ಕೌಶಲ್ಯವೃದ್ಧಿಗೆ ಹೆಸರು ನೋಂದಾಯಿಸಲು ಸಲಹೆ


Team Udayavani, May 30, 2017, 1:20 PM IST

hub1.jpg

ಧಾರವಾಡ: ಕೌಶಲ ಕರ್ನಾಟಕ ಕಾರ್ಯಕ್ರಮದಡಿ ನಿರುದ್ಯೋಗಿ ಯುವಜನರಿಗೆ ತರಬೇತಿ ಮತ್ತು ಉದ್ಯೋಗ ಒದಗಿಸುವ ಮಹತ್ವಾಕಾಂಕ್ಷೆಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಇದರ ಸದುಪಯೋಗವನ್ನು ಜಿಲ್ಲೆಯ ಯುವ ಸಮೂಹ ಪಡೆದುಕೊಳ್ಳಬೇಕು ಎಂದು ಡಿಸಿ ಎಸ್‌.ಬಿ. ಬೊಮ್ಮನಹಳ್ಳಿ ಹೇಳಿದರು. 

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ನಗರ ಮತ್ತು ಗ್ರಾಮೀಣ ಪ್ರದೇಶಗಳ ಎಲ್ಲ ಅರ್ಹ ಯುವಜನರನ್ನು ನೋಂದಣಿ ಮಾಡಿಸಲು ಎಲ್ಲ ಇಲಾಖೆಗಳ ಅಧಿಕಾರಿಗಳು, ಉಪನ್ಯಾಸಕರು, ಶಿಕ್ಷಕರು, ಯುವ ಸಂಘಟನೆಗಳು ಶ್ರಮಿಸಬೇಕು. ಯೋಜನೆಯಡಿ ನೋಂದಣಿ ಮಾಡಿಕೊಳ್ಳುವ ಅವಧಿಯನ್ನು ಜೂನ್‌ 6ರವರೆಗೆ ವಿಸ್ತರಿಸಲಾಗಿದೆ.

ಜಿಲ್ಲೆಯ ಯುವ ಸಮೂಹ ಈ ಸದಾವಕಾಶ ಬಳಸಿಕೊಳ್ಳಬೇಕು ಎಂದು ಹೇಳಿದರು. ಎಸ್ಸೆಸ್ಸೆಲ್ಸಿಯಿಂದ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ಐಟಿಐ, ಡಿಪೊÉàಮಾ ಸೇರಿದಂತೆ ಯಾವುದೇ ಕೋರ್ಸ್‌ ಗಳನ್ನು ಪೂರ್ಣಗೊಳಿಸಿದ ಎಲ್ಲ ಯುವಕ, ಯುವತಿಯರು ವೆಬ್‌ಸೈಟ್‌ ಮೂಲಕ ಇಲ್ಲವೇ ಎಲ್ಲ ಗ್ರಾಪಂ, ಪಾಲಿಕೆಯ ವಲಯ ಕಚೇರಿಗಳು, ತಹಶೀಲ್ದಾರ್‌ ಕಾರ್ಯಾಲಯಗಳಲ್ಲಿ, ಎಲ್ಲ ಪುರಸಭೆ, ಪಪಂಗಳಲ್ಲಿ ಜೂನ್‌ 6ರವರೆಗೂ ನೋಂದಣಿ ಮಾಡಿಕೊಳ್ಳಬಹುದು.

ಮೊಬೈಲ್‌ ಆ್ಯಪ್‌ ಮೂಲಕವೂ ನೋಂದಾಯಿಸಿಕೊಳ್ಳಬಹುದು. ನವನಗರದಲ್ಲಿರುವ ಉದ್ಯೋಗ ಮತ್ತು ತರಬೇತಿ ಇಲಾಖೆ ಕಚೇರಿಯಲ್ಲಿ ನಿರಂತರ ನೋಂದಣಿ ಕಾರ್ಯ ನಡೆಯುತ್ತಿರುತ್ತದೆ. ಈ ಯಾವುದಾದರೂ ಒಂದು ಸ್ಥಳದಲ್ಲಿ ಹೆಸರು, ವಿದ್ಯಾರ್ಹತೆ ಮತ್ತಿತರ ವಿವರಗಳನ್ನು ನೋಂದಾಯಿಸಿಕೊಳ್ಳಬೇಕು ಎಂದರು. 

2 ತಿಂಗಳಲ್ಲಿ ತರಬೇತಿ ಆರಂಭ: ನೋಂದಣಿ ಮಾಡಿಕೊಂಡ ಅಭ್ಯರ್ಥಿಗಳಿಗೆ ಎರಡು ತಿಂಗಳೊಳಗಾಗಿ ತರಬೇತಿ ನೀಡಲಾಗುವುದು. ಹೊಲಿಗೆ, ಕಟ್ಟಡ ನಿರ್ಮಾಣ, ಜವಳಿ, ಗುಡಿ ಕೈಗಾರಿಕೆ ಸೇರಿದಂತೆ ವಿವಿಧ 360 ಬಗೆಯ ಉದ್ಯೋಗಕೌಶಲಗಳಲ್ಲಿ ತರಬೇತಿ ನೀಡಲು ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಯು ಸರಕಾರಿ ಮತ್ತು ಖಾಸಗಿ ಸಂಸ್ಥೆಗಳನ್ನು ಗುರುತಿಸಿದೆ.

ಜಿಲ್ಲೆಯಲ್ಲಿ ಎಲ್ಲ ಗ್ರಾಪಂ ಪಿಡಿಒಗಳು, ಗ್ರಾಮ ಲೆಕ್ಕಾಧಿಕಾರಿಗಳು, ಮಹಾನಗರ ಪಾಲಿಕೆಯ ವಲಯ ಸಹಾಯಕ ಆಯುಕ್ತರು, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ, ಕಾಲೇಜು ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಆಸಕ್ತಿವಹಿಸಿ ಯುವ ಜನರನ್ನು ನೋಂದಾಯಿಸಲು ಕ್ರಮ ಕೈಗೊಳ್ಳಬೇಕು ಎಂದು ಡಿಸಿ ಸೂಚಿಸಿದರು. 

ಅಪರ ಜಿಲ್ಲಾಧಿಕಾರಿ ಇಬ್ರಾಹಿಂ ಮೈಗೂರ, ಪಾಲಿಕೆ ಆಯುಕ್ತ ಸಿದ್ದಲಿಂಗಯ್ಯ ಹಿರೇಮಠ, ಉಪವಿಭಾಗಾಧಿಕಾರಿ ಮಹೇಶ ಕರ್ಜಗಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಮೇಶ ಕೋನರಡ್ಡಿ ಸೇರಿದಂತೆ ಜಿಲ್ಲೆಯ ಎಲ್ಲ ತಹಶೀಲ್ದಾರರು, ತಾಪಂ ಇಒ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.   

ಟಾಪ್ ನ್ಯೂಸ್

Vijayendra (2)

MUDA; ಲೋಕಾಯುಕ್ತ ಕ್ಲೀನ್ ಚಿಟ್ ಕೊಟ್ಟರೂ ಸಿಎಂಗೆ ಗಂಡಾಂತರ ತಪ್ಪಿದ್ದಲ್ಲ: ವಿಜಯೇಂದ್ರ

Stock Market: ಟ್ರಂಪ್‌ ಗೆಲುವಿನ ಎಫೆಕ್ಟ್-ಬಾಂಬೆ ಷೇರುಪೇಟೆ ಸೂಚ್ಯಂಕ 1 ಸಾವಿರ ಅಂಕ ಏರಿಕೆ!

Stock Market: ಟ್ರಂಪ್‌ ಗೆಲುವಿನ ಎಫೆಕ್ಟ್-ಬಾಂಬೆ ಷೇರುಪೇಟೆ ಸೂಚ್ಯಂಕ 1 ಸಾವಿರ ಅಂಕ ಏರಿಕೆ!

lakshmi hebbalkar

Belagavi; ರುದ್ರಣ್ಣ ಯಡವಣ್ಣವರ ಪ್ರಕರಣ ನಿಷ್ಪಕ್ಷಪಾತ ತನಿಖೆಯಾಗಲಿ: ಹೆಬ್ಬಾಳಕರ್

10

BʼTown: ʼಪುಷ್ಪ-2ʼಗೆ ದಾರಿ ಬಿಟ್ಟ ವಿಕ್ಕಿ ಕೌಶಲ್‌ ʼಛಾವಾʼ; ರಿಲೀಸ್‌ ಡೇಟ್‌ ಮುಂದೂಡಿಕೆ?

7-

ಹುಂಡಿ ಒಡೆದು ನಗದು ದೋಚಿ ಪರಾರಿಯಾದ ದುಷ್ಕರ್ಮಿಗಳು; ಎರಡು ಪ್ರತ್ಯೇಕ ಘಟನೆ ದಾಖಲು

1-qwwqewq

Udupi; ಬಜೆ ಡ್ಯಾಂ ಬಳಿ ಶಿಲಾಯುಗದ ನಿಲಿಸುಗಲ್ಲು ಪತ್ತೆ

US Result: ಡೊನಾಲ್ಡ್‌ ಟ್ರಂಪ್  ಗೆ‌ ಮತ್ತೊಮ್ಮೆ‌ ಅಧ್ಯಕ್ಷ ಪಟ್ಟ; ಪ್ರಧಾನಿ ಮೋದಿ ಅಭಿನಂದನೆ

US Result: ಡೊನಾಲ್ಡ್‌ Trumpಗೆ‌ ಮತ್ತೊಮ್ಮೆ‌ ಅಧ್ಯಕ್ಷ ಪಟ್ಟ; ಪ್ರಧಾನಿ ಮೋದಿ ಅಭಿನಂದನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-muthalik

Hubli: ಮುಖ್ಯಮಂತ್ರಿ ನೀತಿ ಗೆಟ್ಟು ಲೋಕಾಯುಕ್ತ ತನಿಖೆಗೆ ಹೋಗುತ್ತಿರುವುದು ನಾಚಿಗೇಡಿನ ಸಂಗತಿ

Hubballi: ಮುಖ್ಯಮಂತ್ರಿ ಸಿದ್ದರಾಮಯ್ಯ ಪೇ ಡಬಲ್ ಸಿಎಂ ಆಗಿದ್ದಾರೆ… :ಬೊಮ್ಮಾಯಿ

Hubballi: ಮುಖ್ಯಮಂತ್ರಿ ಸಿದ್ದರಾಮಯ್ಯ ಪೇ ಡಬಲ್ ಸಿಎಂ ಆಗಿದ್ದಾರೆ… :ಬೊಮ್ಮಾಯಿ

hk-patil

MUDA; ಕಾಂಗ್ರೆಸ್ ಗೊಂದು, ಬಿಜೆಪಿಗೊಂದು‌ ಕಾನೂನು ಇದೆಯೇ?: ಎಚ್.ಕೆ.ಪಾಟೀಲ್

ಧಾರವಾಡ: ಅವಸಾನದತ್ತ ಶತಮಾನದ ಕೆಲಗೇರಿ ಕೆರೆ

ಧಾರವಾಡ: ಅವಸಾನದತ್ತ ಶತಮಾನದ ಕೆಲಗೇರಿ ಕೆರೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

10

Katpadi: ಅಂಚಿಗೆ ಬ್ಯಾರಿಕೇಡ್‌ ಇರಿಸಿ ರಿಬ್ಬನ್‌ ಅಳವಡಿಕೆ

Vijayendra (2)

MUDA; ಲೋಕಾಯುಕ್ತ ಕ್ಲೀನ್ ಚಿಟ್ ಕೊಟ್ಟರೂ ಸಿಎಂಗೆ ಗಂಡಾಂತರ ತಪ್ಪಿದ್ದಲ್ಲ: ವಿಜಯೇಂದ್ರ

8-

Kalaburagi: ಕಾರು- ಪಿಕಪ್ ಡಿಕ್ಕಿ: ಇಬ್ಬರು ಸಾವು

Stock Market: ಟ್ರಂಪ್‌ ಗೆಲುವಿನ ಎಫೆಕ್ಟ್-ಬಾಂಬೆ ಷೇರುಪೇಟೆ ಸೂಚ್ಯಂಕ 1 ಸಾವಿರ ಅಂಕ ಏರಿಕೆ!

Stock Market: ಟ್ರಂಪ್‌ ಗೆಲುವಿನ ಎಫೆಕ್ಟ್-ಬಾಂಬೆ ಷೇರುಪೇಟೆ ಸೂಚ್ಯಂಕ 1 ಸಾವಿರ ಅಂಕ ಏರಿಕೆ!

9

Padubidri: ಹೆಜಮಾಡಿ ಬಂದರು ಮೀನಮೇಷ ಎಣಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.