ಶಿಕ್ಷಣ ನೀಡಿದರೆ ಅದೇ ದೊಡ್ಡ ಭಾಗ್ಯ: ಡಾ| ಜಿ. ಶಂಕರ್‌

Team Udayavani, May 28, 2017, 3:29 PM IST

2705kde10.jpg

ಕುಂದಾಪುರ: ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರವನ್ನು ಕಲಿಸುವಲ್ಲಿ ಪೋಷಕರು ಮುಂದಾಗಬೇಕು. ಇದರಿಂದಾಗಿ ಮಕ್ಕಳು ಜೀವನದಲ್ಲಿ ಯಶಸ್ಸನ್ನು ಕಾಣಲು ಸಾಧ್ಯ. ಮಕ್ಕಳಿಗೆ ಶಿಕ್ಷಣವನ್ನು ನೀಡುವ ಬಗ್ಗೆ ಪ್ರಥಮ ಆದ್ಯತೆ ನೀಡಿ. ಜೀವನದಲ್ಲಿ ಅದೇ ದೊಡ್ಡ ಭಾಗ್ಯ ಎಂದು ಜಿ. ಶಂಕರ್‌ ಫ್ಯಾಮಿಲಿ ಟ್ರಸ್ಟ್‌  ಪ್ರವರ್ತಕ ನಾಡೋಜ ಡಾ| ಜಿ. ಶಂಕರ್‌ ಹೇಳಿದರು.

ಅವರು ಶನಿವಾರ ಕುಂದಾಪುರದ ರೋಟರಿ ಲಕ್ಷ್ಮೀನರಸಿಂಹ ಸಭಾ ಭವನದಲ್ಲಿ  ಜಿ. ಶಂಕರ್‌ ಫ್ಯಾಮಿಲಿ ಟ್ರಸ್ಟ್‌, ಮೊಗವೀರ ಯುವ ಸಂಘ ಟನೆ ವತಿಯಿಂದ ಜಿಲ್ಲೆಯ ಎಲ್ಲ ಸಮಾಜದ 5,100 ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ  ಉಚಿತ ನೋಟ್‌ ಪುಸ್ತಕ ವಿತರಣಾ ಸಮಾರಂಭವನ್ನು  ಉದ್ಘಾಟಿಸಿ ಮಾತನಾಡಿದರು.

ಈ ಬಾರಿ ಉಡುಪಿ ಜಿಲ್ಲೆ ಪಿಯುಸಿ ಹಾಗೂ ಎಸೆಸೆಲ್ಸಿ ಫಲಿತಾಂಶದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದೆ. ಈ ನಿಟ್ಟಿನಲ್ಲಿ ಎಲ್ಲ ಪೋಷಕರು, ಜಿಲ್ಲಾಡಳಿತ ಅಭಿನಂದಾ ರ್ಹರು. ಪುಸ್ತಕ ಎಂದರೆ ಸರಸ್ವತಿ, ಈ ನಿಟ್ಟಿನಲ್ಲಿ ಜಿ. ಶಂಕರ್‌ ಫ್ಯಾಮಿಲಿ ಟ್ರಸ್ಟ್‌  ವತಿಯಿಂದ ಶಿವಮೊಗ್ಗ, ತೀರ್ಥಹಳ್ಳಿ, ಸಾಗರ, ಹೊಸನಗರ ಹಾಗೂ ಬೆಳಗ್ಗೆ ಉಡುಪಿಯಲ್ಲಿ ಸುಮಾರು 10,000 ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ  ನೋಟ್‌ ಪುಸ್ತಕವನ್ನು ವಿತರಣೆ ಮಾಡಲಾಗುತ್ತಿದೆ ಎಂದರು.

ಸಂಘಟನೆಯ ಅಧ್ಯಕ್ಷ ಗಣೇಶ್‌ ಕಾಂಚನ್‌ ಅಧ್ಯಕ್ಷತೆ ವಹಿಸಿದ್ದರು. ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಕುಂದಾಪುರ ಶಾಖೆ ಅಧ್ಯಕ್ಷ ಕೆ.ಕೆ. ಕಾಂಚನ್‌  ಮುಖ್ಯ ಅತಿಥಿಗಳಾಗಿದ್ದರು.

ಮೊಗವೀರ ಯುವ ಸಂಘಟನೆಯ ಕೋಟೇಶ್ವರ  ವಲಯದ ಮಾಜಿ ಅಧ್ಯಕ್ಷ ಅಶೋಕ್‌ ತೆಕ್ಕಟ್ಟೆ ಸ್ವಾಗತಿಸಿ, ಸುಧಾಕರ ಕಾಂಚನ್‌ ಕಾರ್ಯಕ್ರಮ ನಿರ್ವಹಿಸಿದರು. ಸುರೇಶ್‌ ವಿಠಲವಾಡಿ ವಂದಿಸಿದರು.

ಸೇವೆಯ ಸದುಪಯೋಗಕ್ಕೆ ಡಾ| ಶಂಕರ್‌ ಕರೆ
ಜಿ. ಶಂಕರ್‌ ಪ್ಯಾಮಿಲಿ ಟ್ರಸ್ಟ್‌ ಪ್ರವರ್ತಕ ಡಾ| ಜಿ. ಶಂಕರ್‌ ಅವರು ಪ್ರಸ್ತಾವನೆಗೈದು, ಇಂದಿನ ವಿದ್ಯಾರ್ಥಿಗಳು ಒಳ್ಳೆಯ ಉದ್ಯೋಗ ಗಿಟ್ಟಿಸಿಕೊಂಡು ಸಮಾಜದಲ್ಲಿ ಸತøಜೆಗಳಾಗಿ ಬೆಳೆದು ಮುಂದೆ ಅವರೂ ಕೂಡ ಸಮಾಜ ಸೇವೆ ಮಾಡಬೇಕು. ನಿರುದ್ಯೋಗ, ಬಡತನ ಹೋಗಿ ಸಮಾಜದಲ್ಲಿ ಸಮಾನತೆ ನೆಲೆಸಬೇಕೆಂಬ ಉದ್ದೇಶದಿಂದ ಟ್ರಸ್ಟ್‌ ಮೂಲಕ ಉಚಿತವಾಗಿ ಪುಸ್ತಕ ವಿತರಣೆ ಮತ್ತಿತರ ಕಾರ್ಯಗಳನ್ನು ಮಾಡಲಾಗುತ್ತಿದೆ. ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
 
ಟಾಪ್ ನ್ಯೂಸ್

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agri

State Government Programme: ರೈತರಿಂದ ದೂರ ಸರಿದ ಕೃಷಿ ಯಂತ್ರಧಾರೆ

Byndoor-Vahical

Byndoor: ಮೀನು ಸಾಗಿಸುವ ವಾಹನದಲ್ಲಿ ಜಾನುವಾರು ಸಾಗಾಟ!

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.