ಜಿಎಸ್‌ಟಿಗೆ ಹೊಂದಿಕೊಳ್ಳಲೇಬೇಕು
Team Udayavani, May 30, 2017, 12:38 PM IST
ಬೆಂಗಳೂರು: ದೇಶಾದ್ಯಂತ ಜುಲೈ 1ರಿಂದ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯವಸ್ಥೆ ಜಾರಿಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಯಾವುದೇ ರಾಜಿಗೆ ಸಿದ್ಧವಿಲ್ಲ ಎಂದು ಸ್ಪಷ್ಟಪಡಿಸಿರುವ ಕೇಂದ್ರ ಹಣಕಾಸು ಸಚಿವ ಅರುಣ್ ಜೆಟಿÉ, ಹೊಸ ತೆರಿಗೆ ಪದ್ಧತಿಗೆ ಅಧಿಕಾರಿಗಳು ಮತ್ತು ತೆರಿಗೆದಾರರು ಹೊಂದಿಕೊಳ್ಳಲೇಬೇಕಾಗಿದೆ ಎಂದು ಹೇಳಿದ್ದಾರೆ.
ಜಾಲಹಳ್ಳಿಯಲ್ಲಿ ಸೋಮವಾರ ಕೇಂದ್ರ ಅಬಕಾರಿ ಸೀಮಾ ಶುಲ್ಕ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು. “ದೇಶಾದ್ಯಂತ ಏಕರೂಪದ ತೆರಿಗೆ ವ್ಯವಸ್ಥೆ ಜಾರಿಗೊಳಿಸುವ ಮೂಲಕ ಆರ್ಥಿಕತೆಯಲ್ಲಿ ಸಮತೋಲನ ತರುವುದು ಜಿಎಸ್‌ಟಿ ಉದ್ದೇಶ. ಆದ್ದರಿಂದ ಅಧಿಕಾರಿಗಳು ಮತ್ತು ತೆರಿಗೆದಾರರು ಅದಕ್ಕೆ ಹೊಂದಿಕೊಂಡು ದೇಶದ ಅಭಿವೃದ್ಧಿಗೆ ಕೈಜೋಡಿಸಬೇಕು,’ ಎಂದು ಮನವಿ ಮಾಡಿದರು.
ಜಿಎಸ್‌ಟಿ ಜಾರಿ ವಿಚಾರದಲ್ಲಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಸಮನ್ವಯತೆಯಿಂದ ಕೆಲಸ ಮಾಡಬೇಕಾಗಿದೆ. ದೇಶದ ಸರ್ವತೋಮುಖ ಅಭಿವೃದ್ಧಿಗೆ ಇದು ಬಹಳ ಪ್ರಮುಖವಾಗಿದ್ದು, ಸಮರ್ಪಕ ಅನುಷ್ಠಾನಕ್ಕೆ ಎಲ್ಲರ ಸಹಕಾರ ಅಗತ್ಯ. ಎಲ್ಲ ರಾಜ್ಯ ಸರ್ಕಾರಗಳು ಕೈ ಜೋಡಿಸಬೇಕು. ಸಾಧಕ-ಬಾಧಕಗಳನ್ನು ಚರ್ಚಿಸಿ ಏಕರೂಪ ತೆರಿಗೆ ಪದ್ಧತಿಯ ಜಾರಿ ಮಾಡಲಾಗಿದ್ದು, ಇದು ಆರ್ಥಿಕತೆ ಬದಲಾವಣೆಗೆ ಕಾರಣವಾಗಲಿದೆ ಎಂದು ಹೇಳಿದರು.
ದೇಶಾದ್ಯಂತ ಇರುವ ಎಲ್ಲ ತೆರಿಗೆ ತರಬೇತಿ ಕೇಂದ್ರಗಳು ಉತ್ತಮವಾಗಿ ಪಾತ್ರ ನಿರ್ವಹಿಸುತ್ತಿವೆ. ಅದರಲ್ಲೂ ವಿಶೇಷವಾಗಿ ಬೆಂಗಳೂರಿನ ಕೇಂದ್ರದಲ್ಲಿ ತರಬೇತಿ ಪಡೆದವರು ದೇಶಕ್ಕೆ ಮಾದರಿ ಎನ್ನುವ ಕೆಲಸ ಮಾಡುತ್ತಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.
ರಾಜಕೀಯ ಪಕ್ಷಗಳು ದೇಣಿಗೆ ಸ್ವೀಕರಿಸುವ ಕಾರ್ಯಕ್ಕೆ ಪಾರದರ್ಶಕತೆ ತರಲು ಮತ್ತು ಆ ದೇಣಿಗೆಗೆ ಜವಾಬ್ದಾರಿ ನಿಗದಿಪಡಿಸಲು ಬಜೆಟ್‌ನಲ್ಲಿ ಯೋಚಿಸಿ ಎಲೆಕ್ಟ್ರಾಲ್ ಬಾಂಡ್ ಜಾರಿಗೊಳಿಸುವ ಬಗ್ಗೆ ಘೋಷಿಸಲಾಗಿತ್ತು. ಅದಕ್ಕಾಗಿ ಭಾರತೀಯ ರಿಸರ್ವ್ ಬ್ಯಾಂಕ್ ನೀತಿಗೆ ತಿದ್ದುಪಡಿ ತರುವ ಪ್ರಸ್ತಾವನೆ ಇದ್ದು, ಶೀಘ್ರದಲ್ಲೇ ತಿದ್ದುಪಡಿ ತಂದು ಎಲೆಕ್ಟ್ರಾಲ್ ಬಾಂಡ್ ಸಂಬಂಧ ಸ್ಪಷ್ಟ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದರು.
ಕಳೆದ ಮೂರು ವರ್ಷದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನೋಟುಗಳ ಅಮಾನ್ಯಿàಕರಣ, ಸರ್ಜಿಕಲ್ ಸ್ಟ್ರೈಕ್ ಮತ್ತು ಜಿಎಸ್‌ಟಿಯಂತಹ ಅನೇಕ ಸಾಹಸಕಾರಿ ಹೆಜ್ಜೆಗಳನ್ನು ಇಟ್ಟಿದ್ದಾರೆ. ದೇಶದ ಬದಲಾವಣೆ, ಸಮಗ್ರತೆಗೆ ಒತ್ತು ನೀಡಿದ್ದಾರೆ. ಅನೇಕ ಜನೋಪಯೋಗಿ ಯೋಜನೆಗಳನ್ನು ತಂದರೂ ಇದುವರೆಗೆ ಕೇಂದ್ರ ಸರಕಾರದ ಮೇಲೆ ಒಂದೇ ಒಂದು ಆರೋಪ ಬರದಂತೆ ನೋಡಿಕೊಳ್ಳಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.