರ್‌, ರಾಜಭವನ, ಕಸ್ತೂರ ಬಾ ರಸ್ತೆ, ಕಾರ್ಪೋರೇಷನ್‌ ವೃತ್ತ, ಬಸವನಗುಡಿ, ಮಿನರ್ವ ವೃತ್ತ, ರಾಜಭವನದ ಮುಂಭಾಗ, ಬಳ್ಳಾರಿ ರಸ್ತೆ ಸೇರಿದಂತೆ ಪ್ರಮುಖ ಭಾಗಗಳಲ್ಲಿ ಗಂಟೆಗಟ್ಟಲೇ ಸವಾರರು ರಸ್ತೆಯಲ್ಲಿರಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು.

ಮಳೆಗಾಲಕ್ಕೆ ಮೊದಲೇ ಪಾಲಿಕೆಯಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳದಿರುವುದಕ್ಕೆ ಸಾರ್ವಜನಿಕರಿಂದ ತೀವ್ರ ಟೀಕೆಗಳು ಎದುರಾಗಿವೆ. ಪಾಲಿಕೆಯ ಅರಣ್ಯ ಘಟಕದಲ್ಲಿ ಕೇವಲ 21 ತುರ್ತು ನಿರ್ವಹಣಾ ತಂಡಗಳಿದ್ದು, ಈ ಪೈಕಿ 17 ತಂಡಗಳು ಹಗಲಿನಲ್ಲಿ ಹಾಗೂ 4 ತಂಡಗಳು ಮಾತ್ರ ರಾತ್ರಿ ವೇಳೆ ಕಾರ್ಯ ನಿರ್ವಹಿಸುತ್ತಿವೆ.

ಕಳೆದೊಂದು ವಾರದಿಂದ ನಗರದಲ್ಲಿ ಮಳೆ ಸುರಿಯುತ್ತಿದ್ದರೂ ಪಾಲಿಕೆ ಹೆಚ್ಚುವರಿ ತಂಡಗಳನ್ನು ನೇಮಿಸಿಕೊಳ್ಳಲು ಮುಂದಾಗಿಲ್ಲ. ಇದರಿಂದ ತಂಡಗಳು ಒಂದ ಕಡೆ ಕಾರ್ಯಾಚರಣೆಯಲ್ಲಿ ನಿರತವಾದರೆ ಮತ್ತೂಂದು ಕಡೆಯಿಂದ ಬರುವ ದೂರುಗಳಿಗೆ ಸ್ಪಂದಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಹಗಲು ವೇಳೆಗಿಂತ ರಾತ್ರಿ ಹೆಚ್ಚಿನ ತಂಡಗಳು ಕಾರ್ಯ ನಿರ್ವಹಿಸಬೇಕೆಂಬ ಒತ್ತಾಯ ಸಾರ್ವಜನಿಕರಿಂದ ಕೇಳಿಬಂದಿದೆ. 

ಅಂಡರ್‌ಪಾಸ್‌ಗಳು ಜಲಾವೃತ!: ನಗರದಲ್ಲಿ ಶುಕ್ರವಾರ ಸುರಿದ ಮಳೆಗೆ ನಗರದ ಅಂಡರ್‌ ಪಾಸ್‌ ಹಾಗೂ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ನಗರದಲ್ಲಿ ಶುಕ್ರವಾರ ಹಾಗೂ ಶನಿವಾರ ಸುರಿದ ಮಳೆಯಿಂದಾಗಿ ನೂರಾರು ಮನೆಗಳಿಗೆ ನೀರು ನುಗ್ಗಿ ಜನರ ನಿದ್ದೆಗೆಡಿಸಿದೆ. ಇದರೊಂದಿಗೆ ನಗರ ಕೇಂದ್ರ ಭಾಗದಲ್ಲಿರುವ ರಿಚ್‌ಮಂಡ್‌ಟೌನ್‌, ಕಲಾಸಿಪಾಳ್ಯ, ಬಂಬೂಬಜಾರ್‌, ಸಹಕಾರ ನಗರ, ಆರ್‌.ಕೆ.ಗಾರ್ಡನ್‌, ಸಂಪಂಗಿರಾಮನಗರ,

ಶಾಂತಿನಗರ, ಮಡಿವಾಳ, ಕೃಪಾನಿಧಿ ಲೇಔಟ್‌, ಅಂಜನಾಪುರ, ಬೆಳ್ಳಂದೂರು, ವಿಜಿನಾಪುರ, ಕೆಂಪಾಪುರ, ಅರೆಕೆರೆ, ಶಾಂತಿನಗರ, ಚಿಕ್ಕಲಸಂದ್ರ, ಉತ್ತರಹಳ್ಳಿ, ಅಕ್ಷಯ ನಗರ, ಬೊಮ್ಮನಹಳ್ಳಿ, ಬಿಟಿಎಂ ಲೇಔಟ್‌ನಲ್ಲಿ ಹಲವು ತಗ್ಗು ಪ್ರದೇಶಗಳಲಿರುವ ಮನೆಗಳಿಗೆ ನೀರು ನುಗ್ಗಿದೆ. ಮಳೆನೀರು ಕಾಲುವೆಗಳು ಉಕ್ಕಿ ಹರಿದು ಅಕ್ಷಯ ನಗರ ಮತ್ತು ಬೊಮ್ಮನಹಳ್ಳಿಯ ಕೆಲ ಪ್ರದೇಶಗಳಲ್ಲಿ ಎರಡು ಮೂರು ಅಡಿಯಷ್ಟು ನೀರು ನಿಂತ ದೃಶ್ಯ ಕಂಡುಬಂದಿದೆ.

ಬೆಸ್ಕಾಂಗೆ ದೂರುಗಳ ಪ್ರವಾಹ: ಶುಕ್ರವಾರ ರಾತ್ರಿ 12ರಿಂದ ಶನಿವಾರ ರಾತ್ರಿವರೆಗೆ ಸುರಿದ ಮಳೆಯಿಂದಾಗಿ ಬೆಸ್ಕಾಂ ನಿರ್ವಹಣಾ ಕೊಠಡಿಗೆ ದೂರುಗಳ ಪ್ರವಾಹವೇ ಹರಿದು ಬಂದಿವೆ. ಶುಕ್ರವಾರ ರಾತ್ರಿಯಿಂದ ಶನಿವಾರ ರಾತ್ರಿವರೆಗೆ 6000ಕ್ಕೂ ಅಧಿಕ ದೂರುಗಳು ಬಂದಿದ್ದು, ಮೂರು ಸಾವಿರಕ್ಕೂ ಅಧಿಕ ದೂರುಗಳಿಗೆ ಬೆಸ್ಕಾಂ ಸಿಬ್ಬಂದಿ ಸ್ಪಂದಿಸಿದ್ದಾರೆ.

ಶುಕ್ರವಾರದಿಂದ ಶನಿವಾರ ರಾತ್ರಿ ಸುರಿದ ಮಳೆಯ ಆರ್ಭಟಕ್ಕೆ ಸುಮಾರು 80 ವಿದ್ಯುತ್‌ ಕಂಬಗಳು ಮುರಿದಿವೆ. ಮರ ಹಾಗೂ ಮರದ ಕೊಂಬೆ ಬಿದ್ದ ಪರಿಣಾಮ ಹಲವೆಡೆ ವಿದ್ಯುತ್‌ ಕಂಬ ನೆಲಕ್ಕುರುಳಿವೆ. ಚಾಮರಾಜಪೇಟೆ, ಮೈಸೂರು ರಸ್ತೆ ಸುತ್ತಮುತ್ತಲಿನ ಪ್ರದೇಶ, ಆರ್‌.ಆರ್‌. ನಗರ, ಬೊಮ್ಮನಹಳ್ಳಿ, ಉತ್ತರಹಳ್ಳಿ ಉಳಿದ ಕಡೆಗಳಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಿವೆ.

ದಿನವಿಡೀ ಕಾರ್ಯಾಚರಣೆ: ಶುಕ್ರವಾರ ಸುರಿದ ಮಳೆಯಿಂದಾಗಿ ನಗರದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿದ ಮೇಯರ್‌ ಹಾಗೂ ಅಧಿಕಾರಿಗಳ ತಂಡ ಸಮಸ್ಯೆಗಳ ಪರಿಹಾರಕ್ಕೆ ಮುಂದಾಯಿತು. ಶುಕ್ರವಾರ ರಾತ್ರಿ 8 ಗಂಟೆಗೆ ಸ್ವತಃ ಮೇಯರ್‌ ಜಿ.ಪದ್ಮಾವತಿ ಅವರೇ ಪಾಲಿಕೆಯ ಕೇಂದ್ರ ಕಚೇರಿಯಲ್ಲಿರುವ ನಿಯಂತ್ರಣ ಕೊಠಡಿಯಲ್ಲಿ ಕುಳಿತು ಸಾರ್ವಜನಿಕರಿಂದ ಕರೆಗಳನ್ನು ಸ್ವೀಕರಿಸಿ ನೆರವಿಗೆ ಮುಂದಾಗುವಂತೆ ತುರ್ತು ನಿರ್ವಹಣಾ ತಂಡಗಳಿಗೆ ಸೂಚನೆ ನೀಡಿದರು.

ಶನಿವಾರವೂ ನಿರ್ವಹಣಾ ಕೊಠಡಿಗೆ ಆಗಮಿಸಿ ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸಿದ ಅವರು, ತಡರಾತ್ರಿಯವರೆಗೆ ಅನಾಹುತಕ್ಕೆ ಒಳಗಾಗಿರುವ ಪ್ರದೇಶಗಳಿಗೆ ಭೇಟಿ ನೀಡಿ ಅಗತ್ಯ ಕ್ರಮಕೈಗೊಳ್ಳಲು ಸೂಚಿಸಿದರು. ಶನಿವಾರ ಮುಂಜಾನೆ 4 ಗಂಟೆಯಿಂದ ಕಾರ್ಯಾಚರಣೆಗೆ ಮುಂದಾದ ಮೇಯರ್‌ ನಗರದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಖುದ್ದು ಸ್ಥಳದಲ್ಲಿ ನಿಂತು ಮರಗಳನ್ನು ತೆರವುಗೊಳಿಸಿದರು. ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್‌ ಅವರ ಸೂಚನೆಯಂತೆ ಕಳೆದ ವರ್ಷ ಮಳೆಯಿಂದ ಅನಾಹುತ ಸಂಭವಿಸಿದ ಕೋಡಿಚಿಕ್ಕನಹಳ್ಳಿ, ಅವನಿಶೃಂಗೇರಿ ನಗರ, ಅರಕೆರೆ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಳೆನ ತಡೆಯೋಕ್ಕೆ ಆಗುತ್ತೇನ್ರಿ?
ಬೆಂಗಳೂರು:
ಬೆಂಗಳೂರಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಆಗುತ್ತಿರುವ ಆವಾಂತರದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮಾಧ್ಯಮದವರು ಪ್ರಶ್ನಿಸಿದರೆ, “ಮಳೆ ಬಂದ್ರೆ ಸರ್ಕಾರ ಏನ್‌ ಮಾಡೋಕ್‌ ಆಗುತ್ತೆ?’ ಎಂದು ಪ್ರಶ್ನಿಸಿದ್ದಾರೆ. ಮಾಜಿ ಪ್ರಧಾನಿ ಜವಾಹರಲಾಲ್‌ ನೆಹರು ಅವರ ಪುಣ್ಯ ತಿಥಿ ಅಂಗವಾಗಿ ವಿಧಾನಸೌಧ ಆವರಣದಲ್ಲಿರುವ ನೆಹರು ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, “ಮಳೆನೇ ಬರಬಾರದೇನ್ರಿ? ಮಳೆ ಬರದ ಹಾಗೆ ಸರ್ಕಾರ ಏನಾದರೂ ಮಾಡೋಕ್‌ ಆಗುತ್ತಾ ?ಆ ರೀತಿಯ ತಂತ್ರಜ್ಞಾನ ಏನಾದರೂ ಇದಿಯಾ?’ ಎಂದೂ ಮಾಧ್ಯಮಗಳನ್ನು ಅವರು ಪ್ರಶ್ನಿಸಿದ್ದಾರೆ. 

“ಉದಯವಾಣಿ’ ಮೊದಲೇ ಎಚ್ಚರಿಸಿತ್ತು!
ನಗರದಲ್ಲಿ ಹರಿಯುವಂತಹ ಮಳೆನೀರುಗಾಲುವೆಗಳನ್ನು ಸಮರ್ಪಕವಾಗಿ ನಿರ್ವಹಿಸದಿರುವುದು ಹಾಗೂ ಕಾಲುವೆಗಳ ಸ್ಥಿತಿಗತಿ ಕುರಿತು “ರಾಜಕಾಲುವೆ ಅರಾಜಕತೆ’ ಎಂಬ ಶೀರ್ಷಿಕೆಯಡಿಯಲ್ಲಿ ಸರಣಿ ಲೇಖನಗಳನ್ನು ಪ್ರಕಟಿಸಿದ್ದ “ಉದಯವಾಣಿ’ ಪಾಲಿಕೆಯನ್ನು ಎಚ್ಚರಿಸುವುದರೊಂದಿಗೆ, ಮಳೆಗಾಲದಲ್ಲಿ ಅನಾಹುತ ಉಂಟಾಗದಂತೆ ಪಾಲಿಕೆಯಿಂದ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮಾಹಿತಿ ನೀಡಿತ್ತು. ಅದಾದ ನಂತರವೂ ಪಾಲಿಕೆಯ ಅಧಿಕಾರಿಗಳು ಎಚ್ಚೆತ್ತುಕೊಳ್ಳದ ಹಿನ್ನೆಲೆಯಲ್ಲಿ ಜನ ತೊಂದರೆ ಅನುಭವಿಸುವಂತಾಗಿದೆ.

ಟಾಪ್ ನ್ಯೂಸ್

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-r-ashok

Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್‌. ಅಶೋಕ್‌

Bengaluru: ಮಾವನ ಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ

Bengaluru: ಮಾವನ ಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ

Road mishap: ಗೂಡ್ಸ್‌ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿ; ಸಿಎಆರ್‌ ಕಾನ್‌ಸ್ಟೇಬಲ್ ಸಾವು

Road mishap: ಗೂಡ್ಸ್‌ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿ; ಸಿಎಆರ್‌ ಕಾನ್‌ಸ್ಟೇಬಲ್ ಸಾವು

Bengaluru: ಸ್ನೇಹಿತನ ಅಪ್ರಾಪ್ತ ಪುತ್ರಿ ಮೇಲೆ ರೇಪ್‌ ಮಾಡಿ ಗರ್ಭಿಣಿ ಮಾಡಿದ್ದ ಅಪರಾಧಿ

Bengaluru: ಸ್ನೇಹಿತನ ಅಪ್ರಾಪ್ತ ಪುತ್ರಿ ಮೇಲೆ ರೇಪ್‌ ಮಾಡಿ ಗರ್ಭಿಣಿ ಮಾಡಿದ್ದ ಅಪರಾಧಿ

Bengaluru: ಅಕ್ಕನ ಬುದ್ಧಿಮಾಂದ್ಯ ಮಗಳ ಮೇಲೆಯೇ ಸತತ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ

Bengaluru: ಅಕ್ಕನ ಬುದ್ಧಿಮಾಂದ್ಯ ಮಗಳ ಮೇಲೆಯೇ ಸತತ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ

ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

7-r-ashok

Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್‌. ಅಶೋಕ್‌

6-delhi-pollution

Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್‌, ಬಸ್‌ಗಳಿಗೆ ನಿರ್ಬಂಧ

5-subrahmanya

Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.