ರಾಜ್ಯಾದ್ಯಂತ ಜೆಡಿಎಸ್‌ ಪರ ಅಲೆ ಸೃಷ್ಟಿ


Team Udayavani, May 30, 2017, 1:00 PM IST

mys4.jpg

ಕೆ.ಆರ್‌.ನಗರ: ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ರಾಜ್ಯದ ಜನತೆಯ ಬೆಂಬಲದಿಂದ ಜೆಡಿಎಸ್‌ ಸಂಪೂರ್ಣ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದು ಸರ್ಕಾರ ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ರೈತರ ಸಾಲ ಸಂಪೂರ್ಣ ಮನ್ನಾ ಮಾಡಲಿದ್ದು ಯಾವುದೇ ಕಾರಣಕ್ಕೂ ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಕೆಟ್ಟ ನಿರ್ಧಾರ ಕೈಗೊಳ್ಳಬಾರದು ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಮನವಿ ಮಾಡಿದರು.

ತಾಲೂಕಿನ ಹಳಿಯೂರು ಗ್ರಾಮದಲ್ಲಿ ರಾಜ್ಯ ಪ್ರಾಚ್ಯವಸ್ತು ಇಲಾಖೆ ಮತ್ತು ಧರ್ಮಸ್ಥಳ ಧರ್ಮೋತ್ಥಾನ ಟ್ರಸ್ಟ್‌ ವತಿಯಿಂದ 25 ಲಕ್ಷ ರೂಗಳ ವೆಚ್ಚದಲ್ಲಿ ಜೀರ್ಣೋದ್ಧಾರ ಮಾಡಿರುವ ಸೋಮೇಶ್ವರ ದೇವಾಲಯ ಮತ್ತು 4 ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಿರುವ ಮಡಿವಾಳ ಮಾಚೀದೇವರ ಸಮುದಾಯ ಭವನ ಉದ್ಘಾಟಿಸಿ ಮಾತನಾಡಿದರು.

ರಾಜ್ಯಾದ್ಯಂತ ಜೆಡಿಎಸ್‌ ಪರವಾದ ಅಲೆ ಸೃಷ್ಟಿಯಾಗಿದ್ದು ಜನತೆ ಈಗಾಗಲೇ ಪಕ್ಷಕ್ಕೆ ಅಧಿಕಾರ ನೀಡಲು ನಿರ್ಧರಿಸಿದ್ದಾರೆ. ಹಾಗಾಗಿ ರೈತರು ಒಂದು ವರ್ಷ ಸಮಾಧಾನದಿಂದ ಇರಬೇಕು. ನಂತರ ನಿಮ್ಮ ಎಲ್ಲಾ ಸಮಸ್ಯೆ ಮತ್ತು ಸಂಕಷ್ಟಗಳನ್ನು ಬಗೆಹರಿಸುತ್ತೇನೆ. ವಿಪಕ್ಷಗಳು ಯಾವ ಷಡ್ಯಂತ್ರ ಮಾಡಿದರೂ ಪಕ್ಷಕ್ಕೆ  ಅಧಿಕಾರ ತಪ್ಪಿಸಲು ಸಾಧ್ಯವಿಲ್ಲ ಎಂದರು.

ಇದರ ಜತೆಗೆ ಕಳೆದ ಆರು ವರ್ಷಗಳಿಂದ ಕಬ್ಬು ಅರೆಯದೆ ಸ್ಥಗಿತಗೊಂಡಿರುವ ತಾಲೂಕಿನ ಚುಂಚನಕಟ್ಟೆ ಶ್ರೀರಾಮ ಸಹಕಾರ ಸಕ್ಕರೆ ಕಾರ್ಖಾನೆ ಪುನರಾರಂಭಕ್ಕೂ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕಾರ್ಯ ಯೋಜನೆ ಹಮ್ಮಿಕೊಳ್ಳಲಾಗುತ್ತದೆ ಎಂದು ಭರವಸೆ ನೀಡಿದರು.

ಶಾಸಕ ಸಾ.ರಾ.ಮಹೇಶ್‌ ಕಳೆದ ಎರಡು ಅವಧಿಯಲ್ಲಿ ಜನರ ಆಶೀರ್ವಾದ ಪಡೆದು ಆಯ್ಕೆಯಾಗಿ ಉತ್ತಮ ಕೆಲಸ ಮಾಡಿ ರಾಜ್ಯದಲಿಯೇ ಅತ್ಯುತ್ತಮ ಶಾಸಕ ಎನಿಸಿಕೊಂಡಿದ್ದಾರೆ. ಹಾಗಾಗಿ ಈ ಬಾರಿಯು ಜನತೆ ಆಶೀರ್ವಾದ ಮಾಡಿದರೆ ಅವರನ್ನು ಮಂತ್ರಿ ಮಾಡುವ ಹೊಣೆ ನನ್ನದು ಎಂದು ತಿಳಿಸಿದರು.

ಶಾಸಕ ಸಾ.ರಾ.ಮಹೇಶ್‌ ಮಾತನಾಡಿ, ಈ ಹಿಂದೆ ಎಚ್‌.ಡಿ.ಕುಮಾರಸ್ವಾಮಿ 20 ತಿಂಗಳ ಅವಧಿಯಲ್ಲಿ ನಡೆಸಿದ ಜನಪರ ಮತ್ತು ಬಡವರ ಪರವಾದ ಕಾರ್ಯಕ್ರಮಗಳು ಜನ ಮಾನಸದಲ್ಲಿ ನೆಲೆಸಿದ್ದು, ರಾಜ್ಯದ ಮತದಾರರು ಅವರಿಗೆ ಆಶೀರ್ವಾದ ಮಾಡಲು ತೀರ್ಮಾನಿಸಿದ್ದಾರೆ. ಮತ್ತೆ ಅವರು ಮುಖ್ಯಮಂತ್ರಿಯಾಗುವುದು ಖಚಿತ ಎಂಬ ಭರವಸೆ ವ್ಯಕ್ತಪಡಿಸಿದರು.

ತಾಲೂಕು ಜೆಡಿಎಸ್‌ ಅಧ್ಯಕ್ಷ ಚಂದ್ರಶೇಖರ್‌, ಮೈಮುಲ್‌ ಮಾಜಿ ಅಧ್ಯಕ್ಷ ಎ.ಟಿ.ಸೋಮಶೇಖರ್‌, ಜಿಪಂ ಮಾಜಿ ಅಧ್ಯಕ್ಷ ಸಿ.ಜೆ.ದ್ವಾರಕೀಶ್‌, ಸದಸ್ಯೆ ವೀಣಾಕೀರ್ತಿ, ಮಾಜಿ ಜಿಲ್ಲಾ ಪರಿಷತ್‌ ಸದಸ್ಯ ಡಿ.ಎಸ್‌.ಜಗದೀಶ್‌, ತಾಪಂ ಸದಸ್ಯೆ ಮಮತಾಮಹೇಶ್‌, ಎಪಿಎಂಸಿ ಅಧ್ಯಕ್ಷ ಕೃಷ್ಣೇಗೌಡ, ಹಳಿಯೂರು ಗ್ರಾ ಪಂ ಅಧ್ಯಕ್ಷೆ ರತ್ನಮ್ಮ,

-ಹೆಚ್‌.ಕೆ.ಭಾಸ್ಕರ್‌, ಸದಸ್ಯರಾದ ಕೃಷ್ಣಮೂರ್ತಿ, ಮಂಜುಳ, ರಿಜಾÌನಮುಸ್ತಾಕ್‌, ಸಹಕಾರ ಸಂಘದ ನಿರ್ದೇಶಕರಾದ ಹೆಚ್‌. ಆರ್‌.ಮಹೇಶ್‌, ಜವರಯ್ಯ, ಪ್ರಭಾಕರ್‌, ಮುಖಂಡರಾದ ಹೆಚ್‌.ಕೆ.ಮಧುಚಂದ್ರ, ಹೆಚ್‌.ಎಂ.ಮಹದೇವ್‌, ತಹಶೀಲ್ದಾರ್‌ ಜಿ.ಹೆಚ್‌.ನಾಗರಾಜು, ಇಒ ಸಿ.ಚಂದ್ರು, ಸಿಪಿಐ ಬಸವರಾಜು ಸೇರಿದಂತೆ ಇನ್ನಿತರರು ಇದ್ದರು.    

ಚುನಾವಣೆಯಲ್ಲಿ ಉತ್ತರ..
ಹೊಸೂರು: ಕಾಂಗ್ರೆಸ್‌ ಮತ್ತು ಬಿಜೆಪಿ ಪಕ್ಷಗಳು ನನ್ನ ಮೇಲೆ ನಿರಾಧಾರವಾಗಿರುವ ಭ್ರಷ್ಟಾಚಾರದ ಆರೋಪಗಳನ್ನು ಹೊರಿಸಿ ಜೈಲಿಗೆ ಕಳುಹಿಸುವ ಹುನ್ನಾರ ನಡೆಸುತ್ತಿದ್ದು ಮುಂದಿನ ಚುನಾವಣೆಯಲ್ಲಿ ರಾಜ್ಯದ ಜನತೆ ಈ ಕುತಂತ್ರಕ್ಕೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಹೇಳಿದರು.

ಹಳಿಯೂರು ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಯಾರೊಂದಿಗೂ ಚುನಾವಣಾ ಪೂರ್ವ ಮತ್ತು ಚುನಾವಣೋತ್ತರ ಮೈತ್ರಿ ಇಲ್ಲಾ. ಬಹುಮತ ಬರದಿದ್ದರೆ ಮತ್ತೆ ಚುನಾವಣೆ ಎದುರಿಸಲು ಸಿದ್ಧ ಎಂದರು.

ಉತ್ತರ ಕರ್ನಾಟದ ಭಾಗದಲ್ಲಿ ಪಕ್ಷ ಬಲಪಡಿಸುವ ದೃಷ್ಟಿಯಿಂದ ಅಲ್ಲಿ ಸ್ಪರ್ಧೆ ಮಾಡಬೇಕು ಎಂಬ ಒತ್ತಾಯ ಪಕ್ಷದ ಮುಖಂಡರು ಮತ್ತು ಕಾರ್ಯ ಕರ್ತರಿಂದ ಹೆಚ್ಚುತ್ತಿದ್ದು, ಈ ಬಗ್ಗೆ ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು. ಎರಡು ಕಡೆಗಳಲ್ಲಿಯೂ ಸ್ಪರ್ಧಿಸುವ ಬಗ್ಗೆಯೂ ಚಿಂತನೆ ನಡೆಸುತ್ತಿದ್ದೇನೆ ಎಂದು ತಮ್ಮ ಇಂಗಿತ ವ್ಯಕ್ತಪಡಿಸಿದರು.

ಮಾಜಿ ಸಂಸದ ಹೆಚ್‌.ವಿಶ್ವನಾಥ್‌ ಕಾಂಗ್ರೆಸ್‌ ಪಕ್ಷ ತೊರೆದು ಜೆಡಿಎಸ್‌ ಸೇರ್ಪಡೆಯಾಗುವ ವಿಚಾರದ ಚರ್ಚೆ ಪೂರ್ಣಗೊಂಡಿದ್ದು ಶೀಘ್ರ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಅವರಿಗೆ ಸೂಕ್ತ ಸ್ಥಾನಮಾನ ನೀಡುವ ಭರವಸೆ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

de

Guttigar: ಮಾವಿನಕಟ್ಟೆ; ಮರದಿಂದ ಬಿದ್ದು ವ್ಯಕ್ತಿ ಸಾವು

9

Kaup: ಬೀಚ್‌ನಲ್ಲಿನ್ನು ಪ್ಯಾರಾ ಮೋಟರಿಂಗ್‌

8(1

Udupi: ಸ್ಥಾಪಕರು ಜೀವನ ಪಾಠ ಮಾಡಿದ್ದ ಎಂಜಿಎಂ ಕಾಲೇಜಿಗೆ ಅಮೃತೋತ್ಸವ

7

Kollur: ದ್ವಿಪಥ ರಸ್ತೆ ನಿರ್ಮಾಣಕ್ಕೆ ಅಂಗಡಿ ಮುಂಗಟ್ಟು ತೆರವು ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.