ಮಾದಕ ವಸ್ತು ಸಂಗ್ರಹಿಸಿದ್ದ ನೈಜೀರಿಯನ್ನರ ಸೆರೆ


Team Udayavani, May 29, 2017, 12:49 PM IST

arrest.jpg

ಬೆಂಗಳೂರು: ಮನೆಯಲ್ಲಿ ಅಕ್ರಮವಾಗಿ ಮಾದಕ ವಸ್ತು ಸಂಗ್ರಹಿಸಿದ್ದ ಆರೋಪದ ಮೇಲೆ ಐವರು ನೈಜಿರಿಯಾ ಪ್ರಜೆಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಝಾಗೋ ಕಾನ್ಸ್‌ಟ್ಯಾಂಟ್‌ (32), ಎಬಿಲ್‌ ಇಫಿಕೂ (53), ಉಡುಗಾಲೋ ಅಗೂಸ್ಟಿನ್‌ ಅರೈನ್‌ (29), ಇಬುಕ್‌ ಇಮ್ಯೂನಲ್‌ (37) ಪೀಟರ್‌ (26) ಬಂಧಿತರು.

ಆರೋಪಿಗಳಿಂದ 170 ಗ್ರಾಂ. ಕೊಕೇನ್‌, 17 ಮೊಬೈಲ್‌, 1 ಲ್ಯಾಪ್‌ಟಾಪ್‌, ಒಂದು ಪಾಸ್‌ಪೋರ್ಟ್‌, ಪೊರ್ಟೆಬಲ್‌ ತೂಕದ ಯಂತ್ರ, ಪೊರ್ಟೆಬಲ್‌ ಡಿ-ಲಿಂಕ್‌, ಒಂದು ಹೋಂಡಾ ಆಕ್ಟೀವಾ ಸೇರಿದಂತೆ 18 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಮುಂಬೈ, ಹೈದ್ರಾಬಾದ್‌ ಹಾಗೂ ವಿದೇಶಗಳಿಂದ ಅಕ್ರಮವಾಗಿ ಬರುತ್ತಿದ್ದ ಕೊಕೇನನ್ನು ಮೆನೆಯಲ್ಲಿ ಸಂಗ್ರಹಿಸಿಟ್ಟು, ಬಳಿಕ ಅದನ್ನು ಸಣ್ಣ ಪೊಟ್ಟಣಗಳಲ್ಲಿ ತುಂಬಿ, ವಿದ್ಯಾರ್ಥಿಗಳು ಹಾಗೂ ಮಾದಕ ವ್ಯಸನಿಗಳಿಗೆ ಪ್ರತಿ ಗ್ರಾಂಗೆ 5ರಿಂದ 8 ಸಾವಿರ ರೂ.ಗೆ ಮಾರುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದು ದಾಳಿ ನಡೆಸಲಾಗಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ.

ಝಾಗೋ ಕಾನ್ಸ್‌ಟ್ಯಾಂಟ್‌ ಮತ್ತು ನೈಜಿರಿಯಾದ ಎಬಿಲ್‌ ಇಫಿಕೂನನ್ನು ಹೆಣ್ಣೂರು ಠಾಣೆ ವ್ಯಾಪ್ತಿಯ ವಡ್ಡರಪಾಳ್ಯದ ಬಾಡಿಗೆ ಮನೆಯಲ್ಲಿ ಹಾಗೂ ಉಡುಗಾಲೋ ಅಗೂಸ್ಟಿನ್‌ ಅರೈನ್‌, ಇಬುಕ್‌ ಇಮ್ಯೂನಲ್‌, ಪೀಟರ್‌ನನ್ನು ರಾಮಮೂರ್ತಿನಗರ ಠಾಣೆ ವ್ಯಾಪ್ತಿಯ ಕೃಷ್ಣಪ್ಪ ಲೇಔಟ್‌ನ ಮನೆಯೊಂದರಲ್ಲಿ ಬಂಧಿಸಲಾಗಿದೆ. 

ಆರೋಪಿಗಳು ವಾಣಿಜ್ಯ ವೀಸಾ ಪಡೆದು ಬೆಂಗಳೂರಿಗೆ ಬಂದಿದ್ದು, ಈ ಪೈಕಿ ಎಬಿಲ್‌ ಇಫಿಕೂ ಮತ್ತು ಉಡುಗಾಲೋ ವೀಸಾ ಅವಧಿ 2015ರ ನವೆಂಬರ್‌ನಲ್ಲೇ ಅಂತ್ಯವಾಗಿದ್ದು, ಅಕ್ರಮವಾಗಿ ನೆಲೆಸಿದ್ದಾರೆ. ಇನ್ನು ಝಾಗೋ ಕಾನ್ಸ್‌ಟ್ಯಾಂಟ್‌ ಅರೈನ್‌ ಈ ಹಿಂದೆ ಮಾದಕ ವಸ್ತು ಮಾರಾಟ ಆರೋಪದಲ್ಲಿ ಬಂಧಕ್ಕೊಳಗಾಗಿ ಜಾಮೀನು ಪಡೆದು ಹೊರಬಂದಿದ್ದಾನೆ. ಈತನ ಬಳಿ  ಪಾಸ್‌ಪೋರ್ಟ್‌ ಇಲ್ಲ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.

ಈ ಮೊದಲು ಮಾದಕ ವಸ್ತು ಮಾರಾಟಗಾರರನ್ನು ಗುರಿಯಾಗಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿತ್ತು. ಇದೀಗ ಕಾರ್ಯಾಚರಣೆ ಮಾರ್ಗ ಬದಲಿಸಿದ್ದು, ಅಕ್ರಮವಾಗಿ ಮಾದಕ ವಸ್ತುಗಳನ್ನು ಸಂಗ್ರಹಿಸಿಟ್ಟ ವ್ಯಕ್ತಿಗಳ ಮನೆ ಮೇಲೇ ದಾಳಿ ನಡೆಸಲಾಗಿದೆ. ಐವರು ಆರೋಪಿಗಳು ನಕಲಿ ದಾಖಲೆಗಳನ್ನು ನೀಡಿ ಸಿಮ್‌ಗಳನ್ನು ಖರೀದಿ ಮಾಡಿ ಮಾರಾಟಗಾರರನ್ನು ಸಂಪರ್ಕಿಸುತ್ತಿದ್ದರು ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

ಈ ಹಿಂದೆ ಮಾದಕ ವಸ್ತು ಮಾರಾಟದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ನೈಜಿರಿಯಾ ಅಥವಾ ವಿದೇಶಿ ಪ್ರಜೆಗಳ ಮಾಹಿತಿ ಆಧರಿಸಿ, ಮಾದಕ ವಸ್ತುವನ್ನು ಮನೆಯಲ್ಲಿ ದಾಸ್ತಾನು ಮಾಡಿದ್ದ ವ್ಯಕ್ತಿಗಳ ಮನೆ ಮೇಲೆ ದಾಳಿ ನಡೆಸಲಾಗುತ್ತಿದೆ. ಜತೆಗೆ ವೀಸಾ ಅವಧಿ ಮುಗಿದರೂ ನಗರದಲ್ಲಿ ನೆಲೆಸಿರುವ ವಿದೇಶಿಗಳ ಪ್ರಜೆಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

17-

Bengaluru: ದೆಹಲಿಯ ನೇಲ್‌ ಆರ್ಟಿಸ್ಟ್ ನೇಣಿಗೆ

16-cm

Bengaluru: ತ್ಯಾಜ್ಯ ವರ್ಗಾವಣೆ ಘಟಕಕ್ಕೆ ಸಿದ್ದರಾಮಯ್ಯ ಚಾಲನೆ

15-ccb

Bengaluru: ಜೀವಾ ಆತ್ಮಹತ್ಯೆ: ಡಿವೈಎಸ್ಪಿಗೆ ಸಿಸಿಬಿ ನೋಟಿಸ್‌ ಸಾಧ್ಯತೆ

14-fruad

Bengaluru: ಸಾಲ ಕೊಡಿಸುವುದಾಗಿ 37 ಲಕ್ಷ ವಂಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

de

Guttigar: ಮಾವಿನಕಟ್ಟೆ; ಮರದಿಂದ ಬಿದ್ದು ವ್ಯಕ್ತಿ ಸಾವು

9

Kaup: ಬೀಚ್‌ನಲ್ಲಿನ್ನು ಪ್ಯಾರಾ ಮೋಟರಿಂಗ್‌

8(1

Udupi: ಸ್ಥಾಪಕರು ಜೀವನ ಪಾಠ ಮಾಡಿದ್ದ ಎಂಜಿಎಂ ಕಾಲೇಜಿಗೆ ಅಮೃತೋತ್ಸವ

7

Kollur: ದ್ವಿಪಥ ರಸ್ತೆ ನಿರ್ಮಾಣಕ್ಕೆ ಅಂಗಡಿ ಮುಂಗಟ್ಟು ತೆರವು ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.